ಕರ್ನಾಟಕ ಹವಾಮಾನ ಮೇ 12: ರಾಜಧಾನಿ ಬೆಂಗಳೂರು ಸೇರಿ ಇಂದು ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮೇ 12: ರಾಜಧಾನಿ ಬೆಂಗಳೂರು ಸೇರಿ ಇಂದು ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ

ಕರ್ನಾಟಕ ಹವಾಮಾನ ಮೇ 12: ರಾಜಧಾನಿ ಬೆಂಗಳೂರು ಸೇರಿ ಇಂದು ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ

ಮೇ 12ರ ಭಾನುವಾರು ಶಿವಮೊಗ್ಗ, ಕೊಡಗು, ಹಾಸನ ಹಾಗೂ ಮೈಸೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಯಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಮೇ 12ರ ಭಾನುವಾರ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ.
ಮೇ 12ರ ಭಾನುವಾರ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. (PTI)

ಬೆಂಗಳೂರು: ಕಳೆದೊಂದು ವಾರದಿಂದ ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು (Karnataka Rain), ತಾಪಮಾನ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆದರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆ (Bengaluru Rain) ಅಲ್ಲಲ್ಲಿ ಅವಾಂತರಗಳನ್ನು ಸೃಷ್ಟಿಸಿತು. ಇಂದು (ಮೇ 12, ಭಾನುವಾರ) ಕೂಡ ಬೆಂಗಳೂರು ನಗರ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಶನಿವಾರ (ಮೇ 11) ಬರೋಬ್ಬರಿ 9 ಸೆಂಟಿ ಮೀಟರ್ ಮಳೆಯಾಗಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಕ್ಷಿಣ ಒಳನಾಡಿನ ಕೆಲವು ಕಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ (Karnataka Weather). ಆದರೆ ಕರ್ನಾಟಕದ ಕರಾವಳಿಯಲ್ಲಿ ಒಣ ಹವೆ ಮುಂದುವರಿದಿದೆ. ತುಮಕೂರು ಜಿಲ್ಲೆಯ ಗುಬ್ಬಿ ಹಾಗೂ ಮಂಡ್ಯ, ಕೃಷ್ಣರಾಜಸಾಗರದಲ್ಲಿ ಶನಿವಾರ ತಲಾ 6 ಸೆಂಟಿ ಮೀಟರ್ ಮಳೆ ಬಿದ್ದಿದೆ. ಮೈಸೂರಿಿನ ಕೆಆರ್‌ ನಗರದಲ್ಲಿ 5, ಬೆಂಗಳೂರು ನಗರದ ಹೆಸರಘಟ್ಟದಲ್ಲಿ 4, ಚಿಕ್ಕಬಳ್ಳಾಪುರದಲ್ಲಿ 3, ಚಿತ್ರದುರ್ಗ, ಬೆಳಗಾವಿ ವಿಮಾನ ನಿಲ್ದಾಣ, ದಾವಣಗೆರೆಯ ಸಂತೆಬೆನ್ನೂರು, ಮಂಡ್ಯದ ಕೃಷ್ಣರಾಜಪೇಟೆ, ಹಾಸನ ಜಿಲ್ಲೆಯ ಅರಕಲಗೂಡು, ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಭಾಗಮಂಡಲ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ತಲಾ 2 ಸೆಂಟಿ ಮೀಟರ್ ಮಳೆಯಾಗಿದೆ.

ಸತತ ಮಳೆಯಿಂದಾಗಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಉಷ್ಣಾಂಶ ಗಮನಾರ್ಹವಾಗಿ ಕಡಿಮೆಯಾಗಿದೆ. ಆದರೆ ಕರಾವಳಿ ಭಾಗದಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ. ರಾಜ್ಯದಲ್ಲಿ ಅತಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ರಾಯಚೂರಿನಲ್ಲಿ ದಾಖಲಾಗಿದೆ.

ಮುಂದಿನ 4 ದಿನ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಅದರಲ್ಲೂ ಇಂದು (ಮೇ 9, ಭಾನುವಾರ) ಯಾವೆಲ್ಲಾ ಜಿಲ್ಲೆಗಳಿಗೆ ವರುಣ ಕೃಪೆ ತೋರಲಿದ್ದಾನೆ ಅನ್ನೋದನ್ನು ನೋಡುವುದಾದರೆ, ಶಿವಮೊಗ್ಗ, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಗಳ ಕೆಲವು ಕಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವೊಂದು ಪ್ರದೇಶಗಳಲ್ಲಿ ಗುಡುಗು ಸಹಿತ ಸಮಳೆಯಾಗುವ ಸಾಧ್ಯತೆ ಇದೆ.

ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಬಳ್ಳಾರಿಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿಯ ಗಾಳಿಯೊಂದಿಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೊಂದು ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ. ನಾಳೆಯಿಂದ (ಮೇ 13, ಸೋಮವಾರ) ಮುಂದಿನ ಶನಿವಾರದವರೆಗೆ (ಮೇ 18) ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಹೇಳಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 32 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಕಳೆದ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಕೆಲವು ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು. ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಬೆಂಗಳೂರು ಸಂಚಾರ ಪೊಲೀಸರು ತಮ್ಮ ಸಿಬ್ಬಂದಿಯನ್ನು ಅನೇಕ ಪ್ರದೇಶಗಳಲ್ಲಿ ನಿಯೋಜಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿಬ್ಬಂದಿ ಈಗಾಗಲೇ ಕಾರ್ಯಾಚರಣೆಗೆ ಇಳಿದಿದ್ದು, ಬಿರುಗಾಳಿಯಿಂದ ಬುಡಮೇಲಾಗಿರುವ ಮರಗಳನ್ನು ತೆರವುಗೊಳಿಸುತ್ತಿದ್ದಾರೆ.

Whats_app_banner