Karnataka Rains: ಕರ್ನಾಟಕದಲ್ಲಿ ಮುಂದಿನ 5 ದಿನ ಕಾಲ ಸಾಧಾರಣ ಮಳೆ ನಿರೀಕ್ಷೆ
Karnataka weather Updates ಕರ್ನಾಟಕದಲ್ಲಿ ಮುಂದಿನ ಐದು ದಿನ ಭಾರೀ ಮಳೆಯ ಮುನ್ಸೂಚನೆಯಿಲ್ಲ. ಬದಲಿಗೆ ಸಾಧಾರಣ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಅ(IMD) ಮುನ್ಸೂಚನೆ ನೀಡಿದೆ.
ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಭಾನುವಾರದವರೆಗೂ ಮಳೆಯಾಗಲಿದೆ. ಅದು ಭಾರೀ ಮಳೆಯ ವಾತಾವರಣವಂತೂ ಎಲ್ಲಿ ಇಲ್ಲ. ಸಾಧಾರಣ ಮಳೆ ಐದು ದಿನ ಕಾಲ ಕರ್ನಾಟಕದಲ್ಲಿ ಇರಲಿದೆ.
ನವೆಂಬರ್ 29ರ ಬುಧವಾರದಿಂದ ಡಿಸೆಂಬರ್ 3 ರ ಭಾನುವಾರ ವರೆಗಿನ ಹವಾಮಾನ ಮುನ್ಸೂಚನೆಯ ವರದಿಯನ್ನು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರವು ಬಿಡುಗಡೆ ಮಾಡಿದೆ.
ಈ ಪ್ರಕಾರ ನವೆಂಬರ್ 29ರ ಬುಧವಾರ ಕರ್ನಾಟಕದ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಗಳಿವೆ. ಅದೇ ರೀತಿ ನವೆಂಬರ್ 30 ರ ಗುರುವಾರದಂದು ಕರ್ನಾಟಕದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸೂಚನೆ ನೀಡಲಾಗಿದೆ.
ಡಿಸೆಂಬರ್ ಮೊದಲೆರಡು ದಿನ
ಡಿಸೆಂಬರ್ 1ರ ಶುಕ್ರವಾರ ಮಾತ್ರ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಮದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ. ಕರಾವಳಿ ಮೂರು ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆ ಬೀಳಬಹುದು.
ಡಿಸೆಂಬರ್ 2ರ ಶನಿವಾರದಂದು ಕರಾವಳಿಯ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರ ಮಳೆಯಾಗಬಹುದು. ಅದೇ ರೀತಿ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಕಡೆಗಳಲ್ಲೂ ಮಳೆಯಾಗುವ ನಿರೀಕ್ಷೆಯಿದೆ.
ಡಿಸೆಂಬರ್ 3 ರ ಭಾನುವಾರದಂದು ಕರಾವಳಿ ಜಿಲ್ಲಗಳು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲೊ ಹಗುರವಾರಿ ಮಳೆಯಾಗಬಹುದು. ಆದರೆ ಉತ್ತರ ಒಳನಾಡಿನಲ್ಲಿ ಭಾನುವಾರ ಒಣ ಹವೆಯ ವಾತಾವರಣ ಕಂಡು ಬರಲಿದೆ.
ಈ ಐದು ದಿನದ ಅವಧಿಯಲ್ಲಿ ಕರ್ನಾಟಕದಲ್ಲಿ ಎಲ್ಲಿಯೂ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ಇಲ್ಲ. ಗುಡುಗು ಇಲ್ಲವೇ ಮಿಂಚಿನ ವಾತಾವರಣವೂ ಕಂಡುಬರುವುದಿಲ್ಲ ಎಂದು ತಿಳಿಸಲಾಗಿದೆ.
ಮಂಗಳವಾರದಂದು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾದ ವರದಿಯಾಗಿದೆ. ಆದರೆ ಉತ್ತರ ಒಳನಾಡಿನಲ್ಲಿ ಒಣ ಹವೆಯ ವಾತಾವರಣ ಕಂಡು ಬಂದಿದೆ.
ಬೆಂಗಳೂರು ಮಳೆ ಹೇಗೆ
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನ ಹಗುರ ಮಳೆಯಾಗಬಹುದು. ಸಾಮಾನ್ಯವಾಗಿ ಎಲ್ಲ ಕಡೆಯೂ ಮೋಡ ಕವಿದ ವಾತಾವರಣ ಎರಡೂ ದಿನವೂ ಇರಲಿದೆ. ಹಗುರವಾಗಿ ಮಳೆಯಾಗುವ ಸಾಧ್ಯತೆಗಳೇ ಹೆಚ್ಚಿವೆ. ಬೆಂಗಳೂರಿನ ಕೆಲವು ಕಡೆ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡು ಬರಲಿದೆ. ಗರಿಷ್ಠ ಉಷ್ಣಾಂಶವು 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠಉಷ್ಣಾಂಶವು 19 ಡಿಗ್ರಿ ಸೆಲ್ಸಿಯಸ್ ನಷ್ಟು ಇರುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಾನಗರದಲ್ಲಿ ಕನಿಷ್ಠ ಉಷ್ಣಾಂಶ
ಕರ್ನಾಟಕದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 17.3 ಡಿಗ್ರಿ ಸೆಲ್ಸಿಯಸ್ ಚಾಮರಾಜನಗರದಲ್ಲಿ ದಾಖಲಾಗಿದೆ.