ಕನ್ನಡ ಸುದ್ದಿ  /  Karnataka  /  Karnataka Weather Today Heavy Rain Expected In Costal Karnataka And Light Rain In Southern Hinterland Kannada News Rst

Karnataka Rain: ಚುನಾವಣಾ ಫಲಿತಾಂಶದ ಸಂಭ್ರಮದ ಜೊತೆಗೆ ವರುಣನ ಅಬ್ಬರವೂ ಜೋರು; ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Weather Update: ಇಂದು ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ. ಚುನಾವಣಾ ಫಲಿತಾಂಶದ ಆತಂಕ, ಸಂಭ್ರಮದೊಂದಿಗೆ ವರುಣನೂ ಜೊತೆಯಾಗುವ ಸಾಧ್ಯತೆ ಹೆಚ್ಚಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನೂ ಕೆಲವೆಡೆ ಒಣಹವೆ ಮುಂದುವರಿಯಲಿದೆ.

ಚುನಾವಣಾ ಫಲಿತಾಂಶದ ಸಂಭ್ರಮದೊಂದಿಗೆ ಇಂದು ಮಳೆಯೂ ಜೊತೆಯಾಗಲಿದೆ
ಚುನಾವಣಾ ಫಲಿತಾಂಶದ ಸಂಭ್ರಮದೊಂದಿಗೆ ಇಂದು ಮಳೆಯೂ ಜೊತೆಯಾಗಲಿದೆ (ANI)

ಬೆಂಗಳೂರು: ಬಂಗಾಳಕೊಲ್ಲಿ ಎದ್ದಿದ್ದ ಮೋಚಾ ಚಂಡಮಾರುತದ ಅಲೆಯು ಒಡಿಶಾ ಕರಾವಳಿ ತೀರವನ್ನು ಪ್ರವೇಶಿಸಿದ್ದು, ಇದರಿಂದ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಇದರೊಂದಿಗೆ ಗಾಳಿ ವೇಗವೂ ಹೆಚ್ಚಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಬಿರುಗಾಳಿ ಪ್ರಭಾವ ಜೋರಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯಾಗಿದೆ. ಇಂದು ಕೂಡ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಕರ್ನಾಟಕ ಹವಾಮಾನ ಇಲಾಖೆ (Met Centre Bengaluru - IMD) ಮುಂದಿನ 48 ಗಂಟೆಗಳ ಹವಾಮಾನ ಮುನ್ಸೂಚನೆ (Karnataka Weather Forecast) ಪ್ರಕಟಿಸಿದ್ದು, ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಇದೇ ರೀತಿ ಕೆಲವೆಡೆ ಒಣಹವೆ ಮುಂದುವರೆಯಲಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಹವಾಮಾನ ಇಲಾಖೆಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಿರುವ ಮುನ್ಸೂಚನೆಯಲ್ಲಿ ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆ ಗುಡುಗು ಮಿಂಚು ಕಾಣಿಸಲಿದೆ.

ಕರಾವಳಿ ಹವಾಮಾನ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಗುಡುಗು ಮಿಂಚಿನಿಂದ ಕೂಡಿದ ಭಾರಿ ಮಳೆಯಾಗುತ್ತಿದ್ದು, ಗಾಳಿಯ ವೇಗವು ಹೆಚ್ಚಿದೆ. ಇಂದು ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಮುನ್ಸೂಚನೆ ಇದೆ.

ಉತ್ತರ ಒಳನಾಡು ಹವಾಮಾನ ವರದಿ

ಇಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ಯಾದಗಿರಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಗಾಳಿಯ ವೇಗವು ಹೆಚ್ಚಿರಲಿದ್ದು, ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಇದರೊಂದಿಗೆ ಬೀದರ್‌, ರಾಯಚೂರು, ವಿಜಯಪುರದಲ್ಲಿ ಒಣಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು ವರದಿ

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಕೆಲವೆಡೆ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯೂ ಇದೆ. ಇನ್ನು ದಕ್ಷಿಣ ಒಳನಾಡಿ ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಚಂಡಮಾರುತದ ಅಲೆಯು ರಾಜ್ಯದಲ್ಲಿ ಜೋರಾಗಿದ್ದು, ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇದರೊಂದಿಗೆ ಬಿರುಗಾಳಿಯು ಇರಲಿದ್ದು, ಅಪಾಯ ಹೆಚ್ಚುವ ಸಾಧ್ಯತೆ ಇದೆ. ಇನ್ನೂ ಎರಡು ದಿನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.