ಕರ್ನಾಟಕ ಹವಾಮಾನ: ಕಲಬುರಗಿ, ದಾವಣಗೆರೆ, ಕಾರವಾರ, ಮೈಸೂರಿನಲ್ಲಿ ಏರಿತು ಬಿಸಿಲು, ಉತ್ತರ ಕರ್ನಾಟಕದಲ್ಲಿ ಬೇಸಿಗೆ ಕಾವು
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ: ಕಲಬುರಗಿ, ದಾವಣಗೆರೆ, ಕಾರವಾರ, ಮೈಸೂರಿನಲ್ಲಿ ಏರಿತು ಬಿಸಿಲು, ಉತ್ತರ ಕರ್ನಾಟಕದಲ್ಲಿ ಬೇಸಿಗೆ ಕಾವು

ಕರ್ನಾಟಕ ಹವಾಮಾನ: ಕಲಬುರಗಿ, ದಾವಣಗೆರೆ, ಕಾರವಾರ, ಮೈಸೂರಿನಲ್ಲಿ ಏರಿತು ಬಿಸಿಲು, ಉತ್ತರ ಕರ್ನಾಟಕದಲ್ಲಿ ಬೇಸಿಗೆ ಕಾವು

Karnataka Weather: ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ಬಿಸಿಲಿನ ಕಾವು ಮತ್ತಷ್ಟು ಏರಿಕೆ ಕಂಡಿದೆ. ದಾವಣಗೆರೆಯಲ್ಲೂ ಕೂಡ ಬಿಸಿಲಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

ಕಲಬುರಗಿ ಸಹಿತ ಹಲವು ಕಡೆ ಬಿರುಬಿಸಿಲು ಶುರುವಾಗಿದೆ.
ಕಲಬುರಗಿ ಸಹಿತ ಹಲವು ಕಡೆ ಬಿರುಬಿಸಿಲು ಶುರುವಾಗಿದೆ.

Karnataka Weather: ಕರ್ನಾಟಕದಲ್ಲಿ ಬಿಸಿಲ ಪ್ರಮಾಣ ಫೆಬ್ರವರಿ ಮೂರನೇ ವಾರ ಎನ್ನುವ ಹೊತ್ತಿಗೆ ದಿನದಿಂದ ದಿನಕ್ಕೆ ಮತ್ತಷ್ಟು ಹೆಚ್ಚುತ್ತಲೇ ಇದೆ. ಈಗಾಗಲೇ ಎರಡು ವಾರದಿಂದ ಬಿಸಿಲ ವಾತಾವರಣ ಕಂಡಿರುವ ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯಲ್ಲಿ ಉಷ್ಣಾಂಶದ ಪ್ರಮಾಣದಲ್ಲಿ ಇನ್ನಷ್ಟು ಹೆಚ್ಚಿದೆ. ಕಲಬುರಗಿ ಜಿಲ್ಲೆಯಲ್ಲಿ ಉಷ್ಣಾಂಶದ ಪ್ರಮಾಣ 37 ಡಿಗ್ರಿ ಸೆಲ್ಸಿಯಸ್‌ ಅನ್ನು ದಾಟಿದೆ. ಇದರೊಟ್ಟಿಗೆ ಉತ್ತರ ಕರ್ನಾಟಕದ ಬಾಗಲಕೋಟೆ. ಧಾರವಾಡ ಸಹಿತ ಹಲವು ಕಡೆಗಳಲ್ಲೂ ಉಷ್ಣಾಂಶದಲ್ಲಿ ಹೆಚ್ಚಳ ಕಂಡಿದೆ. ಮಧ್ಯ ಕರ್ನಾಟಕದ ದಾವಣಗೆರೆಯಲ್ಲೂ ಬಿಸಿಲಿನ ಪ್ರಮಾಣದಲ್ಲಿ ಏರಿಕೆಯಾಗಿದ್ದು ಜನ ಈಗಲೇ ಬಿಸಿಲಿನಿಂದ ಬಳಲುವ ಸನ್ನಿವೇಶ ಎದುರಾಗಿದೆ. ಕರಾವಳಿ ಭಾಗದ ಕಾರವಾರದಲ್ಲೂ ಉಷ್ಣಾಂಶದ ಪ್ರಮಾಣ ಏರುಮುಖದಲ್ಲಿದೆ. ಬೆಂಗಳೂರಿನಲ್ಲಿ ಉಷ್ಣಾಂಶದ ಏರಿಳಿತ ಕಂಡು ಬಂದಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಹೇಗಿದೆ ಉಷ್ಣಾಂಶ ಪ್ರಮಾಣ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಮುಂದಿನ ನಾಲಕು ದಿನಗಳವರೆಗೆ ಕ್ರಮೇಣವಾಗಿ ಉಷ್ಣಾಂಶದ ಪ್ರಮಾಣವು 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆ ಕಾಣಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುನ್ಸೂಚನೆ ನೀಡಿದೆ.

ಗರಿಷ್ಠ ತಾಪಮಾವು ಕರಾವಳಿಯಲ್ಲಿ 33-36 ಡಿಗ್ರಿ ಸೆಲ್ಸಿಯಸ್‌ ವ್ಯಾಪ್ತಿ, ಉತ್ತರ ಒಳನಾಡಿನ ಬೆಳಗಾವಿ, ಬೀದರ್‌, ವಿಜಯಪುರ, ಬಾಗಲಕೋಟೆ, ಧಾರವಾಡ ಹಾಗೂ ಹಾವೇರಿಯಲ್ಲಿ 33-34 ಡಿಗ್ರಿ ಸೆಲ್ಸಿಯಸ್‌, ಗದಗ, ಕಲಬುರಗಿ, ರಾಯಚೂರಿನಲ್ಲಿ 35-38 ಡಿಗ್ರಿ ಸೆಲ್ಸಿಯಸ್‌, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಮಂಡ್ಯ, ಮಡಿಕೇರಿ, ಚಿಂತಾಮಣಿಯಲ್ಲಿ 30-33 ಡಿಗ್ರಿ ಸೆಲ್ಸಿಯಸ್‌, ಆಗುಂಬೆ, ದಾವಣಗೆರೆ, ಮೈಸೂರಿನಲ್ಲಿ 34-36 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.

ಕರಾವಳಿಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿಯಲ್ಲಿ ಸಾಮಾನ್ಯಕ್ಕಿಂತ ಅಧಿಕವಾಇದೆ. ದಾವಣಗೆರೆಯಲ್ಲೂ ಸಾಮಾನ್ಯಕ್ಕಿಂತ ಕೊಂಚ ಹೆಚ್ಚೇ ಬಿಸಿಲು ಕಂಡು ಬಂದಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಹಾಸನ, ಚಿಂತಾಮಣಿ ಮತ್ತು ಮೈಸೂರಿನಲ್ಲೂ ಸಾಮಾನ್ಯಕ್ಕಿಂತ ಹೆಚ್ಚಳವಾಗಿದ್ದರೆ ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನದ ಪ್ರಮಾಣವು ಸಾಮಾನ್ಯವಾಗಿಯೇ ಇತ್ತು.

ಕರ್ನಾಟಕದ ಕಲಬುರಗಿಯಲ್ಲಿ ಭಾನುವಾರದಂದು ಅತಿ ಹೆಚ್ಚು ಅಂದರೆ 37.6 ಡಿಗ್ರಿ ಸೆಲ್ಸಿಯಸ್‌ ಹಾಗೂ ಕಡಿಮೆ ಉಷ್ಣಾಂಶ ಚಾಮರಾಜನಗರ ಜಿಲ್ಲೆಯಲ್ಲಿ 13.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಬೆಂಗಳೂರು ಹವಾಮಾನ

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ ಎರಡು ದಿನಗಳ ಕಾಲ ಗರಿಷ್ಠ ಉಷ್ಣಾಂಶದಲ್ಲಿ ಏರಿಳಿತ ಕಾಣಲಿದೆ. ಮುಖ್ಯವಾಗಿ ಮೋಡವಿಲ್ಲದ ಶುಭ್ರ ಆಕಾಶ ಕಂಡು ಬರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ವೇಳೆ ಮಂಜಿನ ವಾತಾವರಣ ಮುಂದುವರಿಯಲಿದೆ. ಬೆಂಗಳೂರು ಭಾಗದಲ್ಲಿ ಸೋಮವಾರದಂದು ಗರಿಷ್ಠ ಉಷ್ಣಾಂಶದ ಪ್ರಮಾಣವು 33 ಡಿಗ್ರಿ ಸೆಲ್ಸಿಯಸ್‌ ದಾಖಲಾದರೆ, ಮಂಗಳವಾರದಂದು ಗರಿಷ್ಠ ಉಷ್ಣಾಂಶದ ಪ್ರಮಾಣವು 34 ಡಿಗ್ರಿ ಸೆಲ್ಸಿಯಸ್‌ ದಾಖಲಾಗಬಹುದು. ಎರಡೂ ದಿನವೂ ಕನಿಷ್ಠ ಉಷ್ಣಾಂಶದ ಪ್ರಮಾಣವು 17 ಡಿಗ್ರಿ ಸೆಲ್ಸಿಯಸ್‌ನಷ್ಟು ಇರಬಹುದು.

ಬೆಂಗಳೂರಿನಲ್ಲಿ ಭಾನುವಾರದಂದು ಉಷ್ಣಾಂಶದಲ್ಲಿ ಏರಿಳಿತವಿತ್ತು. ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣ ಪ್ರದೇಶದಲ್ಲಿ ಗರಿಷ್ಠ ಉಷ್ಣಾಂಶ ಡಿಗ್ರಿ 32 ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 16.5ಡಿಗ್ರಿ ಸೆಲ್ಸಿಯಸ್‌, ಕೆಂಪೇಗೌಡ ವಿಮಾನ ನಿಲ್ದಾಣ ಪ್ರದೇಶದಲ್ಲಿ ಗರಿಷ್ಠ ಉಷ್ಣಾಂಶ 32.6 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 17.4 ಡಿಗ್ರಿ ಸೆಲ್ಸಿಯಸ್‌, ಜಿಕೆವಿಕೆ ಪ್ರದೇಶದಲ್ಲಿ ಗರಿಷ್ಠ ಉಷ್ಣಾಂಶ 32.2ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 16.8 ಡಿಗ್ರಿ ಸೆಲ್ಸಿಯಸ್‌, ಬೆಂಗಳೂರು ನಗರ ಪ್ರದೇಶದಲ್ಲಿ ಗರಿಷ್ಠ ಉಷ್ಣಾಂಶ 32.8 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 18.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.
Whats_app_banner