ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಉಷ್ಣಾಂಶ; ಧಾರವಾಡದಲ್ಲಿ ತಂಪಾದ ವಾತಾವರಣ -Karnataka Weather
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಉಷ್ಣಾಂಶ; ಧಾರವಾಡದಲ್ಲಿ ತಂಪಾದ ವಾತಾವರಣ -Karnataka Weather

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಉಷ್ಣಾಂಶ; ಧಾರವಾಡದಲ್ಲಿ ತಂಪಾದ ವಾತಾವರಣ -Karnataka Weather

Karnataka Weather Today: ರಾಜ್ಯದ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿಸಿ ಹೆಚ್ಚಾಗುತ್ತಿದೆ. ಇದರ ಜೊತೆಗೆ ಧಾರವಾಡದಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರ್ನಾಟಕ ಹವಾಮಾನ ವರದಿ ತಿಳಿಯಿರಿ.

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಬಿಸಿಯ ವಾತಾವರಣ ಹೆಚ್ಚಾಗುತ್ತಿದೆ. ಉತ್ತರ ಪ್ರದೇಶದ ಬಾನ್‌ಪುರ ಎಂಬ ಗ್ರಾಮದಲ್ಲಿ ಆಂಬುಲೆನ್ಸ್ ಚಾನಕನಿಗೆ ಕುಡಿಯಲು ನೀರು ನೀಡಿದ ಮಹಿಳೆ.
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಬಿಸಿಯ ವಾತಾವರಣ ಹೆಚ್ಚಾಗುತ್ತಿದೆ. ಉತ್ತರ ಪ್ರದೇಶದ ಬಾನ್‌ಪುರ ಎಂಬ ಗ್ರಾಮದಲ್ಲಿ ಆಂಬುಲೆನ್ಸ್ ಚಾನಕನಿಗೆ ಕುಡಿಯಲು ನೀರು ನೀಡಿದ ಮಹಿಳೆ. (AP)

ಬೆಂಗಳೂರು: ಕರ್ನಾಟಕದಲ್ಲಿ (Karnataka Weather Today) ಕೊರೆಯುವ ಚಳಿಯ (Cold) ವಾತಾವರಣ ಕಡಿಮೆಯಾಗುತ್ತಿದ್ದು, ನಿಧಾನವಾಗಿ ಬಿಸಿ (Heat) ಹೆಚ್ಚಾಗುತ್ತಿದೆ. ಇಂದು (ಫೆಬ್ರವರಿ 5, ಸೋಮವಾರ) ಮುಂಜಾನೆ ಸಮಯದಲ್ಲೇ ಹೇಳಿಕೊಳ್ಳುವಂತಹ ಚಳಿ ಇಲ್ಲ. ಮಧ್ಯಾಹ್ನದ ವೇಳೆ ಸುಡು ಬಿಸಿಲಿನ ವಾತಾವರಣ ನಿರ್ಮಾಣವಾಗುತ್ತಿದೆ. ಹೀಗಾಗಿ ಉಷ್ಣಾಂಶದಲ್ಲಿ ಬದಲಾವಣೆಯಾಗುತ್ತಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೊಂದು ಭಾಗಗಳಲ್ಲಿ ಉಷ್ಣಾಂಶ ಹೆಚ್ಚಿದೆ. ಅದೇ ರೀತಿಯಾಗಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ರಾಮನಗರದ ಕೆಲವು ಕಡೆ ಇದೇ ಪರಿಸ್ಥಿತಿ ಇದ್ದು, ಉತ್ತರ ಒಳನಾಡಿನಲ್ಲಿ ಕೆಲವೊಂದು ಕಡೆಗಳಲ್ಲಿ ಚಳಿ ಪ್ರಭಾವ ಬೀರಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ಹವಾಮಾನ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಎಲ್ಲಾ ಕಡೆ ಒಣಹವೆ ಮುಂದುವರಿದಿದೆ. ಭಾರಿ ಮಳೆ, ಗುಡುಗು ಮಿಂಚು ಯಾವುದೂ ಇಲ್ಲದಿರುವ ಕಾರಣ ಮೀನುಗಾರರಿಗೆ ಮುನ್ನಚ್ಚರಿಕೆ ಇರುವುದಿಲ್ಲ. ಎಂದಿನಂತೆ ಮೀನುಗಾರಿಕೆ ನಡೆಸಬಹುದು. ಮುಂದಿನ ಎರಡ್ಮೂರು ದಿನಗಳ ಕಾಲ ಇದೇ ವಾತಾರಣ ಇರಲಿದೆ.

ರಾಜ್ಯದ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಉಷ್ಣಾಂಶ ಹೆಚ್ಚಾಗಿದೆ. 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್ ವರೆಗೆ ಏರಿಕೆಯಾಗಿದೆ. ಕರಾವಳಿಯ ಕೆಲವು ಕಡೆಗಳಲ್ಲಿ, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಗಡೆಗಳಲ್ಲಿ ಬಿಸಿಯ ವಾತಾವರಣ ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ಏರಿಕೆಯಾಗಿದೆ. ಆದರೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಉಷ್ಣಾಂಶ ಕಡಿಮೆಯಾಗಿರುವ ಗಮನಾರ್ಹ ವಿಚಾರವಾಗಿದೆ. ಇಡೀ ಕರ್ನಾಟಕದ ಪೈಕಿ ಧಾರವಾಡದಲ್ಲಿ ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ಹವಾಮಾನ ಬಗ್ಗೆ ವರದಿ ಏನು ಹೇಳುತ್ತದೆ?

ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿದೆ. ಕೆಲವು ಕಡೆಗಳಲ್ಲಿ ಮುಂಜಾನೆ ಮಂಜು ಮುಸುಕಿದ ವಾತಾವರಣವಿದೆ. ನಾಳೆ (ಫೆಬ್ರವರಿ 6, ಮಂಗಳವಾರ) ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬೆಳಗಿನ ಜಾವ ಕೆಲವೆಡೆ ಮಂಜು ಮುಸುಕಿದ ವಾತಾವರಣ ಇರಲಿದೆ. ನಗರದಲ್ಲಿ ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಕರ್ನಾಟಕದ ಕರಾವಳಿ ಪ್ರದೇಶಗಳಾಗಿವೆ. ಈ ಭಾಗವನ್ನು ಕೆನರಾ ಅಂತಲೂ ಕರೆಯಲಾಗುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿಗೆ ಬರುತ್ತವೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಇನ್ನೂ ಉತ್ತರ ಒಳನಾಡಿನ ವ್ಯಾಪ್ತಿಗೆ ಬರುತ್ತವೆ. ವಾರ್ಷಿಕ ಈ ಭಾಗದಲ್ಲಿ ಸರಾಸರಿ 711.5 ಮಿಲಿ ಮೀಟರ್ ಮಳೆಯಾಗುತ್ತದೆ. (This copy first appeared in Hindustan Times Kannada website. To read more like this please logon to kannada.hindustantime.com).

Whats_app_banner