Karnataka Weather Today: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಕಡಿಮೆ ಉಷ್ಣಾಂಶ ದಾಖಲು; ಮುಂದಿನ 24 ಗಂಟೆಗಳಲ್ಲಿ ಹವಾಮಾನ ಹೇಗಿರಲಿದೆ?
Karnataka Weather Today: ಶುಕ್ರವಾರ ಕೂಡಾ ರಾಜ್ಯಾದ್ಯಂತ ಒಣಹವೆ ಮುಂದುವರೆದಿದ್ದು ಮುಂದಿನ 48 ಗಂಟೆಗಳ ಕಾಲ ಇದೇ ವಾತಾವರಣ ಇರಲಿದೆ. ರಾಜ್ಯದ ಸಮತಟ್ಟಾದ ಪ್ರದೆೇಶಗಳಲ್ಲಿಅತಿ ಕಡಿಮೆ ಕನಿಷ್ಠ ಉಷ್ಣಾಂಶ 14.6 ಡಿಗ್ರಿ ಸೆಲ್ಸಿಯಸ್ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ.

ಬೆಂಗಳೂರು: ಜನರು ಬೇಸಿಗೆ ಎದುರಿಸಲು ಸಿದ್ಧರಾಗಿದ್ದಾರೆ. ಬೆಳಗ್ಗೆ ಹಾಗೂ ರಾತ್ರಿ ಸ್ವಲ್ಪ ಮಟ್ಟಿನ ಚಳಿ ಕಾಡುತ್ತಿದ್ದರೂ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3ವರೆಗೂ ಬಿಸಿಲಿನ ಝಳ ಹೆಚ್ಚಾಗಿದೆ. ಈ ನಡುವೆ ರಾಜ್ಯದ ಇಂದಿನ ಹವಾಮಾನ ವರದಿ ಹೇಗಿದೆ ನೋಡೋಣ. ಫೆ 23 ಹಾಗೂ ಫೆ 25 ರಂದು ಬೆಂಗಳೂರು ಹಾಗೂ ಸುತ್ತಮುತ್ತಲಿನ ವಾತಾವರಣ ಹೇಗಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಜ್ಯಾದ್ಯಂತ ಮುಂದುವರೆದ ಒಣ ಹವೆ
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಫೆ 23, ಶುಕ್ರವಾರ ರಾಜ್ಯಾದ್ಯಂತ ಒಣಹವೆ ಇತ್ತು. ಯಾವುದೇ ಮುಖ್ಯ ಮಳೆಯ ಪ್ರಮಾಣ ವರದಿಯಾಗಿಲ್ಲ. ಉತ್ತರ ಒಣನಾಡಿನ ಒಂದೆರಡು ಕಡೆಗಳಲ್ಲಿ ತಾಪಮಾನ 2.1 ಡಿ.ಸೆ. ನಿಂದ 4.0 ಡಿಗ್ರಿ ಸೆಲ್ಸಿಯಸ್‌ವರೆಗೆ ಗಮನಾರ್ಹವಾಗಿ ಏರಿಕೆಯಾಗಿದೆ. ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ -2.0 ಡಿಗ್ರಿ ಸೆಲ್ಸಿಯಸ್‌ನಿಂದ +2.0 ಡಿ.ಸೆವರೆಗೂ ಇದ್ದು ಹೆಚ್ಚಿನ ಬದಲಾವಣೆ ಕಂಡುಬಂದಿಲ್ಲ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ತಾಪಮಾನ -2.1 ಡಿ.ಸೆ.ನಿಂದ -4.0 ಡಿ.ಸೆವರೆಗೆ ಗಮನಾರ್ಹವಾಗಿ ಇಳಿಕೆ ಆಗಿದೆ. ದಕ್ಷಿಣ ಒಳನಾಡಿನ ಒಂದೆರಡಗ ಕಡೆಗಳಲ್ಲಿ ಅತ್ಯಂತ ಗಮನಾರ್ಹವಾಗಿ ಇಳಿಕೆ ಆಗಿದೆ. ರಾಜ್ಯದ ಸಮತಟ್ಟಾದ ಪ್ರದೆೇಶಗಳಲ್ಲಿಅತಿ ಕಡಿಮೆ ಕನಿಷ್ಠ ಉಷ್ಣಾಂಶ 14.6 ಡಿಗ್ರಿ ಸೆಲ್ಸಿಯಸ್ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ.
ಫೆ 25 ಹವಾಮಾನ ಹೇಗಿರಲಿದೆ?
ಹವಾಮಾನ ಇಲಾಖೆಯ ವರದಿ ಪ್ರಕಾರ ಭಾನುವಾರ ಮುಂದಿನ 24 ಗಂಟೆಗಳು ಹಾಗೂ ಸೋಮವಾರದವರೆಗೂ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ. ಯಾವುದೇ ಗುಡುಗು, ಮಳೆಯ ಮುನ್ನೆಚರಿಕೆ ನೀಡಿಲ್ಲ, ಮೀನುಗಾರರಿಗೂ ಯಾವುದೇ ಮುನ್ಸೂಚನೆ ನೀಡಿಲ್ಲ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿರುವ ಸಾಧ್ಯತೆ ಇದೆ.
ಬೆಂಗಳೂರು, ಸುತ್ತಮುತ್ತಲಿನ ವಾತಾವಣ
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ನಗರ ಹಾಗೂ ಸುತ್ತಮುತ್ತ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ21 ಡಿಗ್ರಿ ಸೆಲ್ಲಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.