Karnataka Weather: ಬೀದರ್‌, ಕೊಡಗು, ಶಿರಾಲಿಯಲ್ಲಿ ಉಷ್ಣಾಂಶ ಕುಸಿದು ಚಳಿ; ಬೆಂಗಳೂರಲ್ಲಿ ಬಿಸಿಲು, ಮಳೆ ವಾತಾವರಣ ಹೇಗಿದೆ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Weather: ಬೀದರ್‌, ಕೊಡಗು, ಶಿರಾಲಿಯಲ್ಲಿ ಉಷ್ಣಾಂಶ ಕುಸಿದು ಚಳಿ; ಬೆಂಗಳೂರಲ್ಲಿ ಬಿಸಿಲು, ಮಳೆ ವಾತಾವರಣ ಹೇಗಿದೆ

Karnataka Weather: ಬೀದರ್‌, ಕೊಡಗು, ಶಿರಾಲಿಯಲ್ಲಿ ಉಷ್ಣಾಂಶ ಕುಸಿದು ಚಳಿ; ಬೆಂಗಳೂರಲ್ಲಿ ಬಿಸಿಲು, ಮಳೆ ವಾತಾವರಣ ಹೇಗಿದೆ

Karnataka Weather ಕರ್ನಾಟಕದಲ್ಲಿ ಮಳೆ ಕಡಿಮೆಯಾಗುತ್ತಿದ್ದರೆ ನಿಧಾನವಾಗಿ ಚಳಿ ಹೆಚ್ಚುತ್ತಿದೆ. ಬೀದರ್‌, ವಿಜಯಪುರ, ಧಾರವಾಡ, ಗದಗ ಭಾಗದಲ್ಲಿ ಬೆಳಗಿನ ವೇಳೆ ದಟ್ಟ ಚಳಿ ಅನುಭವವಾಗುತ್ತಿದೆ. ಕೊಡಗು, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಯಲ್ಲೂ ಇದೇ ವಾತಾವರಣವಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಚಳಿಯ ಅನುಭವ ಶುರುವಾಗಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಚಳಿಯ ಅನುಭವ ಶುರುವಾಗಿದೆ.

ಬೆಂಗಳೂರು: ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಭಾಗದ ಹಲವು ಜಿಲ್ಲೆಗಳ ಕನಿಷ್ಠ ಉಷ್ಣಾಂಶದಲ್ಲಿ( Karnataka Weather Updates) ಕುಸಿತ ಕಂಡು ಚಳಿಯ ಅನುಭವ ಹೆಚ್ಚುತ್ತಿದೆ. ಉತ್ತರ ಕರ್ನಾಟಕದ ಬೀದರ್‌( Bidar Weather), ವಿಜಯಪುರ, ಧಾರವಾಡ, ಗದಗ, ದಕ್ಷಿಣ ಕರ್ನಾಟಕದ ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಕರಾವಳಿಯ ಉತ್ತರ ಕನ್ನಡ ಜಿಲ್ಲೆ ಶಿರಾಲಿಯಲ್ಲೂ ಕನಿಷ್ಠ ಉಷ್ಣಾಂಶದಲ್ಲಿ ಕುಸಿತವಾಗಿ ಚಳಿ ಅಧಿಕವಾಗಿದೆ. ಬೆಂಗಳೂರಿನ ಹವಾಮಾನದಲ್ಲಿ(Bangalore Weather) ಭಾರೀ ವ್ಯತ್ಯಾಸವೇನೂ ಕಂಡು ಬಂದಿಲ್ಲ. ಕರ್ನಾಟಕದಲ್ಲಿ ಬಹುತೇಕ ಮಳೆ ಪ್ರಮಾಣ ಎಲ್ಲಾ ಭಾಗಗಳಲ್ಲೂ ತಗ್ಗಿದ್ದು. ಕರಾವಳಿ, ಮಲೆನಾಡು ಜಿಲ್ಲೆಗಳ( Karnataka Rains) ಒಂದೆರಡು ಕಡೆಗಳಲ್ಲಿ ಮಂಗಳವಾರವೂ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರವು( IMD Bangalore Center) ನೀಡಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಉತ್ತರದಲ್ಲಿ ಹೆಚ್ಚಿನ ಚಳಿ

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೇ ಚಳಿಯ ವಾತಾವರಣ ಕಂಡು ಬರುತ್ತಿದೆ.

ವಿಜಯಪುರದಲ್ಲಿ ಗರಿಷ್ಠ ತಾಪಮಾನ32.4 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 16.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಧಾರವಾಡದಲ್ಲಿ ಗರಿಷ್ಠ ತಾಪಮಾನ 29.0 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ19.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಬೀದರ್‌ನಲ್ಲಿ ಗರಿಷ್ಠ ತಾಪಮಾನ 29.6 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ21.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಬೆಳಗಾವಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ20.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಗದಗದಲ್ಲಿ ಗರಿಷ್ಠ ತಾಪಮಾನ32.2 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 19.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಹಾವೇರಿಯಲ್ಲಿ ಗರಿಷ್ಠ ತಾಪಮಾನ 27.8ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ20.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 22.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ದಕ್ಷಿಣ ಕರ್ನಾಟಕದ ಕೆಲವು ಭಾಗದಲ್ಲೂ ಚಳಿಯ ವಾತಾವರಣ ದಾಖಲಾಗಿದೆ.

ಕೊಡಗಿನಲ್ಲಿ ಗರಿಷ್ಠ ತಾಪಮಾನ32 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 17.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಚಾಮರಾಜನಗರದಲ್ಲಿ ಗರಿಷ್ಠ ತಾಪಮಾನ30.1 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 17.3 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಉತ್ತರ ಕರ್ನಾಟಕದ ಶಿರಾಲಿಯಲ್ಲಿ ಗರಿಷ್ಠ ತಾಪಮಾನ 31.5 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 17.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಮಂಗಳೂರಿನಲ್ಲಿ ಗರಿಷ್ಠ ತಾಪಮಾನ31.2 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 22.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಶಿವಮೊಗ್ಗದಲ್ಲಿ ಗರಿಷ್ಠ ತಾಪಮಾನ 27.8 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 20.ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಮಳೆ ಹೇಗಿದೆ

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಂಗಳವಾರ ಹಗುರದಿಂದ ಸಾಧಾರಣ ಮಳೆಯಾಗಬಹುದು. ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯುವ ಸಾಧ್ಯತೆಗಳಿವೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಶುಷ್ಕವಾದ ಹವಾಮಾನ ಇರುವ ಸಾಧ್ಯತೆಗಳೇ ಹೆಚ್ಚು ಎಂದು ಹವಾಮಾನ ಇಲಾಖೆಯು ತಿಳಿಸಿದೆ.

ಇದಲ್ಲದೇ ಮುಂದಿನ ಒಂದು ವಾರದ ಕಾಲವು ಕರಾವಳಿ ಭಾಗದ ಜಿಲ್ಲೆಗಳು ಹಾಗ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸೂಚನೆಯನ್ನು ಕೂಡ ನೀಡಲಾಗಿದೆ.

ಎಲ್ಲೆಲ್ಲಿ ಮಳೆಯಾಗಿದೆ

ಕರ್ನಾಟಕದಲ್ಲಿ ಸೋಮವಾರವೂ ಕೆಲವು ಭಾಗಗಳಲ್ಲಿ ಮಳೆಯಾದ ವರದಿಯಾಗಿದೆ. ಕಾರವಾರ ಹಾಗೂ ಭಟ್ಕಳ ತಾಲ್ಲೂಕಿನ ಶಿರಾಲಿಯಲ್ಲಿ ಅತ್ಯಧಿಕ 3 ಸೆ.ಮೀನಷ್ಟು ಮಳೆಯಾಗಿದೆ. ಉಡುಪಿ ಜಿಲ್ಲೆಯ ಸಿದ್ದಾಪುರ, ಕುಂದಾಪುರ, ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಮಂಕಿ. ಗೋಕರ್ಣ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲೂ ಮಳೆಯಾಗಿದೆ

ಬೆಂಗಳೂರು ಹವಾಮಾನ

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಹಾಗೂ ಬುಧವಾರದಂದು ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಬಹುತೇಕ ಎಲ್ಲಾ ಕಡೆಗಳಲ್ಲಿ ಒಣ ಹವೆಯೇ ಇರಲಿದೆ. ಎರಡು ದಿನವೂ ಬೆಂಗಳೂರಿನ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ಅಂದಾಜಿದೆ.

Whats_app_banner