ಕರ್ನಾಟಕ ಹವಾಮಾನ ಏಪ್ರಿಲ್ 7: ಕಲಬುರ್ಗಿಯಲ್ಲಿ ಗರಿಷ್ಠ 43.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು; ಈ 2 ಜಿಲ್ಲೆಗಳಲ್ಲಿ ಇಂದು ಮಳೆಯ ಮುನ್ಸೂಚನೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಏಪ್ರಿಲ್ 7: ಕಲಬುರ್ಗಿಯಲ್ಲಿ ಗರಿಷ್ಠ 43.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು; ಈ 2 ಜಿಲ್ಲೆಗಳಲ್ಲಿ ಇಂದು ಮಳೆಯ ಮುನ್ಸೂಚನೆ

ಕರ್ನಾಟಕ ಹವಾಮಾನ ಏಪ್ರಿಲ್ 7: ಕಲಬುರ್ಗಿಯಲ್ಲಿ ಗರಿಷ್ಠ 43.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು; ಈ 2 ಜಿಲ್ಲೆಗಳಲ್ಲಿ ಇಂದು ಮಳೆಯ ಮುನ್ಸೂಚನೆ

ಏಪ್ರಿಲ್ 7ರ ಭಾನುವಾರ ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ನಾಳೆ ಈ ಐದು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ಇವತ್ತಿನ ಹವಾಮಾನ ವರದಿ ಇಲ್ಲಿದೆ.

ಏಪ್ರಿಲ್ 7, ಭಾನುವಾರ ಕರ್ನಾಟಕದ ಹವಾಮಾನ ಹೇಗಿದೆ ಎಂಬುದನ್ನು ತಿಳಿಯಿರಿ.
ಏಪ್ರಿಲ್ 7, ಭಾನುವಾರ ಕರ್ನಾಟಕದ ಹವಾಮಾನ ಹೇಗಿದೆ ಎಂಬುದನ್ನು ತಿಳಿಯಿರಿ.

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ರಣ ಬಿಸಿಲು (Heat Wave) ಹೆಚ್ಚಾಗುತ್ತಲೇ ಜನ ಸಾಮಾನ್ಯರು ಹೈರಾಣ ಆಗುತ್ತಿದ್ದಾರೆ. ಬಿಸಿಯ ವಾತಾವರಣವನ್ನು (Heat Weather) ಎದುರಿಸುತ್ತಿರುವ ನಡುವೆ ಬೆಂಗಳೂರು ಹವಾಮಾನ ಕೇಂದ್ರ ಜನತೆಗೆ ಸಿಹಿ ಸುದ್ದಿ ನೀಡಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕೈದು ದಿನಗಳ ಕಾಲ ಮಳೆಯಾಗಲಿದೆ (Karnataka Rains) ಎಂದು ಹೇಳಿದೆ. ಇಂದು (ಏಪ್ರಿಲ್ 7, ಭಾನುವಾರ) ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಂಭವ ಇದೆ ಎಂದು ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ. ಉಳಿದಂತೆ ಇತರೆ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಶನಿವಾರ (ಏಪ್ರಿಲ್ 5) ಸಂಜೆ 7.45ಕ್ಕೆ ದಾಖಲಾಗಿರುವ ವರದಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಕಂಡು ಬಂದಿಲ್ಲ. ಬಿಸಿಯ ವಾತಾವರಣವೇ ಮುಂದುವರಿದಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಾತ್ರ ಉಷ್ಣಾಂಶ ಸಾಮಾನ್ಯಕ್ಕಿಂತ ಅತಿ ಗಮನಾರ್ಹವಾಗಿ ಹೆಚ್ಚಳವಾಗಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆಯಾಗಿದೆ. ಬಿಸಿಲ ನಾಡು ಕಲಬುರಗಿಯಲ್ಲಿ ನಿನ್ನೆ ದಾಖಲೆಯ 43.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ತಾಪಮಾನದ ಮುನ್ಸೂಚನೆ

ಮುಂದಿನ 2 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನವು ಮುಂದಿನ 2 ದಿನಗಳಲ್ಲಿ ಕರ್ನಾಟಕದ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಸುಮಾರು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ನಂತರದ 3 ದಿನಗಳ ಕಾಲ ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಕ್ರಮೇಣ 2 ಡಿಗ್ರಿ ಸಲ್ಸಿಯಸ್ ಇಳಿಕೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ರಾಯಚೂರು ಹಾಗೂ ಕಲಬುರರ್ಗಿ ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ವಾತಾವರಣವು ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಏಪ್ರಿಲ್ 7 ರಿಂದ 12 ವರೆಗೆ ಕರ್ನಾಟಕದಲ್ಲಿ ಮಳೆಯ ಮುನ್ಸೂಚನೆ

ಏಪ್ರಿಲ್ 7ರ ಭಾನುವಾರ: ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಏಪ್ರಿಲ್ 8ರ ಸೋಮವಾರ: ಬೀದರ್, ಕಲಬುರ್ಗಿ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಏಪ್ರಿಲ್ 9ರ ಮಂಗಳವಾರ: ದಕ್ಷಿಣ ಕನ್ನಡ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ ಸಂಭವ.

ಏಪ್ರಿಲ್ 10ರ ಬುಧವಾರ: ದಕ್ಷಿಣ ಕನ್ನಡ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ

ಏಪ್ರಿಲ್ 11ರ ಗುರುವಾರ: ದಕ್ಷಿಣ ಕನ್ನಡ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ, ಚಿಕ್ಕಮಗಳೂರು, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಏಪ್ರಿಲ್ 12ರ ಶುಕ್ರವಾರ: ದಕ್ಷಿಣ ಕನ್ನಡ, ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.

Whats_app_banner