ಕರ್ನಾಟಕ ಹವಾಮಾನ; ಕಡಿಮೆಯಾಗಲಿದೆ ಮಳೆಯ ತೀವ್ರತೆ, ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್‌, ಬೆಂಗಳೂರು ಕೊಂಚ ನಿರಾಳ, ಇಂದಿನ ಹವಾಮಾನ ಹೀಗಿರಲಿದೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ; ಕಡಿಮೆಯಾಗಲಿದೆ ಮಳೆಯ ತೀವ್ರತೆ, ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್‌, ಬೆಂಗಳೂರು ಕೊಂಚ ನಿರಾಳ, ಇಂದಿನ ಹವಾಮಾನ ಹೀಗಿರಲಿದೆ

ಕರ್ನಾಟಕ ಹವಾಮಾನ; ಕಡಿಮೆಯಾಗಲಿದೆ ಮಳೆಯ ತೀವ್ರತೆ, ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್‌, ಬೆಂಗಳೂರು ಕೊಂಚ ನಿರಾಳ, ಇಂದಿನ ಹವಾಮಾನ ಹೀಗಿರಲಿದೆ

ಇಂದಿನ ಹವಾಮಾನ: ಕರ್ನಾಟಕದಲ್ಲಿ ಇಂದು ಮಳೆಯ ತೀವ್ರತೆ ಕಡಿಮೆ ಇರಲಿದೆಯಾದರೂ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಹೀಗಾಗಿ ಅಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬೆಂಗಳೂರು ಕೊಂಚು ನಿರಾಳವಾಗಲಿದ್ದು, ಇಂದಿನ ಹವಾಮಾನ ವಿವರ ಹೀಗಿದೆ.

ಕರ್ನಾಟಕ ಹವಾಮಾನ ಮೇ 22; ಕಡಿಮೆಯಾಗಲಿದೆ ಮಳೆಯ ತೀವ್ರತೆ, ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್‌, ಬೆಂಗಳೂರು ಕೊಂಚ ನಿರಾಳ, ಇಂದಿನ ಹವಾಮಾನ ಹೀಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಕರ್ನಾಟಕ ಹವಾಮಾನ ಮೇ 22; ಕಡಿಮೆಯಾಗಲಿದೆ ಮಳೆಯ ತೀವ್ರತೆ, ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್‌, ಬೆಂಗಳೂರು ಕೊಂಚ ನಿರಾಳ, ಇಂದಿನ ಹವಾಮಾನ ಹೀಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಇಂದಿನ ಹವಾಮಾನ: ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಳೆ ಸುರಿದ ಕಾರಣ ಬಹುತೇಕ ಭೂ ಪ್ರದೇಶಗಳು ತಂಪಾಗಿವೆ. ರಾಜಧಾನಿ ಬೆಂಗಳೂರು ಸೇರಿ ಕೆಲವು ಪ್ರದೇಶಗಳಲ್ಲಿ ಮಳೆ ಹಾನಿಯೂ ಉಂಟಾಗಿದೆ. ಇಂದು (ಮೇ 22) ಬೆಂಗಳೂರು ಸೇರಿ ವಿವಿಧೆಡೆ ಮಳೆಯ ತೀವ್ರತೆ ಕಡಿಮೆಯಾಗಲಿದ್ದು, ಬಹುತೇಕರಲ್ಲಿ ನಿರಾಳ ಭಾವ ಮೂಡಲಿದೆ. ಇನ್ನೊಂದೆಡೆ, ಕರಾವಳಿ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಮುಂಗಾರು ಮಳೆಯಾಗಿ ಮುಂದುವರಿಯಲಿದೆ. ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಇಂದಿನ ಹವಾಮಾನ

ಬೆಂಗಳೂರು ನಗರದಲ್ಲಿ ಇಂದು (ಮೇ 22) ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು. ಕೆಲವು ಪ್ರದೇಶಗಳಲ್ಲಿ ಗುಡುಗು ಹಾಗೂ ಗಂಟೆಗೆ 30 ರಿಂದ 40 ಕಿಮೀ ವೇಗದ ಗಾಳಿಯೊಂದಿಗೆ ಮಳೆಯಾಗಬಹುದು. ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲೂ ಇದೇ ರೀತಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಮಳೆ ಹವಾಮಾನ ಮುನ್ಸೂಚನೆ ವರದಿ ಹೇಳಿದೆ. ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಇಂದು ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ಇರಬಹುದು. ನಿನ್ನೆ (ಮೇ 21) ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಗರಿಷ್ಠ ತಾಪಮಾನ 27.2 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ಇತ್ತು. ಮಳೆ ಪ್ರಮಾಣ 14.1 ಎಂಎಂ ದಾಖಲಾಗಿದೆ. ಇದೆ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಗರಿಷ್ಠ ತಾಪಮಾನ 29.1 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 21.5 ಡಿಗ್ರಿ ಸೆಲ್ಶಿಯಸ್ ಇತ್ತು. ಮಳೆ ಪ್ರಮಾಣ 4.5 ಎಂಎಂ ದಾಖಲಾಗಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.

ಕರ್ನಾಟಕದ ಇಂದಿನ ಹವಾಮಾನ

ಕರ್ನಾಟಕ ರಾಜ್ಯದಾದ್ಯಂತ ಗುಡುಗು ಮಿಂಚು ಸಹಿತ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆ ಹಾಗೂ ಅಲ್ಲಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಆಧರಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

ಮುಂದಿನ 7 ದಿನಗಳ ಹವಾಮಾನ ಮುನ್ಸೂಚನೆ ಮತ್ತು ಎಚ್ಚರಿಕೆಗಳ ವಿವರ ನೀಡಿರುವ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಹಾಗೂ ಅಲ್ಲಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇನ್ನು, ಮೇ 21ರಂದು ಬೆಳಿಗ್ಗೆ 8.30 ರಿಂದ ಸಂಜೆ 4.30ರ 8 ಗಂಟೆ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆ ಕಾರವಾರದ ವೈಲವಾಡಾ ಎಂಬಲ್ಲಿ ಗರಿಷ್ಠ ಮಳೆಯಾಗಿದೆ. ಅಲ್ಲಿ 143 ಎಂಎಂ ಮಳೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.