ಕರ್ನಾಟಕ ಹವಾಮಾನ ಜೂನ್ 2: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಇಂದು 21 ಜಿಲ್ಲೆಗಳಲ್ಲಿ ವರುಣ ಅಬ್ಬರಿಸುವ ಮುನ್ಸೂಚನೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಜೂನ್ 2: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಇಂದು 21 ಜಿಲ್ಲೆಗಳಲ್ಲಿ ವರುಣ ಅಬ್ಬರಿಸುವ ಮುನ್ಸೂಚನೆ

ಕರ್ನಾಟಕ ಹವಾಮಾನ ಜೂನ್ 2: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಇಂದು 21 ಜಿಲ್ಲೆಗಳಲ್ಲಿ ವರುಣ ಅಬ್ಬರಿಸುವ ಮುನ್ಸೂಚನೆ

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳು, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು 21 ಜಿಲ್ಲೆಗಳಲ್ಲಿ ಜೂನ್ 2ರ ಭಾನುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕ ಹವಾಮಾನ ಜೂನ್ 2: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಇಂದು 21 ಜಿಲ್ಲೆಗಳಲ್ಲಿ ವರುಣ ಅಬ್ಬರಿಸುವ  ಮುನ್ಸೂಚನೆ
ಕರ್ನಾಟಕ ಹವಾಮಾನ ಜೂನ್ 2: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಇಂದು 21 ಜಿಲ್ಲೆಗಳಲ್ಲಿ ವರುಣ ಅಬ್ಬರಿಸುವ ಮುನ್ಸೂಚನೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru Heavy Rain) ಶನಿವಾರ (ಜೂನ್ 1) ಮಧ್ಯಾಹ್ನದಿಂದ ಆರಂಭವಾದ ಗುಡುಗು ಸಹಿತ ಧಾರಾಕಾರ ಮಳೆ ಹಲವು ಗಂಟೆಗಳ ಕಾಲ ಮುಂದುವರಿದು ರಾತ್ರಿಯವರೆಗೂ ಸುರಿಯಿತು. ಹಲವಾರು ಪ್ರದೇಶಗಳಲ್ಲಿ ಗುಡುಗು ಮತ್ತು ಆಲಿಕಲ್ಲು ಮಳೆಯಾಗೂ ಸಾಕ್ಷಿಯಾಯಿತು. ಜನರು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳ ಮೂಲಕ ಮಳೆಯ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಹೆಚ್ಚಿನ ತಾಪಮಾನ ಹಾಗೂ ನೀರಿನ ಕೊರತೆಯನ್ನು ಎದುರಿಸುತ್ತಿರುವ ಬೆಂಗಳೂರಿಗರಿಗೆ ಸತತವಾಗಿ ಮಳೆಯಾಗುತ್ತಿರುವುದು ಕೊಂಚ ರಿಲೀಫ್ ನೀಡಿದಂತಾಗಿದೆ. ಮತ್ತೊಂದೆಡೆ ಭಾರಿ ಮಳೆಯಿಂದ ನಗರದ ಹಲವಾರು ಭಾಗಗಳಲ್ಲಿ ರಸ್ತೆಗಳು ಜಲಾವೃತಗೊಂಡು ಪ್ರಯಾಣಿಕರು ಪರದಾಡುವಂತಾಯಿತು. ಸಂಚಾರ ದಟ್ಟಣೆ ಉಂಟಾಗಿತ್ತು ಎಂದು ವರದಿಯಾಗಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಳೆಯಿಂದಾಗಿ ನಗರದಾದ್ಯಂತ ಮೇಲ್ಛಾವಣಿಗಳು ಮತ್ತು ವಾಹನಗಳಿಗೆ ಭಾರಿ ಆಲಿಕಲ್ಲು ಮಳೆಯಾಗಿದೆ. ತೀವ್ರ ಹವಾಮಾನ ವಿದ್ಯಮಾನದ ನಂತರ, ಬಲವಾದ ಗಾಳಿಯಿಂದ ಹದಗೆಟ್ಟ ನಂತರ, ಅಧಿಕಾರಿಗಳು ನಿವಾಸಿಗಳಿಗೆ ಎಚ್ಚರಿಕೆ ವಹಿಸುವಂತೆ ಮತ್ತು ಪರಿಸ್ಥಿತಿ ಸ್ಥಿರವಾಗುವವರೆಗೆ ಮನೆಯೊಳಗೆ ಇರುವಂತೆ ಸಲಹೆಗಳನ್ನು ನೀಡಿದರು. "ಬೆಂಗಳೂರಿನ ಕೋಣನಕುಂಟೆ ಕ್ರಾಸ್‌ನಿಂದ ಇಂದಿನ ಆಲಿಕಲ್ಲು ಮತ್ತು ಮಳೆ ನೋಟ" ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬಳಕೆದಾರರೊಬ್ಬರು ಮಳೆಯ ದೃಶ್ಯವನ್ನು ಹಂಚಿಕೊಂಡಿದ್ದಾರೆ.

ಶನಿವಾರ (ಜೂನ್ 1) ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವೊಂದು ಜಿಲ್ಲೆಗಳಲ್ಲಿ (Karnataka Weather) ಮಳೆಯಾಗಿದೆ. ಹಾಸನದಲ್ಲಿ 3 ಸೆಂಟಿ ಮೀಟರ್‌ ಮಳೆಯಾಗಿದೆ (Hassan Rain). ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ 1 ಸೆಂಟಿ ಮೀಟರ್ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಳವಾಗಿದೆ. ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ 42.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಏಪ್ರಿಲ್ 2ರ ಭಾನುವಾರ ಎಲ್ಲೆಲ್ಲಿ ಮಳೆಯಾಗಲಿದೆ

ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕಕ್ಕೆ (Karnataka Monsoon) ಜೂನ್ ಮೊದಲ ವಾರದಲ್ಲಿ ಮುಂಗಾರು (Monsoon) ಪ್ರವೇಶಿಸಲಿದೆ ಎಂದು ಹೇಳಿತ್ತು. ಅದರಂತೆ ರಾಜ್ಯದಲ್ಲಿ ಜೂನ್ 1ರ ಶನಿವಾರ ಮಳೆಯಾಗಿದೆ. ಇಂದು (ಜೂನ್ 2, ಭಾನುವಾರ) ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂಬುದನ್ನು ನೋಡುವುದಾದರೆ ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಮುನ್ಸೂಚನೆ ಇದೆ. ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಜೂನ್ 8ರ ಶನಿವಾರದ ವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತನ್ನ ದೈನಂದಿನ ವರದಿಯಲ್ಲಿ ಮಾಹಿತಿ ನೀಡಿದೆ.

ರಾಜಧಾನಿ ಬೆಂಗಳೂರು ಹವಾಮಾನ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner