ಕರ್ನಾಟಕ ಹವಾಮಾನ: ಬೆಂಗಳೂರು, ಮಂಡ್ಯ, ಬೆಳಗಾವಿಯಲ್ಲಿ ಚಳಿ ಪ್ರಮಾಣ ಹೆಚ್ಚಳ, 12 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ: ಬೆಂಗಳೂರು, ಮಂಡ್ಯ, ಬೆಳಗಾವಿಯಲ್ಲಿ ಚಳಿ ಪ್ರಮಾಣ ಹೆಚ್ಚಳ, 12 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ: ಬೆಂಗಳೂರು, ಮಂಡ್ಯ, ಬೆಳಗಾವಿಯಲ್ಲಿ ಚಳಿ ಪ್ರಮಾಣ ಹೆಚ್ಚಳ, 12 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Weather Today: ಕರ್ನಾಟಕದ ಕರಾವಳಿ,ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಗುರುವಾರ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಕೆಲವೆಡೆ ಚಳಿ ಪ್ರಮಾಣವೂ ಅಧಿಕವಾಗಿದೆ.

ಕರ್ನಾಟಕದಲ್ಲಿ ಗುರುವಾರವೂ ಹಲವು ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯಿದೆ.
ಕರ್ನಾಟಕದಲ್ಲಿ ಗುರುವಾರವೂ ಹಲವು ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯಿದೆ.

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯೂ ಇದೆ. ಚಳಿಯ ಅನುಭವವೂ ಆಗುತ್ತಿದೆ. ಉತ್ತರ ಕರ್ನಾಟಕ,. ಕರಾವಳಿ, ಮಲೆನಾಡು ಸೇರಿದಂತೆ ಹಲವು ಭಾಗಗಳಲ್ಲಿ ಗುರುವಾರವೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಳಗಾವಿ, ತುಮಕೂರು, ಉತ್ತರ ಕನ್ನಡ, ಧಾರವಾಡ, ಶಿವಮೊಗ್ಗ ಸೇರಿದಂತೆ 12 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು ಯಲ್ಲೋ ಅಲರ್ಟ್‌ ಅನ್ನು ಘೋಷಣೆ ಮಾಡಿದೆ. ಇತರೆಡೆಯೂ ಸಾಧಾರಣ ಮಳೆಯಾಗಬಹುದು ಎನ್ನುವ ಸೂಚನೆ ನೀಡಲಾಗಿದೆ. ಬೆಂಗಳೂರು, ಬೆಳಗಾವಿ, ಮಂಡ್ಯ, ಚಿಕ್ಕಮಗಳೂರು, ಚಾಮರಾಜನಗರ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳ ಉಷ್ಣಾಂಶದಲ್ಲಿ ಕುಸಿತ ಕಂಡು ಬಂದಿದ್ದು. ಚಳಿಯ ಪ್ರಮಾಣ ಅಧಿಕವಾಗಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇಂದು ಎಲ್ಲೆಲ್ಲಿ ಮಳೆ

ಕರಾವಳಿ ಜಿಲ್ಲೆಗಳಅದ ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಮಧ್ಯ ಕರ್ನಾಟಕದ ಚಿತ್ರದುರ್ಗ, ದಾವಣಗೆರೆ, ತುಮಕೂರು, ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಗುರುವಾರದಂದು ಭಾರೀ ಮಳೆಯಾಗುವ ಕುರಿತು ಯಲ್ಲೋ ಅಲರ್ಟ್‌ ಅನ್ನು ಕೂಡ ಘೋಷಣೆ ಮಾಡಲಾಗಿದೆ.

ಕರಾವಳಿಯ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆ, ಒಳನಾಡು ಜಿಲ್ಲೆಗಳ ಅನೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು, ಗುಡುಗು ಸಹಿತ ಮಳೆಯಾಗುವ ಸೂಚನೆಯೂ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇನ್ನೂ ಮಳೆ ಇದೆ

ಅಕ್ಟೋಬರ್ 24 ರವರೆಗೆ ಕರ್ನಾಟಕದ ನಾನ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯಿದೆ. ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಅಕ್ಟೋಬರ್ 22 ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ನಂತರ ಮಳೆ ತೀವ್ರತೆ ಮತ್ತು ಮಳೆ ವಿತರಣೆ ಕಡಿಮೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು ಜಿಲ್ಲೆಗಳಿಗೆ ಅಕ್ಟೋಬರ್ 22 ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ, ನಂತರ ಮಳೆ ತೀವ್ರತೆ ಮತ್ತು ಮಳೆ ವಿತರಣೆ ಕಡಿಮೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅಕ್ಟೋಬರ್ 23 ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಅಧಿಕ ಮಳೆ

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಬುಧವಾರ ಮಳೆಯಾಗಿದೆ. ಬೆಂಗಳೂರಿನ ಜಿಕೆವಿಕೆಯಲ್ಲಿ ಅತ್ಯಧಿಕ 10 ಸೆ.ಮೀ, ಬೆಂಗಳೂರಿನ ಎಚ್‌ಎಎಲ್‌ ಭಾಗದಲ್ಲಿ 9 ಸೆ.ಮೀ, ಬೆಳಗಾವಿಯ ಯಡವಾಡ, ಮಂಡ್ಯದ ಬೆಳ್ಳೂರಿನಲ್ಲೂ ಭಾರೀ ಮಳೆಯಾಗಿದೆ.

ತುಮಕೂರಿನ ಗುಬ್ಬಿ,ಕುಣಿಗಲ್‌, ಮಧುಗಿರಿ, ಧಾರವಾಡ, ಕಲಬುರಗಿ, ಕೋಲಾರದ ರಾಯಲ್ಪಾಡು, ಉತ್ತರ ಕನ್ನಡದ ಹಳಿಯಾಳ, ಅಂಕೋಲಾ, ಕ್ಯಾಸಲ್‌ ರಾಕ್‌, ಮಂಕಿ, ಕುಮಟಾ, ಜಗಲ್‌ಬೆಟ್‌, ಸಿದ್ದಾಪುರ, ಕಲಬುರಗಿಯ ಜೇವರ್ಗಿ, ಬಾಗಲಕೋಟೆ ಜಿಲ್ಲೆಯ ಬೀಳಗಿ, ಲೋಕಾಪುರ, ಮಹಾಲಿಂಗಪುರ, ಚಿಕ್ಕಮಗಳೂರಿನ ಶೃಂಗೇರಿ, ತರೀಕೆರೆ, ಕಡೂರು, ಜಯಪುರ, ಬಳ್ಳಾರಿಯ ಸಂಡೂರು, ಹಾಸನದ ಶ್ರವಣಬೆಳಗೊಳ, ಹುಬ್ಬಳ್ಳಿ, ಗದಗ ಜಿಲ್ಲೆಯ ನರಗುಂದ, ದಕ್ಷಿಣ ಕನ್ನಡದ ಧರ್ಮಸ್ಥಳ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ವಿಜಯಪುರ ಜಿಲ್ಲೆಯ ಝಳಕಿ, ಕೊಡಗಿನ ಸೋಮವಾರಪೇಟೆ ,ನಾಪೊಕ್ಲು ಸಹಿತ ಹಲವು ಭಾಗಗಳಲ್ಲಿ ಮಳೆಯಾಗಿದೆ.

ಉಷ್ಣಾಂಶ ಕುಸಿತ

ಕರ್ನಾಟಕದ ಹಲವು ಭಾಗಗಳಲ್ಲಿ ಉಷ್ಣಾಂಶ ಕುಸಿತ ಕಂಡು ಚಳಿ ಅನುಭವವಾಗುತ್ತಿದೆ ಮಂಗಳೂರು, ಮಂಡ್ಯ, ಚಾಮರಾಜನಗರ ಸಹಿತ ಹಲವು ಭಾಗಗಳಲ್ಲಿ ಈ ವಾತಾವರಣವಿದೆ. ಬೆಂಗಳೂರಿನಲ್ಲಿ ವಾಯುಭಾರ ಕುಸಿತದಿಂದ ಚಳಿಯ ಪ್ರಮಾಣ ಅಧಿಕವಾಗಿದೆ.

ಬೆಂಗಳೂರು ನಗರದಲ್ಲಿ 21.9 ಡಿಗ್ರಿ ಸೆಲ್ಸಿಯಸ್‌, ಮಂಡ್ಯದಲ್ಲಿ 24.2 ಡಿಗ್ರಿ ಸೆಲ್ಸಿಯಸ್‌, ಚಿಂತಾಮಣಿಯಲ್ಲಿ 24.6 ಡಿಗ್ರಿ ಸೆಲ್ಸಿಯಸ್‌, ಚಿಕ್ಕಮಗಳೂರಿನಲ್ಲಿ 23.6 ಡಿಗ್ರಿ ಸೆಲ್ಸಿಯಸ್‌, ಚಿತ್ರದುರ್ಗದಲ್ಲಿ 25.9 ಡಿಗ್ರಿ ಸೆಲ್ಸಿಯಸ್‌, ದಾವಣಗೆರೆಯಲ್ಲಿ 26 ಡಿಗ್ರಿ ಸೆಲ್ಸಿಯಸ್‌ , ಚಾಮರಾಜನಗರದಲ್ಲಿ 26.8 ಡಿಗ್ರಿ ಸೆಲ್ಸಿಯಸ್‌ , ಮಡಿಕೇರಿಯಲ್ಲಿ 25.2 ಡಿಗ್ರಿ ಸೆಲ್ಸಿಯಸ್‌, ಶಿವಮೊಗ್ಗದಲ್ಲಿ 25.4 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 26.5 ಡಿಗ್ರಿ ಸೆಲ್ಸಿಯಸ್‌, ಬೀದರ್‌ನಲ್ಲಿ 29.5 ಡಿಗ್ರಿ ಸೆಲ್ಸಿಯಸ್‌, ವಿಜಯಪುರದಲ್ಲಿ 28 ಡಿಗ್ರಿ ಸೆಲ್ಸಿಯಸ್‌, ಬಾಗಲಕೋಟೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್‌, ಧಾರವಾಡದಲ್ಲಿ 28.4 ಡಿಗ್ರಿ ಸೆಲ್ಸಿಯಸ್‌, ಗದಗದಲ್ಲಿ 27.6 ಡಿಗ್ರಿ ಸೆಲ್ಸಿಯಸ್‌, ಕಲಬುರಗಿಯಲ್ಲಿ 30.5 ಡಿಗ್ರಿ ಸೆಲ್ಸಿಯಸ್‌, ಕೊಪ್ಪಳದಲ್ಲಿ 28.9 ಡಿಗ್ರಿ ಸೆಲ್ಸಿಯಸ್‌, ರಾಯಚೂರಿನಲ್ಲಿ 30.4 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿ ಭಾಗದ ಹೊನ್ನಾವರದಲ್ಲಿ 29.4 ಡಿಗ್ರಿ ಸೆಲ್ಸಿಯಸ್‌, ಶಿರಾಲಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್‌, ಮಂಗಳೂರು ವಿಮಾನ ನಿಲ್ದಾಣದಲ್ಲಿ 27.6 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

Whats_app_banner