Karnataka Weather: ವಿಜಯಪುರ ಸೇರಿ ಕರ್ನಾಟಕದಲ್ಲಿ ಹೆಚ್ಚಿದ ಚಳಿ; ರಾಜಧಾನಿ ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಲೇ ಇದೆ. ಡಿಸೆಂಬರ್ 30 ರಂದು ರಾಜ್ಯದಲ್ಲಿ ಹವಾಮಾನ ಹೇಗಿದೆ ಅನ್ನೋದರ ವಿವರ ಇಲ್ಲಿದೆ.
ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೆಯುವ ಚಳಿ (Cold) ಹೆಚ್ಚಾಗುತಲೇ ಇದ್ದು, ಮೈ-ಕೈ ನಡುಗಿಸುವಂತೆ ಮಾಡುತ್ತಿದೆ. ಇಂದು (ಡಿಸೆಂಬರ್ 30, ಶನಿವಾರ) ಕೂಡ ಚಳಿಯ ನಡುವೆಯೇ ಜನರು ತಮ್ಮ ದಿನ ನಿತ್ಯದ ಕೆಲಸಗಳನ್ನು ಹೋಗುತ್ತಿದ್ದಾರೆ. ಕರಾವಳಿ ಮತ್ತು ದಕ್ಷಿಣ ಒಳನಾಡಿಗಿಂತ ಉತ್ತರ ಒಳನಾಡಿನಲ್ಲಿ ಕೆಲವೊಂದು ಕಡೆಗಳಲ್ಲಿ ಚಳಿ ಪ್ರಭಾವ ಬೀರಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ರಾಮನಗರ, ಚನ್ನಪಟ್ಟಣ ಸೇರಿದಂತೆ ಹಲವೆಡೆ ಮಂಜು ಮುಸುಕಿದ ವಾತಾವರಣವಿದೆ.
ಬೆಂಗಳೂರಿನ ಹವಾಮಾನ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಎಲ್ಲಾ ಕಡೆ ಒಣಹವೆ ಮುಂದುವರಿದಿದೆ. ಭಾರಿ ಮಳೆ, ಗುಡುಗು ಮಿಂಚು ಯಾವುದೂ ಇಲ್ಲದಿರುವ ಕಾರಣ ಮೀನುಗಾರರಿಗೆ ಮುನ್ನಚ್ಚರಿಕೆ ಇರುವುದಿಲ್ಲ. ಎಂದಿನಂತೆ ಮೀನುಗಾರಿಕೆ ನಡೆಸಬಹುದು.
ಮುಂದಿನ ಎರಡ್ಮೂರು ದಿನಗಳ ಕಾಲ ಇದೇ ವಾತಾರಣ ಇರಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ. ಅಂದರೆ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5.0 ಡಿಗ್ರಿ ಸೆಲ್ಸಿಯಸ್ ವರೆಗೆ ಹೆಚ್ಚಳ ಕಂಡಿದೆ. ರಾಜ್ಯದಲ್ಲಿ ಕಡಿಮೆ ಉಷ್ಣಾಂಶ ವಿಜಯಪುರದಲ್ಲಿ 10 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಂಗಳೂರು ಹವಾಮಾನ
ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬೆಳಗಿನ ಜಾವ ಕೆಲವೆಡೆ ಮಂಜು ಮುಸುಕಿದ ವಾತಾವರಣ ಇದೆ. ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕು. ನಗರದಲ್ಲಿ ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಕರ್ನಾಟಕದ ಕರಾವಳಿ ಪ್ರದೇಶಗಳಾಗಿವೆ. ಈ ಭಾಗವನ್ನು ಕೆನರಾ ಅಂತಲೂ ಕರೆಯಲಾಗುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿಗೆ ಬರುತ್ತವೆ.
ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಇನ್ನೂ ಉತ್ತರ ಒಳನಾಡಿನ ವ್ಯಾಪ್ತಿಗೆ ಬರುತ್ತವೆ. ವಾರ್ಷಿಕ ಈ ಭಾಗದಲ್ಲಿ ಸರಾಸರಿ 711.5 ಮಿಲಿ ಮೀಟರ್ ಮಳೆಯಾಗುತ್ತದೆ.
ವಿಭಾಗ