ಕರ್ನಾಟಕ ಹವಾಮಾನ ಏಪ್ರಿಲ್ 15: ಶಿವಮೊಗ್ಗದ ಆಗುಂಬೆಯಲ್ಲಿ 8 ಸೆಂಟಿ ಮೀಟರ್ ಮಳೆ; ಇಂದು ರಾಜ್ಯಕ್ಕೆ ವರುಣನ ಮುನ್ಸೂಚನೆ ಇಲ್ಲ-karnataka weather today april 15 rains thunderstorms in agumbe shivamogga no rain forecast in state rmy ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಏಪ್ರಿಲ್ 15: ಶಿವಮೊಗ್ಗದ ಆಗುಂಬೆಯಲ್ಲಿ 8 ಸೆಂಟಿ ಮೀಟರ್ ಮಳೆ; ಇಂದು ರಾಜ್ಯಕ್ಕೆ ವರುಣನ ಮುನ್ಸೂಚನೆ ಇಲ್ಲ

ಕರ್ನಾಟಕ ಹವಾಮಾನ ಏಪ್ರಿಲ್ 15: ಶಿವಮೊಗ್ಗದ ಆಗುಂಬೆಯಲ್ಲಿ 8 ಸೆಂಟಿ ಮೀಟರ್ ಮಳೆ; ಇಂದು ರಾಜ್ಯಕ್ಕೆ ವರುಣನ ಮುನ್ಸೂಚನೆ ಇಲ್ಲ

Karnataka Weather: ಕರ್ನಾಟಕದ ಮಲೆನಾಡಿನ ಭಾಗದಲ್ಲಿ ಏಪ್ರಿಲ್ 14ರ ಭಾನುವಾರ ಭರ್ಜರಿ ಮಳೆಯಾಗಿದೆ. ಆಗುಂಬೆಯಲ್ಲಿ ಬರೋಬ್ಬರಿ 8 ಸೆಂಟಿ ಮೀಟರ್ ಮಳೆ ಸುರಿದಿದೆ. ಇವತ್ತಿನ ಹವಾಮಾನ ಹೇಗಿದೆ ಅನ್ನೋದನ್ನ ನೋಡೋಣ.

ಕರ್ನಾಟಕದ ಕೆಲವು ಭಾಗಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ
ಕರ್ನಾಟಕದ ಕೆಲವು ಭಾಗಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ (Hindustan Times)

ಬೆಂಗಳೂರು: ಕರ್ನಾಟಕದ (Karnataka Rains) ಅಲ್ಲಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದ್ದು, ತಾಪಮಾನದಲ್ಲಿ ಕೊಂಚ ಇಳಿಕೆಯಾಗಿದೆ. ಬಿಸಿಲಿಗೆ ತತ್ತರಿಸಿದ್ದ ಜನರಿಗೆ ಇದು ಕೊಂಚ ರಿಲೀಫ್ ನೀಡಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ಭಾರಿ ಮಳೆಯಾಗಿದೆ. ಇಲ್ಲಿ ಬರೋಬ್ಬರಿ 8 ಸೆಂಟಿ ಮೀಟರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ. ಕೊಪ್ಪಳ ಜಿಲ್ಲೆಯ ತಾವರಗೇರಾದಲ್ಲಿ 7, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಚಿಕ್ಕಮಗಳೂರಿನ ಜಯಪುರು, ಎನ್‌ಆರ್‌ ಪುರದಲ್ಲಿ ತಲಾ 4, ಕೊಪ್ಪಳದ ಬೇವೂರು, ರಾಯಚೂರಿನ ಮುದಗಲ್, ವಿಜಯಪುರದ ಇಂಡಿ, ಶಿವಮೊಗ್ಗ, ಶಿವಮೊಗ್ಗದ ಲಿಂಗನಮಕ್ಕಿ, ಆನವಟ್ಟಿಯಲ್ಲಿ ತಲಾ 3 ಸೆಂಟಿ ಮೀಟರ್ ಮಳೆ ಸುರಿದಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ವಿಜಯಪುರದ ದೇವರಹಿಪ್ಪರಗಿ, ಗದಗ ಜಿಲ್ಲೆಯ ರೋಣ, ಕಲಬುರಗಿಯ ಯಡ್ರಾಮಿ, ಧಾರವಾಡದ ಕಲಘಟಗಿ, ಚಿಕ್ಕಮಗಳೂರಿನ ತ್ಯಾಗರ್ತಿ, ಕಳಸ, ವಿಜಯನಗರದ ಹರಪನಹಳ್ಳಿ, ಬಳ್ಳಾರಿಯ ಕುಡತಿನಿ, ಚಿಕ್ಕಮಗಳೂರಿನ ಕೊಪ್ಪ, ತರೀಕೆರೆ, ಉಡುಪಿ ಜಿಲ್ಲೆಯ ಸಿದ್ದಾಪುರದಲ್ಲಿ ತಲಾ 2 ಸೆಂಟಿ ಮೀಟರ್ ಮಳೆಯಾಗಿದೆ.

ಮಳೆಯಾಗುತ್ತಿರುವುದರಿಂದ ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಗಣನೀಯವಾಗಿ ಇಳಿಕೆ ಕಂಡಿದೆ. ಆದರೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಗಳು ಆಗಿಲ್ಲ. ಕರಾವಳಿಯ ಕೆಲವು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಳವಾಗಿದೆ. ಅಂದರೆ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ಏರಿಕೆಯಾಗಿದೆ. ರಾಜ್ಯದಲ್ಲಿ ಅತಿ ಗರಿಷ್ಠ ಉಷ್ಣಾಂಶ 37.6 ಡಿಗ್ರಿ ಸೆಲ್ಸಿಯಸ್ ರಾಯಚೂರಿನಲ್ಲಿ ದಾಖಲಾಗಿದೆ.

ಕರ್ನಾಟಕದಲ್ಲಿ ಏಪ್ರಿಲ್ 15 ರಿಂದ 20ರವರೆಗಿನ ಮಳೆಯ ಮುನ್ಸೂಚನೆ

ಏಪ್ರಿಲ್ 15ರ ಸೋಮವಾರ ಕರ್ನಾಟಕದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಏಪ್ರಿಲ್ 16 ರ ಮಂಗಳವಾರ 6 ಜಿಲ್ಲೆಗಳಲ್ಲಿ ಎಂದು ಬೆಂಗಳೂರು ಹವಾಮಾನ ಕೇಂದ್ರ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಏಪ್ರಿಲ್ 17ರ ಬುಧವಾರ ಮಳೆಯ ಮುನ್ಸೂಚನೆ

ಮುಂದಿನ ಬುಧವಾರ 17 ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ

ಏಪ್ರಿಲ್ 18ರ ಗುರುವಾರ ಮಳೆಯ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗದಲ್ಲಿ ಮಳೆ ಬೀಳುವ ಮುನ್ಸೂಚನೆ ಇದೆ.

ಏಪ್ರಿಲ್ 19ರ ಶುಕ್ರವಾರ ಮಳೆಯ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಬೆಂಗಳೂರು ಹವಾಮಾನ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ಆಕಾಶ ಇರುತ್ತದೆ. ಗರಿಷ್ಠ 35 ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಬಹಳಷ್ಟು ಸಾಧ್ಯತೆ ಇರುತ್ತದೆ. ರಾಜಧಾನಿಗೆ ಮಳೆಯ ಮುನ್ಸೂಚನೆ ಇಲ್ಲ. ಸಾಮಾನ್ಯವಾಗಿ ಬಿಸಿಲಿನ ವಾತಾವರಣ ಇರುತ್ತದೆ.