Karnataka Weather: ಕರಾವಳಿ ಭಾಗದಲ್ಲಿ ಹೆಚ್ಚಿತು ಬೇಸಿಗೆ ಕಾವು, ಮಲೆನಾಡಿನ ಆಗುಂಬೆಯಲ್ಲೂ ಬಿಸಿಲ ಅನುಭವ, ಬೆಂಗಳೂರು ಹವಾಮಾನ ಹೇಗಿದೆ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Weather: ಕರಾವಳಿ ಭಾಗದಲ್ಲಿ ಹೆಚ್ಚಿತು ಬೇಸಿಗೆ ಕಾವು, ಮಲೆನಾಡಿನ ಆಗುಂಬೆಯಲ್ಲೂ ಬಿಸಿಲ ಅನುಭವ, ಬೆಂಗಳೂರು ಹವಾಮಾನ ಹೇಗಿದೆ

Karnataka Weather: ಕರಾವಳಿ ಭಾಗದಲ್ಲಿ ಹೆಚ್ಚಿತು ಬೇಸಿಗೆ ಕಾವು, ಮಲೆನಾಡಿನ ಆಗುಂಬೆಯಲ್ಲೂ ಬಿಸಿಲ ಅನುಭವ, ಬೆಂಗಳೂರು ಹವಾಮಾನ ಹೇಗಿದೆ

Karnataka Weather: ಕರ್ನಾಟಕದ ಕರಾವಳಿ ಭಾಗ, ಮಲೆನಾಡು ಪ್ರದೇಶದಲ್ಲೂ ನಿಧಾನವಾಗಿ ಬಿಸಿಲಿನ ಪ್ರಮಾಣದಲ್ಲಿ ಹೆಚ್ಚಳ ಕಂಡು ಬರುತ್ತಿದೆ.

ಕರ್ನಾಟಕದ ಕರಾವಳಿ ಭಾಗದಲ್ಲೂ ಬಿಸಿಲಿನ ಝಳ ಹೆಚ್ಚುತ್ತಿದೆ
ಕರ್ನಾಟಕದ ಕರಾವಳಿ ಭಾಗದಲ್ಲೂ ಬಿಸಿಲಿನ ಝಳ ಹೆಚ್ಚುತ್ತಿದೆ

Karnataka Weather: ಫೆಬ್ರವರಿ ತಿಂಗಳ ಎರಡನೇ ವಾರದ ಹೊತ್ತಿಗೆ ಉತ್ತರ ಕರ್ನಾಟಕದ ಜತೆಯಲ್ಲಿ ಕರಾವಳಿ ಭಾಗದಲ್ಲೂ ದಿನದಿಂದ ದಿನಕ್ಕೆ ಉಷ್ಣಾಂಶದ ಪ್ರಮಾಣ ಏರಿಕೆಯಾಗುತ್ತಿದೆ. ಇದರಿಂದ ಬಿಸಿಲ ಪ್ರಮಾಣದಲ್ಲಿ ಗಣನೀಯವಾಗಿಯೇ ಏರಿಕೆ ಕಂಡು ಬರುತ್ತಿದೆ. ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ನಡುವೆಯೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯ ಕರಾವಳಿ ಭಾಗದಲ್ಲಿ ಬಿಸಿಲಿನ ಕಾವೇರಿ ಹೆಚ್ಚುತ್ತಿದೆ. ಮಂಗಳವಾರದಂದು ಈ ಅನುಭವ ಆಗಿದೆ. ಅದೇ ರೀತಿ ಮಲೆನಾಡಿನ ಆಗುಂಬೆಯಲ್ಲೂ ಕೂಡ ಬಿಸಿಲು ಹೆಚ್ಚಾಗಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾತ್ರ ಬೆಳಗಿನ ಹೊತ್ತಿನಲ್ಲಿ ತಣ್ಣನೆಯ ವಾತಾವರಣ ಮುಂದುವರಿದಿದ್ದರೆ, ಮಧ್ಯಾಹ್ನದ ಹೊತ್ತಿಗೆ ಸಾಧಾರಣ ಉಷ್ಣಾಂಶವೇ ಕಂಡು ಬರುತ್ತಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಹವಾಮಾನ

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಮೋಡವಿಲ್ಲದ ಶುಭ್ರ ಆಕಾಶವಿಲಿದೆ. ಕೆಲವು ಭಾಗಗಳಲ್ಲಿ ಬೆಳಗಿನ ಜಾವವೇ ದಟ್ಟ ಮಂಜು ಆವರಿಸಿಕೊಳ್ಳಲಿದೆ. ಇನ್ನು ಕೆವು ಕಡೆಗಳಲ್ಲಿ ಸಾಧಾರಣ ಮಂಜಿನ ವಾತಾವರಣ ಕಂಡು ಬರಬಹುದು. ಈ ಭಾಗದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು16 ಡಿಗ್ರಿ ಸೆಲ್ಸಿಯಸ್‌ ದಾಖಲಾಗಬಹುದು.

ಎಲ್ಲೆಲ್ಲಿ ಉಷ್ಣಾಂಶ ಹೇಗಿದೆ

ಕರ್ನಾಟಕದ ಹಲವು ಕಡೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶದ ಪ್ರಮಾಣ ಹೀಗಿದೆ.

ಬೆಳಗಾವಿಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ 18 ಉಷ್ಣಾಂಶ ಡಿಗ್ರಿ ಸೆಲ್ಸಿಯಸ್‌

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಗರಿಷ್ಠ33 ಉಷ್ಣಾಂಶ ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 15.4 ಡಿಗ್ರಿ ಸೆಲ್ಸಿಯಸ್‌

ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 35.4 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 21.8 ಡಿಗ್ರಿ ಸೆಲ್ಸಿಯಸ್‌

ಧಾರವಾಡದಲ್ಲಿ ಗರಿಷ್ಠ ಉಷ್ಣಾಂಶ 32.8 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 15.8 ಡಿಗ್ರಿ ಸೆಲ್ಸಿಯಸ್‌

ಬೀದರ್‌ನಲ್ಲಿ ಗರಿಷ್ಠ ಉಷ್ಣಾಂಶ 33.0 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 18.0 ಡಿಗ್ರಿ ಸೆಲ್ಸಿಯಸ್‌

ವಿಜಯಪುರದಲ್ಲಿ ಗರಿಷ್ಠ ಉಷ್ಣಾಂಶ 33.2 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 17.6 ಡಿಗ್ರಿ ಸೆಲ್ಸಿಯಸ್‌

ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌

ಹಾವೇರಿಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್‌

ಗದಗದಲ್ಲಿ ಗರಿಷ್ಠ ಉಷ್ಣಾಂಶ 33.2 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 17.6 ಡಿಗ್ರಿ ಸೆಲ್ಸಿಯಸ್‌

ಕೊಪ್ಪಳದಲ್ಲಿ ಗರಿಷ್ಠ ಉಷ್ಣಾಂಶ 33.7 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 19.1 ಡಿಗ್ರಿ ಸೆಲ್ಸಿಯಸ್‌

ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 36.6 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 20.7 ಡಿಗ್ರಿ ಸೆಲ್ಸಿಯಸ್‌

ಹೊನ್ನಾವರದಲ್ಲಿ ಗರಿಷ್ಠ ಉಷ್ಣಾಂಶ 34.6 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 18.5 ಡಿಗ್ರಿ ಸೆಲ್ಸಿಯಸ್‌

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗರಿಷ್ಠ ಉಷ್ಣಾಂಶ 34.6 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 21.9 ಡಿಗ್ರಿ ಸೆಲ್ಸಿಯಸ್‌

ಪಣಂಬೂರಿನಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌

ಶಿವಮೊಗ್ಗದ ಆಗುಂಬೆಯಲ್ಲಿ ಗರಿಷ್ಠ ಉಷ್ಣಾಂಶ 34. ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 13.6 ಡಿಗ್ರಿ ಸೆಲ್ಸಿಯಸ್‌

ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 12.5 ಡಿಗ್ರಿ ಸೆಲ್ಸಿಯಸ್‌

ಚಿತ್ರದುರ್ಗದಲ್ಲಿ ಗರಿಷ್ಠ ಉಷ್ಣಾಂಶ 31.6 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್‌

ದಾವಣಗೆರೆಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್‌

ಹಾಸನದಲ್ಲಿ ಗರಿಷ್ಠ ಉಷ್ಣಾಂಶ 30.9 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 12.1 ಡಿಗ್ರಿ ಸೆಲ್ಸಿಯಸ್‌

ಚಿಂತಾಮಣಿಯಲ್ಲಿ ಗರಿಷ್ಠ ಉಷ್ಣಾಂಶ 29.6 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 13.1 ಡಿಗ್ರಿ ಸೆಲ್ಸಿಯಸ್‌

ಮಂಡ್ಯದಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 14.4 ಡಿಗ್ರಿ ಸೆಲ್ಸಿಯಸ್‌

ಮಡಿಕೇರಿಯಲ್ಲಿ ಗರಿಷ್ಠ ಉಷ್ಣಾಂಶ 30.9 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 13 ಡಿಗ್ರಿ ಸೆಲ್ಸಿಯಸ್‌

ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 18.2 ಡಿಗ್ರಿ ಸೆಲ್ಸಿಯಸ್‌.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.
Whats_app_banner