ಕನ್ನಡ ಸುದ್ದಿ  /  Karnataka  /  Karnataka Weather Today March 4 Temperature Rise Above Normal In Coastal Areas Lowest Temperature In Chamarajanagar Rmy

Karnataka Weather: ಕರ್ನಾಟಕ ಕರಾವಳಿಯಲ್ಲಿ ಹೆಚ್ಚುತ್ತಿರುವ ಬಿಸಿ; ಚಾಮರಾಜನಗರದಲ್ಲಿ ಚಳಿಯ ವಾತಾವರಣ

Karnataka Weather Today: ಕರಾವಳಿಯ ಹಲವು ಕಡೆಗಳಲ್ಲಿ, ಉತ್ತರ ಒಳನಾಡಿನ ಕೆಲವೆಡೆ ದಕ್ಷಿಣ ಒಳನಾಡಿನ ಒಂದೆರಡು ಕಡೆ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಾಗಿದೆ.

ಇಂದಿನ ಕರ್ನಾಟಕದ ಹವಾಮಾನ ಹೇಗಿದೆ ಅನ್ನೋದನ್ನ ತಿಳಿಯಿರಿ. ಕರಾವಳಿಯಲ್ಲಿ ಬಿಸಿ ಹೆಚ್ಚಾಗುತ್ತಿದ್ದರೆ, ಹಳೆ ಮೈಸೂರು ಭಾಗದ ಚಾಮರಾಜನಗರದಲ್ಲಿ ಚಳಿಯ ವಾತಾವರಣವಿದೆ.
ಇಂದಿನ ಕರ್ನಾಟಕದ ಹವಾಮಾನ ಹೇಗಿದೆ ಅನ್ನೋದನ್ನ ತಿಳಿಯಿರಿ. ಕರಾವಳಿಯಲ್ಲಿ ಬಿಸಿ ಹೆಚ್ಚಾಗುತ್ತಿದ್ದರೆ, ಹಳೆ ಮೈಸೂರು ಭಾಗದ ಚಾಮರಾಜನಗರದಲ್ಲಿ ಚಳಿಯ ವಾತಾವರಣವಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದಾದ್ಯಂತ ಒಣಹವೆ ಮುಂದುವರಿದಿದೆ. ಯಾವುದೇ ಭಾಗದಲ್ಲಿ ಮಳೆಯಾಗಿಲ್ಲ ಎಂದು ಹವಾಮಾನ ಕೇಂದ್ರ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳ ಹವಾಮಾನ ವರದಿ ಪ್ರಕಾರ, ಕರ್ನಾಟಕದ ಕರಾವಳಿ ಭಾಗದ ಹಲವು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಜನರು ಬಿಸಿಯ ವಾತಾವರಣವನ್ನು ಎದುರಿಸುತ್ತಿದ್ದಾರೆ. ಇಂದು (ಮಾರ್ಚ್ 4, ಸೋಮವಾರ) ದಕ್ಷಿಣ ಒಳನಾಡಿನಲ್ಲಿ ಮುಂಜಾನೆ ವೇಳೆಯಲ್ಲಿ ಸ್ವಲ್ಪ ಚಳಿಯ ವಾತಾವರಣವಿತ್ತು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ರಾಮನಗರ ಈ ಜಿಲ್ಲೆಗಳಲ್ಲಿ ಬೆಳಗಿನ ಸಮಯದಲ್ಲಿ ಚಳಿಯಾಗುತ್ತಿದೆ. ಅಲ್ಲಲ್ಲಿ ಮಂಜು ಮುಕಿಸಿದೆ. ಆದರೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಏರಿಕೆಯಾಗಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಕರವಾಳಿ ಹಾಗೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆ ವಾತಾವರಣದಲ್ಲಿ ಬದಲಾವಣೆ ಕಾಣಬಹುದು. ಉಷ್ಣಾಂಶದಲ್ಲಿ ಸಮಾನ್ಯಕ್ಕಿಂತ ವಿಚಲನೆಯನ್ನು ನೋಡುವುದಾದರೆ ಕರಾವಳಿಯ ಹಲವು ಕಡೆಗಳಲ್ಲಿ, ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಳವಾಗಿದೆ. ಅಂದರೆ 1.6 ಡಿಗ್ರಿ ಸೆಲ್ಸಿಯಸ್ ನಿಂದ 3.0 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ಏರಿಕೆಯಾಗಿದೆ. ಬಿಸಿಯ ವಾತಾವರಣ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಉತ್ತರ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆಯಾಗಿರುವುದು ಗಮನಾರ್ಹ ವಿಚಾರವಾಗಿದೆ.

ಬೆಂಗಳೂರಿನ ಹವಾಮಾನ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಎಲ್ಲಾ ಕಡೆ ಒಣಹವೆ ಮುಂದುವರಿದಿದೆ. ಭಾರಿ ಮಳೆ, ಗುಡುಗು ಮಿಂಚು ಯಾವುದೂ ಇಲ್ಲದಿರುವ ಕಾರಣ ಮೀನುಗಾರರಿಗೆ ಮುನ್ನಚ್ಚರಿಕೆ ಇರುವುದಿಲ್ಲ. ಎಂದಿನಂತೆ ಮೀನುಗಾರಿಕೆ ನಡೆಸಬಹುದು. ಮುಂದಿನ ಎರಡ್ಮೂರು ದಿನಗಳ ಕಾಲ ಇದೇ ವಾತಾರಣ ಇರಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 38.5 ಡಿಗ್ರಿ ಸೆಲ್ಸಿಯಸ್ ಬಾಗಲಕೋಟೆಯಲ್ಲಿ ದಾಖಲಾಗಿದೆ. ಕಡಿಮೆ ಉಷ್ಣಾಂಶ ಚಾಮರಾಜನಗರದಲ್ಲಿ 16.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಬೆಂಗಳೂರು ಹವಾಮಾನ

ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬೆಳಗಿನ ಜಾವ ಕೆಲವೆಡೆ ಮಂಜು ಮುಸುಕಿದ ವಾತಾವರಣ ಇದೆ. ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಕರ್ನಾಟಕದ ಕರಾವಳಿ ಪ್ರದೇಶಗಳಾಗಿವೆ. ಈ ಭಾಗವನ್ನು ಕೆನರಾ ಅಂತಲೂ ಕರೆಯಲಾಗುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿಗೆ ಬರುತ್ತವೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಇನ್ನೂ ಉತ್ತರ ಒಳನಾಡಿನ ವ್ಯಾಪ್ತಿಗೆ ಬರುತ್ತವೆ. ವಾರ್ಷಿಕ ಈ ಭಾಗದಲ್ಲಿ ಸರಾಸರಿ 711.5 ಮಿಲಿ ಮೀಟರ್ ಮಳೆಯಾಗುತ್ತದೆ.

IPL_Entry_Point

ವಿಭಾಗ