ಕರ್ನಾಟಕ ಹವಾಮಾನ ಮೇ 22: ರಾಜ್ಯದಲ್ಲಿ ಮುಂದುವರಿದ ವರುಣನ ಅಬ್ಬರ; ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯ ಮುನ್ಸೂಚನೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮೇ 22: ರಾಜ್ಯದಲ್ಲಿ ಮುಂದುವರಿದ ವರುಣನ ಅಬ್ಬರ; ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯ ಮುನ್ಸೂಚನೆ

ಕರ್ನಾಟಕ ಹವಾಮಾನ ಮೇ 22: ರಾಜ್ಯದಲ್ಲಿ ಮುಂದುವರಿದ ವರುಣನ ಅಬ್ಬರ; ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯ ಮುನ್ಸೂಚನೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ 22ರ ಬುಧವಾರ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಅಂದರೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಇತರೆ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಇತರೆ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರು: ಏಪ್ರಿಲ್ ತಿಂಗಳಲ್ಲಿ ರಣ ಬಿಸಿಲಿಗೆ ಹೈರಾಣವಾಗಿದ್ದ ಕರ್ನಾಟಕದ (Karnataka Weather) ಜನತೆಗೆ ವರುಣ ಮೇ ತಿಂಗಳಲ್ಲಿ ಸಖತ್ ಕೂಲ್ ಆಗಿಸಿದ್ದಾನೆ. ಕಳೆದ 10 ದಿನಗಳಿಂದ ರಾಜ್ಯದಲ್ಲಿ ಭಾರಿ (Heavy Rain In Karnataka) ಮಳೆಯಾಗುತ್ತಿದ್ದು, ಇಂದು (ಮೇ 22, ಬುಧವಾರ) ಹಲವು ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕೆಲವೆಡೆ ಮಳೆ ಭಾರಿ (Heavy Rain) ಅವಾಂತರವನ್ನೇ ಸೃಷ್ಟಿ ಮಾಡಿದೆ. ಆರಂಭದಲ್ಲಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಅಲ್ಲಲ್ಲಿ ಮಾತ್ರ ವರುಣ ಅಬ್ಬರಿಸುತ್ತಿದ್ದ ಇದೀಗ ಕರಾವಳಿಯಲ್ಲಿ ಜೋರು ಮಳೆಯಾಗುತ್ತಿದ್ದು, ಮೇ 22ರ ಬುಧವಾರ ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಅಂದರೆ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇನ್ನು ಮಂಗಳವಾರ (ಮೇ 21) ದಕ್ಷಿಣ ಒಳನಾಡಿನ ಬಹುತೇಕ ಕಡೆ, ಕರಾವಳಿಯ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಬರೋಬ್ಬರಿ 10 ಸೆಂಟಿ ಮೀಟರ್ ಮಳೆಯಾಗಿದೆ. ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ 8, ಉತ್ತರ ಕನ್ನಡದಲ್ಲಿ 7, ಮೈಸೂರು ಜಿಲ್ಲೆಯ ಹೆಚ್‌ಡಿ ಕೋಟೆಯಲ್ಲಿ 7, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ 7, ತುಮಕೂರು ಜಿಲ್ಲೆಯ ಸಿರಾದಲ್ಲಿ 7 ಹಾಗೂ ಚಿಕ್ಕಮಗಳೂರು ಜಿಲ್ಲೆಯ ಯುಗಟಿಯಲ್ಲೂ 7 ಸೆಂಟಿ ಮೀಟರ್ ಮಳೆಯಾಗಿದೆ.

ಉತ್ತರರ ಕನ್ನಡದ ಹೊನವರ ಆಬ್ಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ಹಾಸನ ಜಿಲ್ಲೆಯ ಶ್ರವಣಬೆಳಗೊಳ, ಕೊಡಗು ಜಿಲ್ಲೆಯ ಭಾಗಮಂಡಲ, ಉತ್ತರ ಕನ್ನಡದ ಕಿರವತ್ತಿಯಲ್ಲಿ ತಲಾ 5, ದಕ್ಷಿಣ ಕನ್ನಡದ ಮಂಗಳೂರು, ಬೆಂಗಳೂರು ನಗರರದ ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್, ವಿಜಯನಗದ ಹಗರಿಬೊಮ್ಮನಹಳ್ಳಿ, ಹಾಸನದ ಸಿಆರ್ ಪಟ್ಟಣ, ಚಿತ್ರದುರ್ಗದ ಹೊಸದುರ್ಗ, ದಾವಣಗೆರೆಯಲ್ಲಿ ತಲಾ 4 ಸೆಂಟಿ ಮೀಟರ್ ಮಳೆ ಸುರಿದಿದೆ. ಇನ್ನ ಸತತ ಮಳೆಯಿಂದಾಗಿ ತಾಪಮಾನದಲ್ಲಿ ಗಮನಾರ್ಹವಾಗಿ ಇಳಿಕೆಯಾಗಿದೆ.

ಕರಾವಳಿಯ ಕೆಲವು ಕಡೆ ಹಾಗೂ ದಕ್ಷಿಣ ಮತ್ತು ಉತ್ತರ ಒಳಡಿನ ಒಂದೆರಡು ಕಡೆಗಳಲ್ಲಿ ಬಿಸಿ ಕಡಿಮೆಯಾಗಿದೆ. ರಾಜ್ಯದಲ್ಲಿ ಅತಿ ಗರಿಷ್ಠ ಉಷ್ಣಾಂಶ ಕಲಬುರಗಿಯಲ್ಲಿ ದಾಖಲಾಗಿದೆ. ಇಲ್ಲಿ 36.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ.

ಮೇ 22ರ ಬುಧವಾರ ಎಲ್ಲೆಲ್ಲಿ ಮಳೆಯಾಗುತ್ತೆ?

ಹವಾಮಾನ ಕೇಂದ್ರದ ಮಾಹಿತಿ ಪ್ರಕಾರ, ಮೇ 27ರ ಸೋಮವಾರದ ವರೆಗೆ ಕರ್ನಾಟಕದ ಹಲವು ಕಡೆಗಳಲ್ಲಿ ಮಳೆಯಾಗಲಿದೆ. ಅದರಲ್ಲೂ ಇಂದು (ಮೇ 22, ಬುಧವಾರ) ಎಲ್ಲೆಲ್ಲಿ ಮಳೆಯಾಗಲಿದೆ ಎಂಬುದನ್ನು ನೋಡುವುದಾದರೆ ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಅಂದರೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ಭಾಗದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಿನಲ್ಲಿ (Bengaluru Weather) ಮೋಡ ಕವಿತ ವಾತಾವರಣ ಇದ್ದು, ಗುಡುಗು ಸಹಿತ ಮಳೆಯಾಗುವ (Bengaluru Rain) ನಿರೀಕ್ಷೆ ಇದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner