Karnataka Weather: ಬೆಳಗಾವಿ, ದಾವಣಗೆರೆ, ಮಡಿಕೇರಿ, ಧಾರವಾಡದ ಉಷ್ಣಾಂಶದಲ್ಲಿ ಕುಸಿತ; ಇಂದೂ ಕರಾವಳಿಯಲ್ಲಿ ಮಳೆ, ಬೆಂಗಳೂರು ಹವಾಮಾನ ಹೇಗಿದೆ
Karnataka Weather ಕರ್ನಾಟಕದ ಹಲವು ಭಾಗಗಳಲ್ಲಿ ಚಳಿಯ ವಾತಾವರಣ ಆಗುತ್ತಿದೆ. ಬೆಳಗಾವಿ, ಹಾವೇರಿ, ಮಡಿಕೇರಿ, ದಾವಣಗೆರೆ ಭಾಗದಲ್ಲಿ ಉಷ್ಣಾಂಶ ಕುಸಿತ ಕಂಡು ಬಂದಿದೆ. ಭಾರೀ ಮಳೆಯ ಮುನ್ನೆಚ್ಚರಿಕೆಯಂತೂ ಇಲ್ಲ.
ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಉಷ್ಣಾಂಶ ಕುಸಿತ ಕಂಡು ಬಂದಿದ್ದು, ಚಳಿಯ ಅನುಭವ ಆಗತೊಡಗಿದೆ. ಬೆಳಗಾವಿ,ಮಡಿಕೇರಿ, ದಾವಣಗೆರೆ, ಧಾರವಾಡ, ಚಿಕ್ಕಮಗಳೂರು, ಹಾವೇರಿ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಪ್ರಮಾಣದಲ್ಲಿ ಕುಸಿತವಾಗಿದೆ. ಮಳೆಗಾಲ ಮುಗಿದು ಹಲವು ಭಾಗಗಳಲ್ಲಿ ಚಳಿಗಾಲದ ಅನುಭವ ಆಗತೊಡಗಿದ್ದು, ಪಶ್ಚಿಮ ಘಟ್ಟಗಳ ಸೆರಗಿನ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ವ್ಯತ್ಯಾಸ ವಾಗುತ್ತಿದೆ. ಕರ್ನಾಟಕದ ಕರಾವಳಿ, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಶುಕ್ರವಾರ ಭಾರೀ ಮಳೆಯ ಸನ್ನಿವೇಶ ಎಲ್ಲಿಯೂ ಇಲ್ಲ. ಸಾಧಾರಣ ಮಳೆಯಾಗಬಹುದು ಎನ್ನುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರ ನೀಡಿದೆ. ಬೆಂಗಳೂರಿನಲ್ಲಿಯೂ ಹಗುರ ಮಳೆಯಾಗುವ ಸೂಚನೆಯಿದ್ದು, ಹವಾಮಾನದಲ್ಲೂ ಏರಿಳಿತ ಕಂಡು ಬರಲಿದೆ.
ಮಳೆ ಎಲ್ಲೆಲ್ಲಿ ಆಗಬಹುದು
ಕರಾವಳಿ, ಉತ್ತರ ಕರ್ನಾಟಕದ ಭಾಗದಲ್ಲಿ ಒಂದು ವಾರದಿಂದಲೂ ಭಾರೀ ಮಳೆಯೇ ಆಗುತ್ತಿದೆ. ಉತ್ತರ ಕನ್ನಡ, ಉಡುಪಿ, ಯಾದಗಿರಿ, ವಿಜಯಪುರ, ಕಲಬುರಗಿ ಭಾಗಗಳಲ್ಲಿ ಸಾಕಷ್ಟು ಮಳೆಯಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಿದೆ. ಶುಕ್ರವಾರದಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಹಲವು ಕಡೆಗಳಲ್ಲಿ ಮಳೆಯಾಗಬಹುದು.
ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಬಹುದು ಎನ್ನುವ ಮುನ್ಸೂಚನೆ ನೀಡಲಾಗಿದೆ.
ಮಳೆ ಎಲ್ಲಿ ಆಗಿದೆ
ಕರ್ನಾಟಕದಲ್ಲಿ ಗುರುವಾರದಂದೂ ಕೆಲವು ಭಾಗಗಳಲ್ಲ ಮಳೆಆಗಿದೆ.ಕಲಬುರಗಿ ಜಿಲ್ಲೆಯ ಅಡಕಿ ಹಾಗೂ ಬೀದರ್ ಜಿಲ್ಲೆಯ ಮಂಠಾಳದಲ್ಲಿ ಅತ್ಯಧಿಕ ಮಳೆಯಾಗಿದೆ.
ಕಲಬುರಗಿಯ ಚಿತ್ತಾಪುರ, ಸೇಡಂ, ಜೇವರ್ಗಿ, ಚಿಂಚೋಳಿ, ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್, ಗೇರುಸೊಪ್ಪ, ಕಾರವಾರ, ಕದ್ರಾ, ಹೊನ್ನಾವರ, ಕುಮಟಾ, ಬನವಾಸಿ, ಸಿದ್ದಾಪುರ, ಬೇಲೀಕೇರಿ, ಶಿರಾಲಿ, ಅಂಕೋಲಾ, ಮಂಕಿ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು, ಧರ್ಮಸ್ಥಳ, ಬೆಳ್ತಂಗಡಿ, ಪಣಂಬೂರು, ಬೆಳಗಾವಿ, ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿ, ಉಡುಪಿ ಜಿಲ್ಲೆಯ ಸಿದ್ದಾಪುರ, ಕುಂದಾಪುರ, ಉಡುಪಿ, ಕೊಪ್ಪಳ ಜಿಲ್ಲೆಯ ಮುನಿರಾಬಾದ್, ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ, ಹಿರಿಯೂರು, ದಾವಣಗೆರೆ, ತುಮಕೂರು ಜಿಲ್ಲೆಯ ಬರಗೂರು, ಬಳ್ಳಾರಿ ಜಿಲ್ಲೆಯ ಕುಡತಿನಿ, ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ, ಕೊಪ್ಪ, ಕಮ್ಮರಡಿ, ಶೃಂಗೇರಿ, ವಿಜಯನಗರ, ಕೊಡಗಿನ ಭಾಗಮಂಡಲದಲ್ಲೂ ಮಳೆಯಾಗಿದೆ.
ಬೆಂಗಳೂರು ಹವಾಮಾನ
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವೇ ಕಂಡು ಬರಲಿದೆ. ಅಲ್ಲಲ್ಲಿ ಹಗುರವಾಗಿ ಮಳೆಯೂ ಆಗಬಹುದು. ಬೆಂಗಳೂರಿನ ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಹಾಗೂ 21 ಡಿಗ್ರಿ ಸೆಲ್ಸಿಯಸ್ ನಷ್ಟು ಇರಬಹುದು.
ಉಷ್ಣಾಂಶ ಎಲ್ಲಿ ಹೇಗೆ
ಕರ್ನಾಟಕದ ಹಲವು ಭಾಗಗಳಲ್ಲಿ ಉಷ್ಣಾಂಶದ ಪ್ರಮಾಣ ಕುಸಿತ ಕಂಡಿದೆ. ಬೆಳಗಾವಿ, ಮಡಿಕೇರಿ, ಧಾರವಾಡ, ಹಾವೇರಿ ಸಹಿತ ಹಲವೆಡೆ ಹವಾಮಾನದಲ್ಲಿ ಬದಲಾವಣೆಯಾಗಿದೆ.
ಬೆಳಗಾವಿಯಲ್ಲಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು
ಮಡಿಕೇರಿಯಲ್ಲಿ ಗರಿಷ್ಠ ಉಷ್ಣಾಂಶ 25.5 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಕನಿಷ್ಠ ಉಷ್ಣಾಂಶವು 20.0 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು
ಧಾರವಾಡದಲ್ಲಿ ಗರಿಷ್ಠ ಉಷ್ಣಾಂಶ 26.2 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಕನಿಷ್ಠ ಉಷ್ಣಾಂಶವು 19 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು
ದಾವಣಗೆರೆಯಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಕನಿಷ್ಠ ಉಷ್ಣಾಂಶವು 20.5 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು
ಹಾವೇರಿಯಲ್ಲಿ ಗರಿಷ್ಠ ಉಷ್ಣಾಂಶ 25.4 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಕನಿಷ್ಠ ಉಷ್ಣಾಂಶವು 21.6 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು
ಚಿಕ್ಕಮಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 25.8 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಕನಿಷ್ಠ ಉಷ್ಣಾಂಶವು16.4 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು
ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 29.7 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಕನಿಷ್ಠ ಉಷ್ಣಾಂಶವು 23.8 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು
ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 32.0 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಕನಿಷ್ಠ ಉಷ್ಣಾಂಶವು 22.8 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು
ಚಿತ್ರದುರ್ಗದಲ್ಲಿ ಗರಿಷ್ಠ ಉಷ್ಣಾಂಶ 27.2 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಕನಿಷ್ಠ ಉಷ್ಣಾಂಶವು 20.6 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು
ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 29.4 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು
ಶಿವಮೊಗ್ಗದಲ್ಲಿ ಗರಿಷ್ಠ ಉಷ್ಣಾಂಶ 27.8 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಕನಿಷ್ಠ ಉಷ್ಣಾಂಶವು 20.6 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು
ವಿಜಯಪುರದಲ್ಲಿ ಗರಿಷ್ಠ ಉಷ್ಣಾಂಶ 29.5 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಕನಿಷ್ಠ ಉಷ್ಣಾಂಶವು 18.4 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು
ಮಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28.2 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಕನಿಷ್ಠ ಉಷ್ಣಾಂಶವು 24 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು
ಬೀದರ್ ನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಕನಿಷ್ಠ ಉಷ್ಣಾಂಶವು 22.5 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು
ಹಾಸನದಲ್ಲಿ ಗರಿಷ್ಠ ಉಷ್ಣಾಂಶ 33.2 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಕನಿಷ್ಠ ಉಷ್ಣಾಂಶವು 20.8 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು