Karnataka Rains: ಮುಂದಿನ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ, ಮುಂಗಾರು ಪ್ರವೇಶಕ್ಕೂ ಮುನ್ನ ಮಳೆ ಅಬ್ಬರ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಮುಂದಿನ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ, ಮುಂಗಾರು ಪ್ರವೇಶಕ್ಕೂ ಮುನ್ನ ಮಳೆ ಅಬ್ಬರ

Karnataka Rains: ಮುಂದಿನ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ, ಮುಂಗಾರು ಪ್ರವೇಶಕ್ಕೂ ಮುನ್ನ ಮಳೆ ಅಬ್ಬರ

Rain Updates ಕರ್ನಾಟಕದಲ್ಲಿ ಮುಂದಿನ ವಾರ ಮಳೆಯ ಸನ್ನಿವೇಶ ಹೇಗಿರಲಿದೆ ಎನ್ನುವ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ( IMD) ಬೆಂಗಳೂರು ಕೇಂದ್ರ ನೀಡಿದೆ.

ಉತ್ತಮ ಮಳೆಗೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಬಳಿ ತುಂಗಾ ನದಿ( Tunga River) ನೀರಿನ ಪ್ರಮಾಣ ಹೆಚ್ಚಾಗಿದೆ.
ಉತ್ತಮ ಮಳೆಗೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಬಳಿ ತುಂಗಾ ನದಿ( Tunga River) ನೀರಿನ ಪ್ರಮಾಣ ಹೆಚ್ಚಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಇನ್ನೇನು ಮುಂಗಾರು( Monsoon) ಪ್ರವೇಶ ಆಗುವ ಲಕ್ಷಣಗಳು ಗೋಚರಿಸುತ್ತಿವೆ. ಈ ವಾರಾಂತ್ಯದೊಳಗೆ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಬಹುದು ಎನ್ನುವ ಮುನ್ಸೂಚನೆ ನಡುವೆ ಪೂರ್ವಮುಂಗಾರಿನ ಅಬ್ಬರವೂ ಜೋರಾಗಿದೆ. ಈಗಾಗಲೇ ಮೇ ಎರಡು ವಾರಗಳ ಸುರಿದಿದ್ದ ಪೂರ್ವ ಮುಂಗಾರು( Pre Monsoon) ಕೊನೆ ವಾರದಲ್ಲಿ ಕಡಿಮೆಯಾಗಿತ್ತು. ಈಗ ಮತ್ತೆ ಜೂನ್‌ ಮೊದಲ ವಾರದಲ್ಲಿ ಮತ್ತೆ ಚುರುಕುಗೊಂಡಿದೆ. ಬೆಂಗಳೂರು, ಮೈಸೂರು, ಹಾಸನ ಸಹಿತ ಹಲವು ಭಾಗಗಳಲ್ಲ ಭಾರೀ ಮಳೆಯಾಗುತ್ತಿದೆ. ಪೂರ್ವ ಮುಂಗಾರು ಮಳೆ ಮುಂದಿನ ನಾಲ್ಕು ದಿನಗಳ ಕಾಲ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕಚೇರಿ ತನ್ನ ದೈನಂದಿನ ವರದಿಯಲ್ಲಿ ಹೇಳಿದೆ. ಕರಾವಳಿ, ಮಲೆನಾಡು, ಬೆಂಗಳೂರು, ಹಳೆ ಮೈಸೂರು ಭಾಗವಲ್ಲದೇ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲೂ ಜೂನ್‌ 6ರವರೆಗೆ ಮಳೆಯಾಗಲಿದೆ.

ಜೂನ್‌ 3ರ ಸೋಮವಾರದಂದು ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಶಿವಮೊಗ್ಗ, ವಿಜಯನಗರ, ಜಿಲ್ಲೆಗಳಲ್ಲಿ ಹೆಚ್ಚಿನ ಬಿರುಗಾಳಿ ಸಹಿತ ಸಾಧಾರಣ ಮಳೆ ಗುಡುಗು ಸಹಿತ ಸುರಿಯಲಿದೆ. ರಾಯಚೂರು, ಕೊಪ್ಪಳ. ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರ ನಗರ, ಚಾಮರಾಜನಗರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡಗಳಲ್ಲಿ ಭಾರೀ ಮಳೆ ಗುಡುಗು ಸಹಿತ ಆಗಬಹುದು ಎನ್ನುವ ಮುನ್ಸೂಚನೆಯನ್ನು ನೀಡಲಾಗಿದೆ.

ಜೂನ್‌ 4ರ ಮಂಗಳವಾರದಂದು ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯು ಗುಡುಗು ಸಿಡಿಲಿನ ಸಹಿತ ಆಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾ, ಮಂಡ್ಯ, ಮೈಸೂರು ಸೇರಿದಂತೆ ಹಲವು ಸ್ಥಳಗಳಲ್ಲಿ ಸಾಧಾರಣಾ ಮಳೆ ಗುಡುಗು ಸಹಿತವಾಗಿ ಆಗಲಿದೆ. ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಬಹುದು. ಬಾಗಲಕೋಟೆ, ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಲವು ಕಡಗಳಲ್ಲಿ ಗಾಳಿ ಸಹಿತ ಗುಡುಗಿನೊಂದಿಗೆ ಮಳೆಯಾಗಲಿದೆ. ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮೇಲ್ಮೈ ಮಾರುತಗಳ ಮೇಲುಗೈ ಸಾಧಿಸಲಿವೆ.

ಜೂನ್‌ 5ರ ಬುಧವಾರ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಗುಡುಗು ಸಮೇತವಾಗಿ ಆಗಬಹುದು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಗುಡುಗು ಕೂಡ ಇರಲಿದೆ. ಬಾಗಲಕೋಟೆ. ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು ಸಹಿ ಮಳೆ ಬೀಳಬಹುದು. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು. ಕೋಲಾರ, ಮಂಡ್ಯ, ಮೈಸೂರು, ರಾಮನರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಜೂನ್‌ 6ರ ಗುರುವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ, ಗುಡುಗು ಸಹಿತವಾಗಿ ಆಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ ಸೇರಿದಂತೆ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು. ಕೋಲಾರ, ಮಂಡ್ಯ, ಮೈಸೂರು, ರಾಮನರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

Whats_app_banner