ಕರ್ನಾಟಕ ಹವಾಮಾನ: ದಕ್ಷಿಣ ಕನ್ನಡ, ಕಲಬುರಗಿ, ತುಮಕೂರು ಸಹಿತ 16 ಜಿಲ್ಲೆಗಳಲ್ಲಿ ಭಾರೀ ಮಳೆ ಅಲರ್ಟ್‌, ಧಾರವಾಡ, ಮಡಿಕೇರಿಯಲ್ಲಿ ಉಷ್ಣಾಂಶ ಕುಸಿತ-karnataka weather today september 26 heavy rain alert in kolar belgaum tumkur kalburgi bellary dakshin kannada udupi kub ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ: ದಕ್ಷಿಣ ಕನ್ನಡ, ಕಲಬುರಗಿ, ತುಮಕೂರು ಸಹಿತ 16 ಜಿಲ್ಲೆಗಳಲ್ಲಿ ಭಾರೀ ಮಳೆ ಅಲರ್ಟ್‌, ಧಾರವಾಡ, ಮಡಿಕೇರಿಯಲ್ಲಿ ಉಷ್ಣಾಂಶ ಕುಸಿತ

ಕರ್ನಾಟಕ ಹವಾಮಾನ: ದಕ್ಷಿಣ ಕನ್ನಡ, ಕಲಬುರಗಿ, ತುಮಕೂರು ಸಹಿತ 16 ಜಿಲ್ಲೆಗಳಲ್ಲಿ ಭಾರೀ ಮಳೆ ಅಲರ್ಟ್‌, ಧಾರವಾಡ, ಮಡಿಕೇರಿಯಲ್ಲಿ ಉಷ್ಣಾಂಶ ಕುಸಿತ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಸೋಮವಾರದಂದು ಮಳೆಯಾಗಬಹುದು ಎನ್ನುವ ಮುನ್ಸೂಚನೆಯನ್ನು ನೀಡಲಾಗಿದೆ. ಕರಾವಳಿ ಭಾಗದಲ್ಲಿ ಕೊಂಚ ಹೆಚ್ಚೇ ಮಳೆಯಾಗಬಹುದು.

ಕರ್ನಾಟಕದ ಹಲವು ಭಾಗಗಳಲ್ಲಿ ಸೋಮವಾರ ಮಳೆಯಾಗುವ ಮುನ್ಸೂಚನೆಯಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೋಮವಾರ ಮಳೆಯಾಗುವ ಮುನ್ಸೂಚನೆಯಿದೆ.

ಬೆಂಗಳೂರು: ವಾಯು ಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ಉತ್ತರ, ದಕ್ಷಿಣ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟಂಬರ್‌ 23ರ ಸೋಮವಾರ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಕಲಬುರಗಿ, ತುಮಕೂರು, ದಕ್ಷಿಣ ಕನ್ನಡ, ಬೆಳಗಾವಿ, ಬಳ್ಳಾರಿ, ಕೋಲಾರ, ವಿಜಯಪುರ, ಉತ್ತರ ಕನ್ನಡ, ಉಡುಪಿ ಸಹಿತ 16 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ. ಕೆಲವು ಭಾಗಗಳಲ್ಲಿ ಬಿಸಿಲಿನ ವಾತಾವರಣವಿದ್ದರೆ, ಧಾರವಾಡ, ಮಡಿಕೇರಿ, ಚಿಕ್ಕಮಗಳೂರು ಸಹಿತ ಕೆಲವೆಡೆ ಉಷ್ಣಾಂಶದಲ್ಲಿ ಕುಸಿತ ಕಂಡು ಬಂದಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಬಹುದು.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲೆಲ್ಲಿ ಮಳೆಯಾಗಲಿದೆ

ಕರ್ನಾಟಕದ ಎಲ್ಲಾ ಕಡೆಯೂ ಸೋಮವಾರ ಮಳೆಯ ಮುನ್ಸೂಚನೆಯಿದೆ. ಅದರಲ್ಲೂ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಬಹುದು. ಬೆಳಗಾವಿ, ವಿಜಯಪುರ, ಕಲಬುರಗಿ, ಗದಗ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳು, ಮಲೆನಾಡಿನ ಚಿಕ್ಕಮಗಳೂರು, ಬೆಂಗಳೂರು ಭಾಗದ ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ಗುಡುಗು ಸಹಿತ ಭಾರೀ ಮಳೆಯಾಗಬಹುದು. ಮಂಡ್ಯ, ಮೈಸೂರು, ರಾಮನಗರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಲಿದ್ದು. ಗುಡುಗು ಕೂಡ ಇರಲಿದೆ. ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಗುಡುಗು ಸಹಿತ ಆಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ

ಇದಲ್ಲದೇ ಮುಂದಿನ ನಾಲ್ಕು ದಿನಗಳ ಕಾಲವೂ ಕರಾವಳಿ ಸಹಿತ ಹಲವು ಭಾಗಗಳಲ್ಲಿ ಮಳೆಯಾಗಬಹುದು ಎಂದು ತಿಳಿಸಲಾಗಿದೆ.

ಎಲ್ಲೆಲ್ಲಿ ಮಳೆಯಾಗಿದೆ

ಭಾನುವಾರವೂ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಸುರಿದಿದೆ. ತುಮಕೂರು ಜಿಲ್ಲೆಯ ಮಿಡಿಗೇಶಿಯಲ್ಲಿ ಅತ್ಯಧಿಕ 8 ಸೆ.ಮೀ ಮಳೆ ಸುರಿದಿದೆ. ಬೀದರ್‌ ಜಿಲ್ಲೆಯ ಭಾಲ್ಕೀ, ಕೊಪ್ಪಳ ಜಿಲ್ಲೆಯ ಗಂಗಾವತಿ, ಚಿಕ್ಕಬಳ್ಳಾಪುರ ಜಿಲ್ಲೆಯ ತೊಂಡೇಭಾವಿ, ಗೌರಿ ಬಿದನೂರು, ಗದಗ, ಬೆಳಗಾವಿ ಜಿಲ್ಲೆಯ ಸೇಡಬಾಳದಲ್ಲೂ ಮಳೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಬೀದರ್‌ ನ ಮಂಠಾಳ, ಹುಮನಾಬಾದ್‌, ಧಾರವಾಡ ಜಿಲ್ಲೆಯ ಅಣ್ಣಿಗೇರಿ,ಕಲಬುರಗಿಯ ಜೇವರ್ಗಿ, ನೆಲೋಗಿ, ಚಿತ್ರದುರ್ಗ, ದಕ್ಷಿಣ ಕನ್ನಡದ ಸುಳ್ಯ, ವಿಜಯಪುರನಗರ, ನಾಲತ್ತವಾಡ, ರಾಯಚೂರಿನ ಕುರ್ಡಿ, ಬಳ್ಳಾರಿ ಜಿಲ್ಲೆಯ ಕುಡಿತಿನಿ, ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲೂ ಮಳೆಯಾದ ವರದಿಯಾಗಿದೆ.

ಬೆಂಗಳೂರು ಹವಾಮಾನ

ಬೆಂಗಳೂರು ನಗರ ಜಿಲ್ಲೆಯಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆಯಾಗುವ ಸೂಚನೆಯಿದೆ. ಕೆಲವು ಕಡೆ ಗುಡುಗು ಕೂಡ ಇರಬಹುದು ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವೇ ಕಂಡು ಬರಲಿದೆ. ಗರಿಷ್ಠ ಉಷ್ಣಾಂಶವು 30 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್‌ ಇರಬಹುದು.

ಉಷ್ಣಾಂಶ ಹೇಗಿದೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾನುವಾರವೂ ಶುಷ್ಕ ವಾಆವರಣ ಕಂಡು ಬಂದರೆ ಕೆಲವೆಡೆ ಮಾತ್ರ ಉಷ್ಣಾಂಶ ಕುಸಿದಿದೆ.

ಧಾರವಾಡದಲ್ಲಿ ಗರಿಷ್ಠ ಉಷ್ಣಾಂಶವು 28 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ ಗರಿಷ್ಠ ಉಷ್ಣಾಂಶವು 27.6 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 17.8ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ವಿಜಯಪುರದಲ್ಲಿ ಗರಿಷ್ಠ ಉಷ್ಣಾಂಶವು 33.5 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 18.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಮಡಿಕೇರಿಯಲ್ಲಿ ಗರಿಷ್ಠ ಉಷ್ಣಾಂಶವು 28.2 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 17.7 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಬೆಳಗಾವಿಯಲ್ಲಿ ಗರಿಷ್ಠ ಉಷ್ಣಾಂಶವು 27.5 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 21.5ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶವು 32.2 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20.1 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶವು 31.6 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 23 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಮೈಸೂರಲ್ಲಿ ಗರಿಷ್ಠ ಉಷ್ಣಾಂಶವು 33.2 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 23 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶವು 32.6 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 22.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಮಂಡ್ಯದಲ್ಲಿ ಗರಿಷ್ಠ ಉಷ್ಣಾಂಶವು 32.6 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 22 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಬಾಗಲಕೋಟೆಯಲ್ಲಿ ಗರಿಷ್ಠ ಉಷ್ಣಾಂಶವು 31ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 23 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ದಾವಣಗೆರೆಯಲ್ಲಿ ಗರಿಷ್ಠ ಉಷ್ಣಾಂಶವು 31 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಮಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶವು30.4 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 23 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಕಾರವಾರದಲ್ಲಿ ಗರಿಷ್ಠ ಉಷ್ಣಾಂಶವು 33.9 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 25.4ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶವು 31.1 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20.1ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಚಿತ್ರದುರ್ಗದಲ್ಲಿ ಗರಿಷ್ಠ ಉಷ್ಣಾಂಶವು 31 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

mysore-dasara_Entry_Point