Karnataka Weather Today: ಮಾಘಮಾಸದ ಚಳಿಯೊಂದಿಗೆ ರಾಜ್ಯಾದ್ಯಂತ ಮುಂದುವರೆದ ಒಣಹವೆ; ಬೆಂಗಳೂರು, ಸುತ್ತಮುತ್ತ ಇಂದಿನ ಹವಾಮಾನ ಹೇಗಿದೆ?
Karnataka Weather Today: ರಾಜ್ಯದಲ್ಲಿ ಒಣಹವೆ ಮುಂದುವರೆದಿದೆ. ಜೊತೆಗೆ ಬೆಳಂಬೆಳಗ್ಗೆ ಮಾಘ ಮಾಸದ ಚಳಿ ಇದೆ. ಫೆ.19ರಂದು ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕಡಿಮೆ ಉಷ್ಣಾಂಶ 14.0 ಡಿಗ್ರಿ ಸೆಲ್ಸಿಯಸ್ ವಿಜಯಪುರದಲ್ಲಿ ದಾಖಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿದೆ ನೋಡೋಣ.
ಬೆಂಗಳೂರು: ಬೇಸಿಗೆ ಸಮೀಪಿಸುತ್ತಿದೆ. ಎಲ್ಲೆಡೆ ಮಿಶ್ರ ವಾತಾವರಣ ಇದೆ. ರಾತ್ರಿವರೆಗೂ ಸೆಖೆ ಕಾಡಿದರೆ ಬಹಳಷ್ಟು ಕಡೆ ಬೆಳ್ಳಂ ಬೆಳ್ಳಗ್ಗೆ ಮಾಘ ಮಾಸದ ಚಳಿ ಕೊರೆಯುತ್ತಿದೆ. ಈ ನಡುವೆ ಫೆ 19 ಸೋಮವಾರ, ಫೆ 20 ಮಂಗಳವಾರ ಹಾಗೂ ನಾಳೆ ರಾಜ್ಯದಲ್ಲಿ ಹವಾಮಾನದ ಬಗ್ಗೆ ಒಂದಿಷ್ಟು ಮಾಹಿತಿ.
ಅತಿ ಕಡಿಮೆ ಉಷ್ಣಾಂಶ ವಿಜಯಪುರದಲ್ಲಿ ದಾಖಲು
ಫೆ, 19 ಸೋಮವಾರ ರಾಜ್ಯಾದ್ಯಂತ ಒಣಹವೆ ಇತ್ತು. ಯಾವುದೇ ಮುಖ್ಯ ಮಳೆಯ ಪ್ರಮಾಣ ವರದಿಯಾಗಿಲ್ಲ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ -1.6 ಡಿಗ್ರಿ ಸೆಲ್ಸಿಯಸ್ನಿಂದ -3.0 ಡಿಗ್ರಿ ಸೆಲ್ಸಿಯಸ್ವರೆಗೆ ದಾಖಲಾಗಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯವಾಗಿ -1.5 ಡಿಗ್ರಿ ಸೆಲ್ಸಿಯಸ್ನಿಂದ 1.5 ಡಿಗ್ರಿ ಸೆಲ್ಸಿಯಸ್ವರೆಗೆ ದಾಖಲಾಗಿದೆ. ಹಾಗೇ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಳವಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕಡಿಮೆ ಉಷ್ಣಾಂಶ 14.0 ಡಿಗ್ರಿ ಸೆಲ್ಸಿಯಸ್ ವಿಜಯಪುರದಲ್ಲಿ ದಾಖಲಾಗಿದೆ.
ಫೆ 21, ಬುಧವಾರ ರಾಜ್ಯದಲ್ಲಿ ಮಳೆಯ ಸೂಚನೆ
ಮುಂದಿನ 24 ಘಂಟೆಗಳಲ್ಲಿ ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ. ಗುರುವಾರ ಕೂಡಾ ಇದೇ ವಾತಾವಣೆ ಮುಂದುವರೆಯಲಿದೆ. ಹವಾಮಾನ ಇಲಾಖೆಯು ಗುಡುಗು ಮುನ್ನೆಚರಿಕೆ, ಅಥವಾ ಮಳೆಯ ಮುನ್ಸೂಚನೆ ಆಗಲೀ ನೀಡಿಲ್ಲ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿರುವ ಸಾಧ್ಯತೆ ಇದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆ ಮಳೆಯ ಮುನ್ಸೂಚನೆ ಇಲ್ಲ, ಮೀನುಗಾರರಿಗೂ ಯಾವುದೇ ಮುನ್ಸೂಚನೆ ನೀಡಿಲ್ಲ.
ಫೆ 21, ಬುಧವಾರ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಹವಾಮಾನ ಇಲಾಖೆಯ ಪ್ರಕಾರ ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆಗಳಿರುತ್ತದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಲಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ. ಗುರುವಾರ ಕೂಡಾ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ.