ಫೆಂಗಲ್ ಚಂಡಮಾರುತ; ಬೆಂಗಳೂರು, ತುಮಕೂರು ಸೇರಿ 10 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ, ಚಳಿ ಹೆಚ್ಚಳ, ಉಳಿದೆಡೆ ಒಣಹವೆ
ಕನ್ನಡ ಸುದ್ದಿ  /  ಕರ್ನಾಟಕ  /  ಫೆಂಗಲ್ ಚಂಡಮಾರುತ; ಬೆಂಗಳೂರು, ತುಮಕೂರು ಸೇರಿ 10 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ, ಚಳಿ ಹೆಚ್ಚಳ, ಉಳಿದೆಡೆ ಒಣಹವೆ

ಫೆಂಗಲ್ ಚಂಡಮಾರುತ; ಬೆಂಗಳೂರು, ತುಮಕೂರು ಸೇರಿ 10 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ, ಚಳಿ ಹೆಚ್ಚಳ, ಉಳಿದೆಡೆ ಒಣಹವೆ

Cyclone Fengal: ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡು, ಪುದುಚೇರಿ, ಕೇರಳ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇದರ ಪರಿಣಾಮ ಬೆಂಗಳೂರು, ತುಮಕೂರು ಸೇರಿ 10 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ ಇದೆ. ಅದೇ ರೀತಿ ಚಳಿ ಹೆಚ್ಚಳವಾಗಬಹುದು ಉಳಿದೆಡೆ ಒಣಹವೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಇಂದು: ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರು, ತುಮಕೂರು ಸೇರಿ 10 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ ಇದೆ. ಅದೇ ರೀತಿ ಚಳಿ ಹೆಚ್ಚಳವಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣಹವೆ ಇರಲಿದೆ ಎಂದು ಹವಾಮಾನ ವರದಿ ಹೇಳಿದೆ. (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ ಇಂದು: ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರು, ತುಮಕೂರು ಸೇರಿ 10 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ ಇದೆ. ಅದೇ ರೀತಿ ಚಳಿ ಹೆಚ್ಚಳವಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣಹವೆ ಇರಲಿದೆ ಎಂದು ಹವಾಮಾನ ವರದಿ ಹೇಳಿದೆ. (ಸಾಂಕೇತಿಕ ಚಿತ್ರ)

Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಸೃಷ್ಟಿಯಾಗಿರುವ ಫೆಂಗಲ್ ಚಂಡಮಾರುತ ತಮಿಳುನಾಡು ಮೇಲೆ ಕೇರಳದ ಕಡೆ ಹಾದು ಹೋಗುತ್ತಿರುವ ಕಾರಣ ಇಂದು (ಡಿಸೆಂಬರ್ 1) ಬೆಂಗಳೂರು, ತುಮಕೂರು ಸೇರಿ 10 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕೆಲವು ಕಡೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯೂ ಇದೆ. ಈಗಾಗಲೇ ಇರುವ ಚಳಿಯೊಂದಿಗೆ ಮಳೆಯ ವಾತಾವರಣ ಚಳಿಯ ತೀವ್ರತೆಯನ್ನು ಇನ್ನಷ್ಟು ಹೆಚ್ಚಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಇರಲಿದ್ದು, ಕೆಲವು ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಹವಾಮಾನ ಇಂದು; 10 ಜಿಲ್ಲೆಗಳಲ್ಲಿ ಮಳೆ, ಉಳಿದೆಡೆ ಒಣಹವೆ

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತ ಮತ್ತು ಅದರ ಪರಿಣಾಮವಾಗಿ ಸೃಷ್ಟಿಯಾದ ಫೆಂಗಲ್ ಚಂಡಮಾರುತದ ವೇಗ ಕಡಿಮೆಯಾಗುತ್ತಿದ್ದು ಸದ್ಯ ತಮಿಳುನಾಡು- ಪುದುಚೇರಿ ದಾಟಿ ಕೇರಳದ ಕಡೆಗೆ ಹೋಗುತ್ತಿದೆ. ಕೇರಳದ ಅರಬ್ಬಿ ಸಮುದ್ರ ಮಟ್ಟದಲ್ಲಿ ಇದರ ವೇಗ ಇನ್ನೂ ಕಡಿಮೆಯಾಗಲಿದೆ. ಆದರೆ ಚಂಡಮಾರುತ ಹಾದು ಹೋಗುವಾಗ ಆ ಭೌಗೋಳಿಕ ಪ್ರದೇಶ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರ ಮಳೆಯಿಂದ ಭಾರಿ ಮಳೆ ಸುರಿಯುವುದು ಸಹಜ. ಅದರಂತೆ ಈಗ ತಮಿಳುನಾಡು, ಕೇರಳ, ಪುದುಚೇರಿ, ಕರ್ನಾಟಕದ ಕೆಲ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ಹವಾಮಾನ ವರದಿ ಹೇಳಿದೆ.

ಈ ವರದಿ ಪ್ರಕಾರ, ಕರ್ನಾಟಕದ ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಮೇಲೆ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು ಮತ್ತು ದಕ್ಷಿಣ ಒಳ ಕರ್ನಾಟಕದ ತುಮಕೂರು, ಹಾಸನ, ಮಂಡ್ಯ, ಮೈಸೂರು, ಚಿತ್ರದುರ್ಗ, ಕೊಡಗು ಜಿಲ್ಲೆಗಳಲ್ಲಿ ಹಗುರ ಅಥವಾ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉತ್ತರ ಒಳ ಕರ್ನಾಟಕದ ರಾಯಚೂರು, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇರಬಹುದು.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು (ಡಿಸೆಂಬರ್ 1) ಬಹುತೇಕ ಮೋಡ ಕವಿದ ವಾತಾವರಣ ಇರಲಿದೆ. ಬಹುತೇಕ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯೂ ಇದೆ. ಈ ಎರಡೂ ಜಿಲ್ಲೆಗಳಲ್ಲಿ ಈ ದಿನ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಡಾ ಎನ್‌ ಪುವಿಯರಸನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ನಡುವೆ, ಕರ್ನಾಟಕದಲ್ಲಿ ನಿನ್ನೆ (ನವೆಂಬರ್ 30) ಗರಿಷ್ಠ ಉಷ್ಣಾಂಶ 34.5 ಡಿಗ್ರಿ ಸೆಲ್ಶಿಯಸ್‌ ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರು ಪ್ರದೇಶದಲ್ಲಿ ದಾಖಲಾಗಿದೆ. ಅದೇ ರೀತಿ ಕನಿಷ್ಠ ಉಷ್ಣಾಂಶ 10.6 ಡಿಗ್ರಿ ಸೆಲ್ಶಿಯಸ್ ವಿಜಯಪುರದಲ್ಲಿ ದಾಖಲಾಗಿದೆ.

ಪ್ರಮುಖ ನಗರಗಳಲ್ಲಿ ಇಂದಿನ ತಾಪಮಾನ: ಬೆಂಗಳೂರು ನಗರದಲ್ಲಿ ಗರಿಷ್ಠ 23 ಡಿಗ್ರಿ ಸೆಲ್ಶಿಯಸ್, ಕನಿಷ್ಠ 20 ಡಿಗ್ರಿ ಸೆಲ್ಶಿಯಸ್‌, ಮಂಗಳೂರು ನಗರದಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಢ 22 ಡಿಗ್ರಿ ಸೆಲ್ಶಿಯಸ್‌, ಚಿತ್ರದುರ್ಗದಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಶಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಶಿಯಸ್‌, ಗದಗದಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಶಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಶಿಯಸ್‌, ಹೊನ್ನಾವರದಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 19 ಡಿಗ್ರಿ ಸೆಲ್ಶಿಯಸ್‌, ಕಲಬುರಗಿಯಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 19 ಡಿಗ್ರಿ ಸೆಲ್ಶಿಯಸ್‌, ಬೆಳಗಾವಿಯಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಶಿಯಸ್‌, ಕನಿಷ್ಠ 14 ಡಿಗ್ರಿ ಸೆಲ್ಶಿಯಸ್‌ ಇರಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

Whats_app_banner