Weather Update: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರಿ ಮಳೆ; ಬೆಂಗಳೂರಲ್ಲೂ ಗುಡುಗು ಸಹಿತ ಮಳೆ
ಕನ್ನಡ ಸುದ್ದಿ  /  ಕರ್ನಾಟಕ  /  Weather Update: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರಿ ಮಳೆ; ಬೆಂಗಳೂರಲ್ಲೂ ಗುಡುಗು ಸಹಿತ ಮಳೆ

Weather Update: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರಿ ಮಳೆ; ಬೆಂಗಳೂರಲ್ಲೂ ಗುಡುಗು ಸಹಿತ ಮಳೆ

Karnataka Weather Report: ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ 6 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರಿ ಮಳೆ
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರಿ ಮಳೆ

ಬೆಂಗಳೂರು: ಇಂದಿನಿಂದ ಆರು ದಿನಗಳ ಕಾಲ ಅಂದರೆ ಆಗಸ್ಟ್​ 22ರಿಂದ ಆಗಸ್ಟ್​ 27ರ ತನಕ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಆಗಸ್ಟ್​ 27ರ ತನಕವೂ ದಕ್ಷಿಣ ಕನ್ನಡ ಮತ್ತು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಆದರೆ, ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ. ಆರು ದಿನಗಳ ಇದೇ ರೀತಿಯ ಹವಾಮಾನ ಇರಲಿರುವ ಕಾರಣ ಕರಾವಳಿ ಭಾಗದ ಜನರು ಕೊಂಚ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ ಎಂದು ಇಲಾಖೆ ಸೂಚಿಸಿದೆ.

ಮೀನುಗಾರರಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಕರಾವಳಿ ಭಾಗದಲ್ಲಿ ಮಳೆಯ ಜೊತೆಗೆ ಗಾಳಿಯೂ ವೇಗವಾಗಿ ಬೀಸಲಿರುವ ಕಾರಣ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಗಾಳಿಯ ವೇಗ ಗಂಟೆಗೆ 35 ಕಿಮೀ ನಿಂದ 55 ಕಿಮೀವರೆಗೆ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಹಾಗಾಗಿ ಮೀನುಗಾರರು ಎಚ್ಚರಿಕೆ ವಹಿಸಬೇಕು.

ಬೆಂಗಳೂರಿನಲ್ಲಿಂದು ಗುಡುಗು ಸಹಿತ ಮಳೆ

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಧಾರಣ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಆರಂಭದಲ್ಲಿ ಮೋಡ ಕವಿದ ಆಕಾಶ ಇರಲಿದೆ ಎಂದು ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಗರಿಷ್ಠ ತಾಪಮಾನವು 31° C ಮತ್ತು 22° C ಆಗಿರಬಹುದು. ಆಗಸ್ಟ್​ 21ರಂದು ಸಹ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿತ್ತು.

ಆಗಸ್ಟ್​ 21ರಂದು ಎಲ್ಲೆಲ್ಲಿ ಮಳೆಯಾಗಿತ್ತು?

ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಿತ್ತು. ಹಾಗೆಯೇ ಕರಾವಳಿ ಭಾಗ, ಕಲ್ಯಾಣ ಕರ್ನಾಟಕ ಭಾಗ, ಬೆಳಗಾವಿ ಹಾಗೂ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮತ್ತು ಉತ್ತಮ ಮಳೆಯಾಗಿತ್ತು.

ಅತಿ ಹೆಚ್ಚು ಮಳೆ ಸುರಿದಿದ್ದೆಲ್ಲಿ?

ಶಿವಮೊಗ್ಗದ ತ್ಯಾಗರ್ತಿಯಲ್ಲಿ 8 ಸೆಂಟಿ ಮೀಟರ್​ ಮಳೆ ಸುರಿದಿದ್ದು, ಆಗಸ್ಟ್​ 21ರಂದು ದಾಖಲಾದ ಅತಿ ಹೆಚ್ಚು ಮಳೆಯ ಪ್ರಮಾಣವಾಗಿದೆ. ಚಿತ್ರದುರ್ಗದ ನಾಯಕಹಟ್ಟಿ, ತುಮಕೂರಿನ ಬರಗೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಹೊನ್ನಾಳಿ, ರಾಯಲ್ಪಾಡಿನಲ್ಲಿ 5 ಸೆಂ.ಮೀ ಮಳೆ ಸುರಿದಿದೆ. ಆಗುಂಬೆ, ಹಾಸನ, ಚನ್ನಗಿರಿ, ದೊಡ್ಡಬಳ್ಳಾಪುರ, ಕುರಗೋಡು, ಮಧುಗಿರಿಯಲ್ಲಿ 4 ಸೆಂ. ಮೀ ಮಳೆಯಾಗಿದೆ.

Whats_app_banner