ಕರ್ನಾಟಕ ಹವಾಮಾನ ಮೇ 19: ಚಿತ್ರದುರ್ಗ, ಹಾಸನ ಸೇರಿ 4 ಜಿಲ್ಲೆಗಳಲ್ಲಿ ಭಾರಿ ಮಳೆ, ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮೇ 19: ಚಿತ್ರದುರ್ಗ, ಹಾಸನ ಸೇರಿ 4 ಜಿಲ್ಲೆಗಳಲ್ಲಿ ಭಾರಿ ಮಳೆ, ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ಮೇ 19: ಚಿತ್ರದುರ್ಗ, ಹಾಸನ ಸೇರಿ 4 ಜಿಲ್ಲೆಗಳಲ್ಲಿ ಭಾರಿ ಮಳೆ, ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ಮೇ 19: ಕರ್ನಾಟಕದಲ್ಲಿ ಚಿತ್ರದುರ್ಗ, ಹಾಸನ ಸೇರಿ 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಇನ್ನುಳಿದಂತೆ ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಉಳಿದೆಡೆ ಕೆಲವು ಪ್ರದೇಶಗಳಲ್ಲಿ ಮಳೆ, ಒಣಹವೆ ಇರಲಿದೆ ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಮೇ 19: ಚಿತ್ರದುರ್ಗ, ಹಾಸನ ಸೇರಿ 4 ಜಿಲ್ಲೆಗಳಲ್ಲಿ ಭಾರಿ ಮಳೆ, ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ ಮೇ 19: ಚಿತ್ರದುರ್ಗ, ಹಾಸನ ಸೇರಿ 4 ಜಿಲ್ಲೆಗಳಲ್ಲಿ ಭಾರಿ ಮಳೆ, ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. (ಸಾಂಕೇತಿಕ ಚಿತ್ರ)

ಕರ್ನಾಟಕ ಹವಾಮಾನ ಮೇ 19: ಕರ್ನಾಟಕದಲ್ಲಿ ಇಂದು ಮಳೆಯ ವಾತಾವರಣ ಇದ್ದು, ಕರ್ನಾಟಕದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮೇ 22ರ ತನಕ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮೇ 18 ರಿಂದ 20ರ ತನಕ, ಕರಾವಳಿ ಜಿಲ್ಲೆ, ಮಲೆನಾಡು ಭಾಗದಲ್ಲಿ ಮೇ 20 ರಿಂದ 22 ರ ತನಕ ಅತಿ ಹೆಚ್ಚು ಮಳೆ (11.5 ಎಂಎಂನಿಂದ 204.5 ಎಂಎಂ) ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು (ಮೇ 19) ಚಿತ್ರದುರ್ಗ, ಹಾಸನ ಸೇರಿ 4 ಜಿಲ್ಲೆಗಳಲ್ಲಿ ಭಾರಿ ಮಳೆ, ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ವರದಿ ತಿಳಿಸಿದೆ.

ಬೆಂಗಳೂರು ಇಂದಿನ ಹವಾಮಾನ

ಕರ್ನಾಟಕದ ದಕ್ಷಿಣ ಒಳನಾಡು ಪ್ರದೇಶದ ವ್ಯಾಪ್ತಿಗೆ ಬರುವ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಇಂದು (ಮೇ 19) ಮಳೆಯ ಸಾಧ್ಯತೆ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ತಾಪಮಾನ ಇಳಿಕೆಯಾಗಿದ್ದು, ನಿನ್ನೆ (ಮೇ 18) ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 29.7 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ನಿನ್ನೆಯ 24 ಗಂಟೆ ಅವಧಿಯಲ್ಲಿ 34.2 ಎಂಎಂ ಮಳೆಯಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಗರಿಷ್ಠ ತಾಪಮಾನ 31.1 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. 16.8 ಎಂಎಂ ಮಳೆಯಾಗಿತ್ತು ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವಿಜ್ಞಾನಿ ಲತಾಶ್ರೀಧರ್ ತಿಳಿಸಿದ್ದಾರೆ.

ಕರ್ನಾಟಕ ಹವಾಮಾನ ಇಂದು ಮೇ 19

ರಾಜ್ಯದಾದ್ಯಂತ ಗುಡುಗು ಮಿಂಚು ಸಹಿತ ಮಲೆನಾಡು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ, ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

ಕರಾವಳಿ ಕರ್ನಾಟಕ ಇಂದಿನ ಹವಾಮಾನ: ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀಯಿಂದ ಅತಿ ಭಾರಿ ಮಳೆ/ ಗುಡುಗು ಸಹಿತ ಮಳೆ (ಗಂಟೆಗೆ 30-40 ಕಿ.ಮೀ.) ಮತ್ತು ಸಾಧಾರಣ ಮಳೆ/ ಗುಡುಗು ಸಹಿತ ಮಳೆ (ಗಂಟೆಗೆ 30-40 ಕಿ.ಮೀ.) ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಕರ್ನಾಟಕದ ಉತ್ತರ ಒಳನಾಡು ಇಂದಿನ ಹವಾಮಾನ: ಹಾವೇರಿ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆ/ ಗುಡುಗು ಸಹಿತ ಮಳೆ (ಗಂಟೆಗೆ 40-50 ಕಿ.ಮೀ.) ಮತ್ತು ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆ (ಗಂಟೆಗೆ 40-50 ಕಿ.ಮೀ.) ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ವರದಿ ವಿವರಿಸಿದೆ.

ಕರ್ನಾಟಕದ ದಕ್ಷಿಣ ಒಳನಾಡು ಇಂದಿನ ಹವಾಮಾನ: ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆ/ಗುಡುಗು ಸಹಿತ ಮಳೆ (ಗಂಟೆಗೆ 40-50 ಕಿ.ಮೀ.) ಬೀಳುವ ಸಾಧ್ಯತೆ ಇದೆ. ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ/ಗುಡುಗು ಸಹಿತ ಮಳೆ (ಗಂಟೆಗೆ 40-50 ಕಿ.ಮೀ.) ಬೀಳುವ ಸಾಧ್ಯತೆ ಇದೆ.

ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ (ಗಂಟೆಗೆ 40-50 ಕಿಮೀ) ಸಾಧಾರಣ ಮಳೆ/ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ವರದಿ ಹೇಳಿದೆ.

ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.