ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಏಪ್ರಿಲ್ 8: ಕಲಬುರ್ಗಿಯಲ್ಲಿ ಗರಿಷ್ಠ 43.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು; ಈ 15 ಜಿಲ್ಲೆಗಳಲ್ಲಿ ಶಾಖದ ಅಲೆ ಎಚ್ಚರಿಕೆ

ಕರ್ನಾಟಕ ಹವಾಮಾನ ಏಪ್ರಿಲ್ 8: ಕಲಬುರ್ಗಿಯಲ್ಲಿ ಗರಿಷ್ಠ 43.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು; ಈ 15 ಜಿಲ್ಲೆಗಳಲ್ಲಿ ಶಾಖದ ಅಲೆ ಎಚ್ಚರಿಕೆ

ಬೆಂಗಳೂರಿನಲ್ಲಿ 37.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಕಳೆದ ಎಂಟು ವರ್ಷಗಳಲ್ಲಿ ದಾಖಲಾದ ಗರಿಷ್ಠ ಉಷ್ಣಾಂಶವಾಗಿದೆ. ಏಪ್ರಿಲ್ 8ರ ಕರ್ನಾಟಕದ ಹವಾಮಾನ ತಿಳಿಯಿರಿ.

ಏಪ್ರಿಲ್ 8ರ ಸೋಮವಾರ ಕರ್ನಾಟಕದ ಹವಾಮಾನದ ಮಾಹಿತಿ.
ಏಪ್ರಿಲ್ 8ರ ಸೋಮವಾರ ಕರ್ನಾಟಕದ ಹವಾಮಾನದ ಮಾಹಿತಿ.

ಕರ್ನಾಟಕದ (Karnataka Weather) ಹಲವಾರು ಭಾಗಗಳಲ್ಲಿ ತೀವ್ರ ಬಿಸಿ (Heat Wave) ವಾತಾವರಣವಿದೆ, ಅದರಲ್ಲೂ ಬಿಸಿಲ ನಾಡು ಕಲಬುರಗಿ ಜಿಲ್ಲೆಯಲ್ಲಿ ಭಾನುವಾರ (ಏಪ್ರಿಲ್ 7) ಇಡೀ ರಾಜ್ಯದಲ್ಲಿ ಅತಿ ಗರಿಷ್ಠ 43.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ಕಳೆದ ಎಂಟು ವರ್ಷಗಳಲ್ಲಿ ದಾಖಲಾದ ಗರಿಷ್ಠ ತಾಪಮಾನವಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮಾಹಿತಿ ನೀಡಿದೆ. ಭಾನುವಾರ ರಾತ್ರಿ 7.45ರ ವರೆಗೆ ದಾಖಲಾಗಿರುವ ವರದಿಯ ಪ್ರಕಾರ ನಾಲ್ಕು ಜಿಲ್ಲೆಗಳಲ್ಲಿ ಬಿಸಿಯ ವಾತಾವರಣ ತೀವ್ರಗೊಂಡಿದೆ. ರಾಯಚೂರು (41.8 ಡಿಗ್ರಿ ಸೆಲ್ಸಿಯಸ್), ಬಾಗಲಕೋಟೆ (41.5 ಡಿಗ್ರಿ ಸೆಲ್ಸಿಯಸ್), ಕೊಪ್ಪಳ (41.3 ಡಿಗ್ರಿ ಸೆಲ್ಸಿಯಸ್) ಮತ್ತು ವಿಜಯಪುರ (41 ಡಿಗ್ರಿ ಸೆಲ್ಸಿಯಸ್) ಜಿಲ್ಲೆಗಳಲ್ಲಿ ತೀವ್ರ ಬಿಸಿ ವಾತಾವರಣವಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

ಹವಾಮಾನ ಇಲಾಖೆ ಕೂಡ ರಾಜ್ಯದಲ್ಲಿ ಒಣ ಹವೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಂಗಳವಾರ ಲಘು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಎರಡು ದಿನಗಳ ಕಾಲ (ಏಪ್ರಿಲ್ 8 ಮತ್ತು 9) ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪಶ್ಚಿಮ ಭಾಗಗಳಲ್ಲಿ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಎರಡು ದಿನಗಳಲ್ಲಿ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳು ಮತ್ತು ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆಗಳು, ರಾಮನಗರ, ಶಿವಮೊಗ್ಗ, ದಾವಣಗೆರೆ, ಮೈಸೂರು, ಮಂಡ್ಯ, ಹಾಸನ ಮತ್ತು ದಕ್ಷಿಣ ಒಳನಾಡಿನ ತುಮಕೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್ ನಿಂದ 4 ಡಿಗ್ರಿ ಸೆಲ್ಸಿಯಸ್ ವರೆಗೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ಎರಡು ದಿನಗಳಲ್ಲಿ ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ರಾಯಚೂರು ಮತ್ತು ಕಲ್ಬುರ್ಗಿ ಜಿಲ್ಲೆಗಳಲ್ಲಿ ರಾತ್ರಿ ಬೆಚ್ಚಗಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 24 ಗಂಟೆಗಳಲ್ಲಿ (ಏಪ್ರಿಲ್ 8, ಸೋಮವಾರ) ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಗದಗ, ಕಲಬುರಗಿ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಸನ್ ಸ್ಟ್ರೋಕ್ ವಾರ್ಡ್‌ಗಳನ್ನ ತೆರೆದ ಸರ್ಕಾರ

ಬೆಂಗಳೂರಿನ ಬಿಸಿಲಿನ ತಾಪವನ್ನು ಗಮನದಲ್ಲಿಟ್ಟುಕೊಂಡು ಕೆ.ಸಿ.ಜನರಲ್ ವಾರ್ಡ್ ಸೇರಿದಂತೆ ಹೆಚ್ಚಿನ ಆಸ್ಪತ್ರೆಗಳಲ್ಲಿ ಸನ್ ಸ್ಟ್ರೋಕ್ ವಾರ್ಡ್‌ಗಳನ್ನು ತೆರೆಯಲಾಗಿದೆ. ತಲೆಯನ್ನು ಮುಚ್ಚಿಕೊಳ್ಳದೆ ಹೊರಗೆ ಹೋಗದಂತೆ ಮತ್ತು ಶಾಖದ ಹೊಡೆತಗಳನ್ನು ತಪ್ಪಿಸಲು ತಮ್ಮನ್ನು ಸರಿಯಾಗಿ ಹೈಡ್ರೇಟ್ ಮಾಡಿಕೊಳ್ಳುವಂತೆ ವೈದ್ಯರು ಜನರಿಗೆ ಸಲಹೆ ನೀಡಿದ್ದಾರೆ.

ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಅತಿ ಗಮನಾರ್ಹವಾಗಿ ಉಷ್ಣಾಂಶ ಹೆಚ್ಚಾಗಿದೆ. ಅಂದರೆ 5.1 ಡಿಗ್ರಿ ಸೆಲ್ಸಿಯಸ್‌ ಮತ್ತು ಅದಕ್ಕಿಂತ ಹೆಚ್ಚು. ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಆದರೆ ಕರಾವಳಿಯ ಹಲವು ಕಡೆಗಳಲ್ಲಿ ಬಿಸಿ ಸಾಮಾನ್ಯಕ್ಕಿಂತ ಕಡಿಮೆಯಾಗಿರುವುದು ಗಮನಾರ್ಹ ಅಂಶವಾಗಿದೆ.

IPL_Entry_Point

ವಿಭಾಗ