Karnataka Weather: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದುವರಿದ ಚಳಿಯ ವಾತಾವರಣ; ಚಾಮರಾಜನಗರದಲ್ಲಿ ಅತಿ ಕಡಿಮೆ ಉಷ್ಣಾಂಶ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Weather: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದುವರಿದ ಚಳಿಯ ವಾತಾವರಣ; ಚಾಮರಾಜನಗರದಲ್ಲಿ ಅತಿ ಕಡಿಮೆ ಉಷ್ಣಾಂಶ

Karnataka Weather: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದುವರಿದ ಚಳಿಯ ವಾತಾವರಣ; ಚಾಮರಾಜನಗರದಲ್ಲಿ ಅತಿ ಕಡಿಮೆ ಉಷ್ಣಾಂಶ

ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ವಾತಾವಾರಣ ಮುಂದುವರಿದಿದೆ.

ಬೆಂಗಳೂರಿನ ಕೆೆಲವು ಕಡೆಗಳಲ್ಲಿ ಮುಂಜಾನೆ ಮಂಜಿನ ವಾತಾವರಣ ಇತ್ತು
ಬೆಂಗಳೂರಿನ ಕೆೆಲವು ಕಡೆಗಳಲ್ಲಿ ಮುಂಜಾನೆ ಮಂಜಿನ ವಾತಾವರಣ ಇತ್ತು (Hindustan Times)

ಬೆಂಗಳೂರು: ಕರ್ನಾಟಕದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಕೊರೆಯುವ ಚಳಿ ಮುಂದುವರಿದಿದ್ದು, ಮೈ-ಕೈ ನಡುಗಿಸುವಂತೆ ಮಾಡುತ್ತಿದೆ. ಇಂದು (ಜನವರಿ 28, ಭಾನುವಾರ) ಕೂಡ ಚಳಿಯ ನಡುವೆಯೇ ಜನರು ತಮ್ಮ ದಿನ ನಿತ್ಯದ ಕೆಲಸಗಳನ್ನು ಹೋಗುತ್ತಿದ್ದಾರೆ. ಕರಾವಳಿ ಮತ್ತು ಉತ್ತರ ಒಳನಾಡಿಗಿಂತ ದಕ್ಷಿಣ ಒಳನಾಡಿನಲ್ಲಿ ಕೆಲವೊಂದು ಕಡೆಗಳಲ್ಲಿ ಚಳಿ ಪ್ರಭಾವ ಬೀರಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ಹವಾಮಾನ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಎಲ್ಲಾ ಕಡೆ ಒಣಹವೆ ಮುಂದುವರಿದಿದೆ. ಭಾರಿ ಮಳೆ, ಗುಡುಗು ಮಿಂಚು ಯಾವುದೂ ಇಲ್ಲದಿರುವ ಕಾರಣ ಮೀನುಗಾರರಿಗೆ ಮುನ್ನಚ್ಚರಿಕೆ ಇರುವುದಿಲ್ಲ. ಎಂದಿನಂತೆ ಮೀನುಗಾರಿಕೆ ನಡೆಸಬಹುದು. ಮುಂದಿನ ಎರಡ್ಮೂರು ದಿನಗಳ ಕಾಲ ಇದೇ ವಾತಾರಣ ಇರಲಿದೆ.

ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಇಳಿಕೆಯಾಗಿದೆ. ಅಂದರೆ -2.1 ಡಿಗ್ರಿ ಸೆಲ್ಸಿಯಸ್‌ನಿಂದ -4.0 ಡಿಗ್ರಿ ಸೆಲ್ಸಿಯಸ್‌ ವರೆಗೆ ಕಡಿಮೆಯಾಗಿದೆ. ಉತ್ತರ ಒಳನಾಡಿನ ಒಂದರೆಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಳವಾಗಿದೆ. 3.1 ಡಿಗ್ರಿ ಸೆಲ್ಸಿಯಸ್‌ನಿಂದ 5.0 ಡಿಗ್ರಿ ಸೆಲ್ಸಿಯಸ್ ವರೆಗೆ ಹೆಚ್ಚಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಉಷ್ಣಾಂಶ ಕಡಿಮೆಯಾಗಿದೆ. ರಾಜ್ಯದಲ್ಲಿ ಕಡಿಮೆ ಉಷ್ಣಾಂಶ ಚಾಮರಾಜನಗರದಲ್ಲಿ 14.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಬೆಂಗಳೂರು ಹವಾಮಾನ

ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿದ್ದು, ಬೆಳಗಿನ ಜಾವ ಕೆಲವೆಡೆ ಮಂಜು ಮುಸುಕಿದ ವಾತಾವರಣ ಇದೆ. ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕು. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ. ಮುಂದಿನ ಎರಡ್ಮೂರು ದಿನಗಳ ಕಾಲ ಇದೇ ವಾತಾವರಣ ಇರಲಿದೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಕರ್ನಾಟಕದ ಕರಾವಳಿ ಪ್ರದೇಶಗಳಾಗಿವೆ. ಈ ಭಾಗವನ್ನು ಕೆನರಾ ಅಂತಲೂ ಕರೆಯಲಾಗುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿಗೆ ಬರುತ್ತವೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಇನ್ನೂ ಉತ್ತರ ಒಳನಾಡಿನ ವ್ಯಾಪ್ತಿಗೆ ಬರುತ್ತವೆ. ವಾರ್ಷಿಕ ಈ ಭಾಗದಲ್ಲಿ ಸರಾಸರಿ 711.5 ಮಿಲಿ ಮೀಟರ್ ಮಳೆಯಾಗುತ್ತದೆ. (This copy first appeared in Hindustan Times Kannada website. To read more like this please logon to kannada.hindustantime.com)

Whats_app_banner