Karnataka Rains: ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌, ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಬೀದರ್‌ ಕಲಬುರಗಿಯಲ್ಲೂ ಇಂದು ಭಾರೀ ಮಳೆ-karnataka weather today september 24 heavy rain alert in belgaum kalburgi bellary uttara kannada dakshina kannada kub ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌, ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಬೀದರ್‌ ಕಲಬುರಗಿಯಲ್ಲೂ ಇಂದು ಭಾರೀ ಮಳೆ

Karnataka Rains: ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌, ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಬೀದರ್‌ ಕಲಬುರಗಿಯಲ್ಲೂ ಇಂದು ಭಾರೀ ಮಳೆ

ಕರ್ನಾಟಕದ ಕರಾವಳಿ ಭಾಗದಲ್ಲಿ ಮಂಗಳವಾರ ಭಾರೀ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ಮಲೆನಾಡು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸೂಚನೆಯಿದೆ.

ಬೆಂಗಳೂರಿನ ಸಂಜಯ್‌ ನಗರದಲ್ಲೂ ಸೋಮವಾರ ರಾತ್ರಿ ಮಳೆಯಾಗಿದೆ.
ಬೆಂಗಳೂರಿನ ಸಂಜಯ್‌ ನಗರದಲ್ಲೂ ಸೋಮವಾರ ರಾತ್ರಿ ಮಳೆಯಾಗಿದೆ. (ajay Rajeeva)

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗ ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟಂಬರ್‌24ರ ಮಂಗಳವಾರ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಂತೂ ಭಾರೀಯಿಂದ ಅತೀ ಭಾರೀ ಮಳೆಯಾಗುವ ಸೂಚನೆಯಿದ್ದು. ಆ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್‌, ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು ಆ ಆರೂ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ವಿಜಯಪುರ, ರಾಯಚೂರು, ಬಳ್ಳಾರಿ, ವಿಜಯನಗರ, ಗದಗ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲೂ ಭಾರೀ ಮಳೆ ನಿರೀಕ್ಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಅನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಘೋಷಣೆ ಮಾಡಿದೆ. ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಯ ಕೆಲ ಭಾಗಗಳಲ್ಲೂ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಗಳು ದಟ್ಟವಾಗಿವೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಹಲವೆಡೆ ಭಾರೀ ಮಳೆ

ಮಂಗಳವಾರದಂದು ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಭಾರೀಯಿಂದ ಅತೀ ಭಾರಿ ಹಾಗೂ ಇನ್ನೂ ಹಲವೆಡೆ ಅತ್ಯಂತ ಭಾರೀ ಮಳಯಾಗುವ ಸಾಧ್ಯತೆ ದಟ್ಟವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲೂ ಭಾರಿಯಿಂದ ಅತಿ ಭಾರೀ ಸಾಧಾರಣ ಮಳೆಯಾಗುವ ಸೂಚನೆ ನೀಡಲಾಗಿದೆ.

ಬೆಳಗಾವಿ, ಬೀದರ್‌, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲೂ ಒಂದೆರಡು ಕಡೆ ಭಾರೀಯಿಂದ ಅತಿ ಭಾರೀ ಮಳೆ ಗುಡುಗು ಸಮೇತ ಆಗಲಿದೆ. ಈ ಜಿಲ್ಲೆಗಳಲ್ಲಿ ಗಾಳಿಯ ಪ್ರಮಾಣವೂ ಅಧಿಕವಾಗಿರಲಿದೆ. ಈ ಎಲ್ಲಾ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆಯಾಗಿದೆ.

ರಾಯಚೂರು, ವಿಜಯಪುರ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಗುಡುಗು ಸಮೇತ ಕಂಡು ಬರುವ ಸಾಧ್ಯತೆಗಳು ದಟ್ಟವಾಗಿವೆ. ಈ ಭಾಗದಲ್ಲೂ ನಿರಂತರ ಗಾಳಿ ವೇತ ಅತಿಯಾಗಿರಲಿದೆ. ಮಲೆನಾಡಿನ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲೂ ಭಾರೀ ಮಳೆಯಾಗಲಿದ್ದು ಇಲ್ಲಿ ಯಲ್ಲೋ ಅಲರ್ಟ್‌ ಘೋಷಣೆಯಾಗಿದೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಭಾರೀ ಮಳೆಯಾಗಬಹುದು. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಬಹುದು.

ಮಳೆಯೂ ಆಗಿದೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೋಮವಾರ ಮಳೆಯಾಗಿದೆ. ಕಾರವಾರದಲ್ಲಿ ಅತ್ಯಧಿಕ 9 ಸೆ.ಮೀ ಮಳೆ ಸುರಿದಿದೆ. ಬೆಳಗಾವಿ ಜಿಲ್ಲೆಯ ಸೇಡಬಾಳ, ತುಮಕೂರು ಜಿಲ್ಲೆಯ ಮಧುಗಿರಿಯಲ್ಲೂ ಮಳೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಾಲಿ, ಹಳಿಯಾಳ, ಮಂಕಿ, ಅಂಕೋಲಾ, ಹೊನ್ನಾವರ, ಗೇರುಸೊಪ್ಪ, ಗೋಕರ್ಣ, ಉಡುಪಿ, ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಸಂಕೇಶ್ವರ, ರಾಯಭಾಗ, ಚಿಕ್ಕೋಡಿ, ಹಿಡಕಲ್‌ ಡ್ಯಾಂ, ಹುಕ್ಕೇರಿ, ಯಾದಗಿರಿ ಜಿಲ್ಲೆಯ ಸೈದಾಪುರ, ಧಾರವಾಡ, ಕಲಘಟಗಿ, ದಾವಣಗೆರೆ, ಕೋಲಾರ ಜಿಲ್ಲೆಯ ರಾಯಲ್ಪಾಡು, ಕೊಪ್ಪಳ ಜಿಲ್ಲೆಯ ಕುಕನೂರನಲ್ಲೂ ಮಳೆಯಾಗಿದೆ.

ಗದಗ ಜಿಲ್ಲೆಯ ನರಗುಂದ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ವಿಜಯಪುರ ಜಿಲ್ಲೆಯ ಝಳಕಿ, ಸಿಂದಗಿ, ಆಲಮಟ್ಟಿ, ಗದಗ, ಶಿರಹಟ್ಟಿ, ರಾಯಚೂರು ಜಿಲ್ಲೆಯ ಗಬ್ಬೂರು, ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆ, ಮೈಸೂರು ಜಿಲ್ಲೆಯ ಕೆಆರ್‌ನಗರ, ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ, ಕಲಬುರಗಿ ಜಿಲ್ಲೆಯ ಜೇವರ್ಗಿ, ನೆಲೋಗಿ, ಬಾಗಲಕೋಟೆ ಜಿಲ್ಲೆಯ ರಬಕವಿ, ಮಹಾಲಿಂಗಪುರ, ಇಳಕಲ್‌, ಚಿಕ್ಕಮಗಳೂರು ಜಿಲ್ಲೆಯ ಕಳಸ, ಕೊಪ್ಪ, ಕೊಟ್ಟಿಗೆ ಹಾರ, ಉಡುಪಿ ಜಿಲ್ಲೆಯ ಕಾರ್ಕಳ, ಕೋಟ, ಸಿದ್ದಾಪುರ, ತುಮಕೂರು ಜಲ್ಲೆಯ ಸಿರಾ,

mysore-dasara_Entry_Point