ಕರ್ನಾಟಕ ಹವಾಮಾನ ಏಪ್ರಿಲ್ 28: ತಗ್ಗಿದ ಮಳೆ, ಮುಂದುವರಿದ ತಾಪಮಾನ; ಕೋಲಾರ, ಚಿಕ್ಕಬಳ್ಳಾಪುರ ಸೇರಿ 15 ಜಿಲ್ಲೆಗಳಿಗೆ ಶಾಖದ ಅಲೆಯ ಎಚ್ಚರಿಕೆ-karnataka weather today april 28 reduced rain rising temperature heat wave warning for 15 districts rmy ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಏಪ್ರಿಲ್ 28: ತಗ್ಗಿದ ಮಳೆ, ಮುಂದುವರಿದ ತಾಪಮಾನ; ಕೋಲಾರ, ಚಿಕ್ಕಬಳ್ಳಾಪುರ ಸೇರಿ 15 ಜಿಲ್ಲೆಗಳಿಗೆ ಶಾಖದ ಅಲೆಯ ಎಚ್ಚರಿಕೆ

ಕರ್ನಾಟಕ ಹವಾಮಾನ ಏಪ್ರಿಲ್ 28: ತಗ್ಗಿದ ಮಳೆ, ಮುಂದುವರಿದ ತಾಪಮಾನ; ಕೋಲಾರ, ಚಿಕ್ಕಬಳ್ಳಾಪುರ ಸೇರಿ 15 ಜಿಲ್ಲೆಗಳಿಗೆ ಶಾಖದ ಅಲೆಯ ಎಚ್ಚರಿಕೆ

ಇಂದು (ಏಪ್ರಿಲ್ 28, ಭಾನುವಾರ) ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆ ಹೆಚ್ಚಾಗುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದು, ಮತ್ತೆ ಬಿಸಿಯ ವಾತಾವರಣ ಮುಂದುವರಿದೆ. ಏಪ್ರಿಲ್ 28ರ ಭಾನುವಾರ 15 ಜಿಲ್ಲೆಗಳಿಗೆ ಶಾಖದ ಅಲೆಗಳ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದು, ಮತ್ತೆ ಬಿಸಿಯ ವಾತಾವರಣ ಮುಂದುವರಿದೆ. ಏಪ್ರಿಲ್ 28ರ ಭಾನುವಾರ 15 ಜಿಲ್ಲೆಗಳಿಗೆ ಶಾಖದ ಅಲೆಗಳ ಸಾಧ್ಯತೆ ಇದೆ.

ಬೆಂಗಳೂರು: ಕಳೆದೊಂದು ವಾರದಲ್ಲಿ ಕರ್ನಾಟಕದ (Karnataka Weather) ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿತ್ತು. ಇದೇ ರೀತಿಯ ವಾತಾವರಣ ಮುಂದುವರಿಯುತ್ತೆ ಎಂದು ಜನರು ನಿರೀಕ್ಷೆ ಮಾಡಿದ್ದರು. ಆದರೆ ರಾಜಧಾನಿ ಬೆಂಗಳೂರು (Bengaluru Weather) ಸೇರಿದಂತೆ ರಾಜ್ಯದಲ್ಲಿ ಬಹುತೇಕ ಕಡೆ ರಣ ಬಿಸಿಲು ಜೋರಾಗಿದೆ. ತಾಪಮಾನ ಹೆಚ್ಚಾಗುತ್ತಿದ್ದು, ಕೆಲವೊಂದು ಜಿಲ್ಲೆಗಳಲ್ಲಿ ಇದೇ ವಾತಾವರಣ ಇಂದಿನಿಂದ (ಏಪ್ರಿಲ್ 28, ಭಾನುವಾರ) ಮೇ 1 (ಬುಧವಾರ) ರವರೆಗೆ ಇರಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತನ್ನ ದೈನಂದಿ ವರದಿಯಲ್ಲಿ ತಿಳಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇವತ್ತು ರಾಜ್ಯಾದಲ್ಲಿ ಎಲ್ಲೂ ಕಡೂ ಮಳೆಯಾಗುವ ಮುನ್ಸೂಚನೆ ಇಲ್ಲ. ಒಣಹವೆ ಮುಂದುವರಿಯಲಿದೆ. ಏಪ್ರಿಲ್ 30 ರವರೆಗೆ ಇದೇ ಪರಿಸ್ಥಿತಿ ಇರಲಿದೆ. ಆದರೆ ಮೇ 1 ರಂದು ಕೆಲವು ಜಿಲ್ಲೆಗಳಿಗೆ ಮಳೆಯಾಗುವ ಮುನ್ಸೂಚನೆ ಇದೆ. ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, ಕೊಡಗು, ಮೈಸೂರು, ಬೆಳಗಾವಿ, ಬಾಗಲಕೋಟೆ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಮೇ 1ರ ಬುಧವಾರ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಇತರೆ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ.

ಕಳೆದ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರ್ನಾಟಕದ ಬಹುತೇಕ ಕಡೆ ಮಳೆಯಾಗದ ಕಾರಣ ವಾತಾವರಣದಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ. ದಕ್ಷಿಣ ಒಳನಾಡಿನ ಕೆಲವೊಂದು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಉಷ್ಣಾಂಶ ಹೆಚ್ಚಾಗಿದೆ. 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಹೆಚ್ಚಾಗಿದೆ. ಇಡೀ ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 42.4 ಡಿಗ್ರಿ ಸೆಲ್ಸಿಯಸ್ ಬಿಸಿಲ ನಾಡು ಕಲಬುರಗಿಯಲ್ಲಿ ದಾಖಲಾಗಿದೆ.

ಮೇ 1 ರಿಂದ 4ರವರೆಗೆ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

  • ಏಪ್ರಿಲ್ 1ರ ಬುಧವಾರ ಬೀದರ್ ಕಲಬುರ್ಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, ಕೊಡಗು, ಮೈಸೂರು, ಬೆಳಗಾವಿ, ಬಾಗಲಕೋಟೆ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
  • ಮೇ 2ರ ಗುರುವಾರ ರಾಯಚೂರು, ಚಿಕ್ಕಮಗಳೂರು, ಕೊಡಗು, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆ ಇದೆ.
  • ಮೇ 3ರ ಶುಕ್ರವಾರ ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
  • ಮೇ 4ರ ಶನಿವಾರ ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಿಗೆ ವರುಣ ಕೃಪೆ ತೋರುವ ಸಾಧ್ಯತೆ ಇದೆ.

ಇದನ್ನೂ ಓದಿ: ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಏಪ್ರಿಲ್ 28 ರಿಂದ ಮೇ 1ರವರೆಗೆ ಶಾಖದ ಅಲೆ ಸಾಧ್ಯತೆಯ ಜಿಲ್ಲೆಗಳು

  1. ಏಪ್ರಿಲ್ 28ರ ಭಾನುವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.
  2. ಏಪ್ರಿಲ್ 29ರ ಸೋಮವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಬಾಗಲಕೋಟೆ, ಬೆಳಗಾವಿ, ಬೀದರ್, ಮೈಸೂರು, ಮಂಡ್ಯ, ದಾವಣಗೆರೆ ಸೇರಿ 20 ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

3. ಏಪ್ರಿಲ್ 30ರ ಮಂಗಳವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಬಿಸಿ ಗಾಳಿ ಹೆಚ್ಚಾಗುವ ಮುನ್ಸೂಚನೆ ಇದೆ

4. ಮೇ 1 ರಂದು ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ನಿರೀಕ್ಷೆ ಇದೆ.