Karnataka Rains: 11 ಜಿಲ್ಲೆಗಳಲ್ಲಿ ಭಾರೀ ಮಳೆ, ಉಡುಪಿಯಲ್ಲಿ ರೆಡ್‌ ಅಲರ್ಟ್‌; ಬೆಂಗಳೂರು ಸಹಿತ ಹಲವು ನಗರಗಳಲ್ಲಿ ಉಷ್ಣಾಂಶ ಕುಸಿತ-karnataka weather update bengaluru weather august 30 rain prediction udupi shimoga yadgir belagavi dakshina kannada kub ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: 11 ಜಿಲ್ಲೆಗಳಲ್ಲಿ ಭಾರೀ ಮಳೆ, ಉಡುಪಿಯಲ್ಲಿ ರೆಡ್‌ ಅಲರ್ಟ್‌; ಬೆಂಗಳೂರು ಸಹಿತ ಹಲವು ನಗರಗಳಲ್ಲಿ ಉಷ್ಣಾಂಶ ಕುಸಿತ

Karnataka Rains: 11 ಜಿಲ್ಲೆಗಳಲ್ಲಿ ಭಾರೀ ಮಳೆ, ಉಡುಪಿಯಲ್ಲಿ ರೆಡ್‌ ಅಲರ್ಟ್‌; ಬೆಂಗಳೂರು ಸಹಿತ ಹಲವು ನಗರಗಳಲ್ಲಿ ಉಷ್ಣಾಂಶ ಕುಸಿತ

Karnataka Weather ಕರ್ನಾಟಕದ ಹನ್ನೊಂದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದ್ದು, ಉಡುಪಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆಯಾಗಿದೆ.

ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಮಳೆ( Karnataka Rains) ಮತ್ತಷ್ಟು ಜಿಲ್ಲೆಗಳಿಗೆ ವಿಸ್ತರಣೆಯಾಗಿದೆ. ಉತ್ತರ ಕರ್ನಾಟಕದಲ್ಲಿ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಪ್ರಬಲಗೊಂಡಿದೆ. ಶುಕ್ರವಾರದಂದು ಕರ್ನಾಟಕದ 11 ಜಿಲ್ಲೆಗಳಲ್ಲಿ ಭಾರೀಯಿಂದ ಅತೀ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಅದರಲ್ಲೂ ಕರಾವಳಿಯ ಉಡುಪಿ ಜಿಲ್ಲೆಯಲ್ಲಿ( Udupi Rains) ಹೆಚ್ಚಿನ ಮಳೆಯಾಗುವ ಸೂಚನೆಯಿದ್ದು, ಈ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ( Dakshina Kannada Rains), ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ , ಕೊಡಗು( Kodagu Rains), ಬೆಳಗಾವಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಅನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ ಘೋಷಿಸಿದೆ. ಬೆಂಗಳೂರು ( Bangalore Weather) ಸಹಿತ ಕೆಲವು ಜಿಲ್ಲೆಗಳಲ್ಲಿ ಉಷ್ಣಾಂಶ ಕುಸಿತ ಕಂಡಿದ್ದರೆ, ಉತ್ತರ ಕರ್ನಾಟಕದ ಜಿಲ್ಲೆಗಳನ್ನು ಹಿಂದಿಕ್ಕಿ ಮಂಡ್ಯದಲ್ಲಿ( Mandya Temperature) ಹೆಚ್ಚಿನ ಬಿಸಿಲಿನ ವಾತಾವರಣ ಎರಡು ದಿನದಿಂದ ಕಂಡು ಬಂದಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲೆಲ್ಲಿ ಮಳೆಯಾಗಲಿದೆ

ಕರಾವಳಿಯ ಉಡುಪಿ ಜಿಲ್ಲೆಯಲ್ಲಿ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದ್ದು, ಶುಕ್ರವಾರ ಅಲ್ಲಲ್ಲಿ ಭಾರೀ ಮಳೆಯಿಂದ ಅತೀ ಹೆಚ್ಚು ಮಳೆಯಾಗುವ ಮುನ್ಸೂಚನೆಯಿದೆ. ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆಯಾಗಿದೆ. ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಅತೀ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಹಾಗೂ ಅತೀ ಭಾರೀ ಮಳೆ ಸುರಿಯಬಹುದು. ಈ ಭಾಗದಲ್ಲಿ ಗಾಳಿಯ ವೇಗವು ಅತಿಯಾಗಿ ಇರಲಿದೆ. ಬೆಳಗಾವಿ, ರಾಯಚೂರು, ಯಾದಗಿರಿ, ಕೊಡಗು ಹಾಗೂ ಕಲಬುರಗಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ತಿಳಿಸಲಾಗಿದೆ.

ಕರಾವಳಿ ಭಾಗದಲ್ಲಿ ಮಳೆಯೊಂದಿಗೆ ಗಾಳಿಯ ಪ್ರಮಾಣ ಅಧಿಕವಾಗಿರುವುದರಿಂದ ಜನ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಕೂಲ್‌ ವಾತಾವರಣ

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲ ದಿನಗಳಿಂದ ಸಾಧಾರಣ ಮಳೆಯಾಗುತ್ತಿದೆ. ಇದರೊಟ್ಟಿಗೆ ಉಷ್ಣಾಂಶದಲ್ಲೂ ಕುಸಿತ ಕಂಡಿದೆ. ಇದರಿಂದ ತಾಪಮಾನದಲ್ಲಿ ಏರಿಳಿತ ಕಂಡು ಬಂದಿದೆ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳು ಹಚ್ಚಿವೆ, ಗಾಳಿಯ ವೇಗವೂ ಹೆಚ್ಚರಲಿದ್ದು, ನಿರಂತರ ಗಾಳಿ ಕಂಡು ಬರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನವು 27 =ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ಇದರಿಂದ ಬೆಳಗಿನ ಹಾಗೂ ರಾತ್ರಿ ಸಮಯದಲ್ಲಿ ಚಳಿಯ ವಾತಾವರಣ ಬೆಂಗಳೂರಿನಲ್ಲಿ ಕಂಡು ಬಂದಿದೆ.

ಉತ್ತಮ ಮಳೆ

ಕರ್ನಾಟಕದ ನಾನಾ ಜಿಲ್ಲೆಗಳಲ್ಲಿ ಗುರುವಾರವೂ ಉತ್ತಮ ಮಳೆ ಸುರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರು, ಮಾಣಿ, ಪುತ್ತೂರು, ಉಡುಪಿ ಜಿಲ್ಲೆಯ ಕುಂದಾಪುರ, ಸಿದ್ದಾಪುರ, ಕೊಡಗಿನ ಭಾಗಮಂಡಲ, ಚಿಕ್ಕಮಗಳೂರಿನ ಕೊಟ್ಟಿಗೆಹಾರ, ಉತ್ತರ ಕನ್ನಡ ಜಿಲ್ಲೆಯ ಶಿರಾಲಿ, ಗೇರುಸೊಪ್ಪ, ಮಂಕಿ ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ.

ಉಡುಪಿ ಜಿಲ್ಲೆಯ ಕೊಲ್ಲೂರು, ಕೋಟ, ಕಾರ್ಕಳ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ, ಕ್ಯಾಸಲ್‌ ರಾಕ್‌, ಕದ್ರಾ, ಕುಮಟಾ, ಕಾರವಾರ, ಜಗಲ್‌ಬೆಟ್‌, ಯಲ್ಲಾಪುರ, ಗೋಕರ್ಣ, ಬನವಾಸಿ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಸುಳ್ಯ, ಮುಲ್ಕಿ, ಧರ್ಮಸ್ಥಳ, ಉಪ್ಪಿನಂಗಡಿ, ಬೆಳ್ತಂಗಡಿ, ಬೆಳಗಾವಿಯ ಲೋಂಡಾ, ಚಿಕ್ಕಮಗಳೂರು ಜಿಲ್ಲೆಯ ಜಯಪುರ, ಶೃಂಗೇರಿ,‌ ಎನ್‌ ಆರ್‌ ಪುರ, ಬಾಳೆಹೊನ್ನೂರು, ಕಮ್ಮರಡಿ, ಶಿವಮೊಗ್ಗ ಜಿಲ್ಲೆಯ ಆಗುಂಬೆ, ಆನವಟ್ಟಿ, ತುಮಕೂರಿನ ತಿಒಟೂರು, ಬಾಗಲಕೋಟೆಯ ಕೂಡಲಸಂಗಮ, ಕೊಡಗಿನ ಸೋಮವಾರಪೇಟೆ, ಕುಶಾಲನಗರ,ಮೂರ್ನಾಡು, ಹಾರಂಗಿ, ಹಾಸನ,ಶ್ರವಣ ಬೆಳಗೊಳದಲ್ಲೂ ಉತ್ತಮ ಮಳೆಯಾದ ವರದಿಯಾಗಿದೆ.

ಹಲವೆಡೆ ಉಷ್ಣಾಂಶ ಕುಸಿತ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಕುಸಿತ ಕಂಡು ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 28.3 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕಾರವಾರದಲ್ಲಿ 31.4 ಡಿಗ್ರಿ, ಶಿರಾಲಿಯಲ್ಲಿ 30.5 ಡಿಗ್ರಿ , ಮಂಗಳೂರಿನ ವಿಮಾನ ನಿಲ್ದಾಣದಲ್ಲಿ 29.1 ಡಿಗ್ರಿ ಸೆಲ್ಸಿಯಸ್‌, ಪಣಂಬೂರಿನಲ್ಲಿ 30.4 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶವಿದೆ. ಬೆಳಗಾವಿಯಲ್ಲಿ 25 ಡಿಗ್ರಿ, ಬದರ್‌ನಲ್ಲಿ 29 ಡಿಗ್ರಿ, ಧಾರವಾಡ ಹಾಗೂ ಹಾವೇರಿಯಲ್ಲಿ 26.6 ಡಿಗ್ರಿ, ಕೊಪ್ಪಳ ಹಾಗೂ ವಿಜಯಪುರದಲ್ಲಿ 30 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಗದಗದಲ್ಲಿ 28.5 ಡಿಗ್ರಿ, ಕಲಬುರಗಿಯಲ್ಲಿ 32 ಡಿಗ್ರಿ, ರಾಯಚೂರಿನಲ್ಲಿ 31, ಬಾಗಲಕೋಟೆಯಲ್ಲಿ 32 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶವಿದೆ.

ಆಗುಂಬೆಯಲ್ಲಿ 23.4 ಡಿಗ್ರಿ, ಚಿಕ್ಕಮಗಳೂರಿನಲ್ಲಿ 25 ಡಿಗ್ರಿ, ಮಡಿಕೇರಿಯಲ್ಲಿ 26 ಡಿಗ್ರಿ, ಶಿವಮೊಗ್ಗದಲ್ಲಿ 27.2 ಡಿಗ್ರಿ, ಮೈಸೂರಿನಲ್ಲಿ 28.4 ಡಿಗ್ರಿ ಉಷ್ಣಾಂಶ ಕಂಡು ಬಂದಿದೆ. ಚಾಮರಾಜನಗರದಲ್ಲಿ 28.4 ಡಿಗ್ರಿ, ದಾವಣಗೆರೆಯಲ್ಲಿ 28.5 ಡಿಗ್ರಿ, ಹಾಸನದಲ್ಲಿ 30.4 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಇಡೀ ರಾಜ್ಯದಲ್ಲಿ ಮಂಡ್ಯದಲ್ಲೇ ಅತ್ಯಧಿಕ 34.6 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.