ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮೇ 13: ಬೆಂಗಳೂರಿನಲ್ಲಿ ರಾತ್ರಿ ಗುಡುಗು ಮಿಂಚು ಸಹಿತ ಭಾರಿ ಮಳೆ; ಕರಾವಳಿ ಸೇರಿ ಈ ಜಿಲ್ಲೆಗಳಿಗೆ ಇಂದು ವರುಣನ ಕೃಪೆ ಸಾಧ್ಯತೆ

ಕರ್ನಾಟಕ ಹವಾಮಾನ ಮೇ 13: ಬೆಂಗಳೂರಿನಲ್ಲಿ ರಾತ್ರಿ ಗುಡುಗು ಮಿಂಚು ಸಹಿತ ಭಾರಿ ಮಳೆ; ಕರಾವಳಿ ಸೇರಿ ಈ ಜಿಲ್ಲೆಗಳಿಗೆ ಇಂದು ವರುಣನ ಕೃಪೆ ಸಾಧ್ಯತೆ

ಬೆಂಗಳೂರಿನಲ್ಲಿ ಭಾನುವಾರ ತಡರಾತ್ರಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಿದೆ. ಇಂದು (ಮೇ 13, ಸೋಮವಾರ) ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ಇದೆ.

ಮೇ 13ರ ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರ್ನಾಟಕದ ಹಲವು ಕಡೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮೇ 13ರ ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರ್ನಾಟಕದ ಹಲವು ಕಡೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. (PTI)

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ (Bengaluru Rain) ನಿರೀಕ್ಷೆಯಂತೆ ಭಾನುವಾರ (ಮೇ 12) ಮಳೆಯಾಗಿದೆ. ಆದರೆ ಮಧ್ಯಾಹ್ನ ಅಥವಾ ಸಂಜೆಯ ನಂತರ ಮಳೆಯಾಗಿ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯಕ್ಕೆ (RCB vs DC Match) ಅಡ್ಡಿಯುಂಟು ಮಾಡುವ ಸಾಧ್ಯತೆ ಇತ್ತು. ಆದರೆ ವರುಣ ಆರ್‌ಸಿಬಿಯ ಮಹತ್ವದ ಪಂದ್ಯಕ್ಕೆ ಅಡ್ಡಿಯುಂಟು ಮಾಡಲಿಲ್ಲ. ಬದಲಾಗಿ ತಡರಾತ್ರಿ 1 ಗಂಟೆಯ ನಂತರ ಸಿಲಿಕಾನ್ ಸಿಟಿಯಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಿದೆ. ಎಂಜಿ ರಸ್ತೆ, ಶಿವಾಜಿನಗರ, ವಿಧಾನಸೌಧ, ವಂಸತನಗರ, ಆರ್‌ಟಿ ನಗರ, ಹೆಬ್ಬಾಳ, ಮುನಿರೆಡ್ಡಿಪಾಳ್ಯ, ದಿನ್ನೂರು, ಸುಲ್ತಾನ್ ಪಾಳ್ಯ ಸೇರಿದಂತೆ ನಗರದ ಹಲವು ಕಡೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

ಭಾರತೀಯ ಹವಾಮಾನ ಇಲಾಖೆಯ (Indi Meteorological Department) ಬೆಂಗಳೂರು ಕೇಂದ್ರದ ಮಾಹಿತಿ ಪ್ರಕಾರ, ಮೇ 12ರ ಭಾನುವಾರ ಕರ್ನಾಟಕದ (Karnataka Weather) ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಅದರಲ್ಲೂ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ 8 ಸೆಂಟಿ ಮೀಟರ್ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ 6, ಬೆಳಗಾವಿಯ ಸಂಕೇಶ್ವರ, ಚಿಕ್ಕಮಗಳೂರಿನ ಜಯಪುರದಲ್ಲಿ ತಲಾ 5, ಬೆಳಗಾವಿಯಲ್ಲಿ 4, ಕೊಪ್ಪಳದ ಕುಕನೂರು, ಮುನಿರಾಬಾದ್, ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಚಾಮರಾಜನಗರ ಜಿಲ್ಲೆಯ ಬಂಡೀಪುರ, ಕೊಡಗು ಜಿಲ್ಲೆಯ ಭಾಗಮಂಡಲ, ಪೊನ್ನಂಪೇಟೆಯಲ್ಲಿ ತಲಾ 3 ಸೆಂಟಿ ಮೀಟರ್ ಮಳೆಯಾಗಿದೆ.

ಸತತವಾಗಿ ಮಳೆಯಾಗುತ್ತಿರುವುದರಿಂದ ರಾಜ್ಯದಲ್ಲಿ ತಾಪಮಾನ ಕಡಿಮೆಯಾಗಿದೆ. ಆದರೆ ದಕ್ಷಿಣ ಒಳನಾಡಿನ ಒಂದರೆಡು ಕಡೆಗಳಲ್ಲಿ ಉಷ್ಣಾಂಶ ಗಮನಾರ್ಹವಾಗಿ ಹೆಚ್ಚಳವಾಗಿದೆ. 3.1 ಡಿಗ್ರಿ ಸೆಲ್ಸಿಯಸ್ ನಿಂದ 5 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ಏರಿಕೆಯಾಗಿದೆ. ಉಳಿದಂತೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 40.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮೇ 13ರ ಸೋಮವಾರ ಕರ್ನಾಟಕದಲ್ಲಿ ಯಾವ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ಇದೆ?

ಇಂದು (ಮೇ 13, ಸೋಮವಾರ) ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಗದಗ, ಕೊಪ್ಪಳ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆ ಬೀಳುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಮೇ 14ರ ಮಂಗಳವಾರದಿಂದ ಮೇ 19ರ ಭಾನುವಾರದ ವರೆಗೆ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ತನ್ನ ದೈನಂದಿನ ವರದಿಯಲ್ಲಿ ಹೇಳಿದೆ. ಇನ್ನ ಬೆಂಗಳೂರಿನಲ್ಲಿ ಇವತ್ತು (ಮೇ 13, ಸೋಮವಾರ) ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಹಗುರದಿಂದ ಕೂಡಿದ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

IPL_Entry_Point