ಕರ್ನಾಟಕ ಹವಾಮಾನ: ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ನಿರೀಕ್ಷೆ, ಬೆಂಗಳೂರಲ್ಲಿ ಬೆಳಿಗ್ಗೆಯೇ ಮಳೆ ಶುರು
Karnataka Rains ಕರ್ನಾಟಕದ ಕರಾವಳಿ ಭಾಗದಲ್ಲಿ( Karnataka Rains) ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದರೆ, ಬೆಂಗಳೂರಿನಲ್ಲಿ ಮಳೆ ಆರಂಭಗೊಂಡಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.
ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ( Karnataka Rains) ಬುಧವಾರವೂ ಭಾರೀ ಮಳೆ ಕಂಡು ಬರಲಿದೆ. ದಕ್ಷಿಣ ಕನ್ನಡ( Dakshina Kannada Rains) ಹಾಗೂ ಉಡುಪಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದ್ದು, ಯಲ್ಲೋ ಅಲರ್ಟ್ ಅನ್ನು ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಹೆಚ್ಚಿನ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರು ಮಹಾನಗರದಲ್ಲಿ( Bangalore Rains) ಮೂರ್ನಾಲ್ಕು ದಿನದಿಂದ ಮಳೆ ವಾತಾವರಣ ಕಂಡು ಬಂದಿದೆ. ಮಂಗಳವಾರ ರಾತ್ರಿಯೂ ಬೆಂಗಳೂರಿನ ಹಲವು ಭಾಗಗಳಲ್ಲಿ ಮಳೆಯಾಗಿದ್ದು. ಬುಧವಾರ ಬೆಳಗಿನ ಜಾವವೇ ಮಳೆ ಶುರುವಾಗಿದೆ. ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಹೆಚ್ಚಿನ ಮಳೆಯಾಗಿದೆ. ರಾಯಚೂರು ಸಹಿತ ಕೆಲವು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹೆಚ್ಚಿನ ಮಳೆಯಾಗಿದೆ.
ಎಲ್ಲೆಲ್ಲಿ ಮಳೆ
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆಯಾಗಬಹದು.ದಕ್ಷಿಣ ಒಳನಾಡು ಜಿಲ್ಲೆಗಳ ಮೇಲೆ ಮತ್ತು ಉತ್ತರ ಒಳನಾಡು ಜಿಲ್ಲೆಗಳ ಕೆಲವು ಸ್ಥಳಗಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.ಕೆಲವು ಕಡೆಗಳಲ್ಲಿ ಗುಡುಗು ಸಹ ಇರಲಿದೆ ಎಂದು ತಿಳಿಸಲಾಗಿದೆ.
ಆಗಸ್ಟ್ 28 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಮುನ್ಸೂಚನೆಯಿದೆ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಆಗಸ್ಟ್ 24 ರವರೆಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ
ಆಗಸ್ಟ್ 28 ರವರೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. (Source: SHAR-ISRO): ಕಾವೇರಿ ಜಲಾನಯನ ಪ್ರದೇಶದಲ್ಲಿ ಆಗಸ್ಟ್ 21 ರವರೆಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ, ನಂತರ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 21 ರವರೆಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ
ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿಆಗಸ್ಟ್ 28 ರವರೆಗೆ ಮಳೆ ಯಾಗಬಹುದು, ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 21 ರವರೆಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(ksndmc) ತಿಳಿಸಿದೆ.
ಬೆಂಗಳೂರು ಮಳೆ
ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಉತ್ತಮ ಮಳೆಯೇ ಆಗುತ್ತಿದೆ. ಸಂಜೆ ನಂತರ ಉತ್ತಮ ಮಳೆ ಸುರಿಯುತ್ತಿದೆ. ಮಂಗಳವಾರ ಸಂಜೆ ಹಾಗೂ ರಾತ್ರಿಯೂ ಬೆಂಗಳೂರಿನ ಹಲವು ಭಾಗಗಳಲ್ಲಿ ಮಳೆಯಾಗಿದೆ.ಬುಧವಾರ ಹಾಗೂ ಗುರುವಾರದಂದೂ ಸಾಧಾರಣ ಮಳೆ ಇರಲಿದೆ. ಕೆಲವು ಭಾಗಗಳಲ್ಲಿ ಗುಡುಗಿನ ವಾತಾವರಣವೂ ಕಂಡು ಬರಲಿದೆ. ಬೆಂಗಳೂರಿನ ಸುತ್ತಮುತ್ತಲೂ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ಆಕಾಶ ಇರಲಿದೆ. ಸಾಧಾರಣ ಮಳೆಯನ್ನು ಕೆಲವು ಭಾಗದಲ್ಲಿ ನಿರೀಕ್ಷಿಸಬಹುದು. ಬೆಂಗಳೂರಿನಲ್ಲಿ ಉಷ್ಣಾಂಶವು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ನಷ್ಟು ಇರಲಿದೆ.
ಉತ್ತಮ ಮಳೆ
ಮಂಗಳವಾರದಂದು ಕೊಪ್ಪಳ. ರಾಯಚೂರು, ಬಳ್ಳರಿ ಜಿಲ್ಲೆಗಳಲ್ಲಿ ಉತ್ತಮ ಮಳೆ ಸುರಿದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ, ರಾಯಚೂರು ಜಿಲ್ಲೆಯ ಕುರ್ಡಿ, ಮಂಡ್ಯ ಜಿಲ್ಲೆಯ ಬೆಳ್ಳೂರಿನಲ್ಲಿ ತಲಾ ) 9 ಸೆ.ಮೀ. ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ 8 ಸೆ.ಮೀ, ರಾಯಚೂರಿನ ಮಾನ್ವಿ ಹಾಗೂ ಬಳ್ಳಾರಿಯ ಕುಡಿತಿನಿಯಲ್ಲಿ ತಲಾ 7 ಸೆ.ಮೀ ಮಳೆ ಸುರಿದಿದೆ.
ಉಳಿದಂತೆ ರಾಯಚೂರು ನಗರ, ಮಸ್ಕಿ, ಬಳ್ಳಾರಿಯ ಸಿರುಗುಪ್ಪ, ತುಮಕೂರಿನ ಗುಬ್ಬಿ, ಮಧುಗಿರಿ, ಚಿಕ್ಕಮಗಳೂರಿನ ಬಾಳೆ ಹೊನ್ನೂರು, ಕಡೂರು, ಯಾದಗಿರಿ ಜಿಲ್ಲೆ ಹುಣಸಗಿ, ಕಲಬುರಗಿ ಜಿಲ್ಲೆ ಅಡಕಿ, ಸೇಡಂ, ಬೀದರ್ ಜಿಲ್ಲೆ ಹುಮ್ನಾಬಾದ್, ದಾವಣಗೆರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡ ಬಳ್ಳಾಪುರ, ದೇವನಹಳ್ಳಿ, ಬೆಳಗಾವಿ ಜಿಲ್ಲೆ ಲೋಂಡಾ, ವಿಜಯನಗರ ಜಿಲ್ಲೆಯ ಹೊಸಪೇಟೆ, ಹರಪನಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆ ಗೌರಿ ಬಿದನೂರು, ಉತ್ತರ ಕನ್ನಡ ಜಿಲ್ಲೆ ಕುಮಟಾ, ಚಾಮರಾಜನಗರ, ವಿಜಯಪುರ ಜಿಲ್ಲೆ ಝಳಕಿ ಕ್ರಾಸ್, ತಾಳಿಕೋಟಿ, ಹಾಸನ ಜಿಲ್ಲೆ ಚನ್ನರಾಯಪಟ್ಟಣ, ಕೋಲಾರ, ಶಿವಮೊಗ್ಗ ನಗರ, ಆನವಟ್ಟಿ, ಮಂಡ್ಯ ಜಿಲ್ಲೆ ಕೆಆರ್‌ಎಸ್‌ನಲ್ಲೂ ಮಳೆಯಾಗಿದೆ.