ಕರ್ನಾಟಕ ಹವಾಮಾನ: ಕರಾವಳಿ, ಮಲೆನಾಡು ಭಾಗದಲ್ಲಿ ಇಂದು ಭಾರೀ ಮಳೆ, 6 ಜಿಲ್ಲೆಗಳಲ್ಲಿ ಅಲರ್ಟ್‌-karnataka weather update bengaluru weather today august 29 rain prediction in udupi shimoga belagavi dakshinakannada kub ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ: ಕರಾವಳಿ, ಮಲೆನಾಡು ಭಾಗದಲ್ಲಿ ಇಂದು ಭಾರೀ ಮಳೆ, 6 ಜಿಲ್ಲೆಗಳಲ್ಲಿ ಅಲರ್ಟ್‌

ಕರ್ನಾಟಕ ಹವಾಮಾನ: ಕರಾವಳಿ, ಮಲೆನಾಡು ಭಾಗದಲ್ಲಿ ಇಂದು ಭಾರೀ ಮಳೆ, 6 ಜಿಲ್ಲೆಗಳಲ್ಲಿ ಅಲರ್ಟ್‌

Karnataka Weather Updates ಕರ್ನಾಟಕದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅತೀ ಭಾರೀ ಮಳೆಯಾಗುವ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ.

ಕರಾವಳಿ ಭಾಗದಲ್ಲಿ ಗುರುವಾರವೂ ಭಾರೀ ಮಳೆ ಮುಂದುವರೆಯುವ ಸೂಚನೆಗಳಿವೆ.
ಕರಾವಳಿ ಭಾಗದಲ್ಲಿ ಗುರುವಾರವೂ ಭಾರೀ ಮಳೆ ಮುಂದುವರೆಯುವ ಸೂಚನೆಗಳಿವೆ.

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ( Karnataka Rains) ಗುರುವಾರವೂ ಅತೀ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಮೂರ್ನಾಲ್ಕು ದಿನಗಳಿಂದ ಈ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ನಾಲ್ಕೈದು ದಿನ ಭಾರೀ ವಾತಾವರಣ ಮುಂದುವರಿಯಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹಲವೆಡೆ ಭಾರೀಯಿಂದ ಅತೀ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆಯನ್ನು ನೀಡಲಾಗಿದೆ. ಈ ಐದೂ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌( Orange Alert) ಅನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ( IMD Bangalore Center) ನೀಡಿದೆ. ಇದಲ್ಲದೇ ಬೆಳಗಾವಿ ಜಿಲ್ಲೆಯಲ್ಲೂ( Belagavi Rains) ಭಾರೀ ಮಳೆಯಾಗುವ ಸೂಚನೆ ನೀಡಲಾಗಿದ್ದು. ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ಮಹಾನಗರದಲ್ಲಿ( Bangalore Rains) ಸಾಧಾರಣ ಮಳೆಯಾಗುವ ಸೂಚನೆ ನೀಡಲಾಗಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲೆಲ್ಲಿ ಮಳೆ ಸೂಚನೆ

ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಕರಾವಳಿ ಭಾಗದ ಅಲ್ಲಲ್ಲಿ ಭಾರೀ ಮಳೆಯಿಂದ ಅತೀ ಭಾರೀ ಮಳೆಯಾಗುವ ಸಾಧ್ಯತೆಗಳು ಅಧಿಕವಾಗಿವೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಕಡೆಗಳಲ್ಲೂ ಭಾರೀ ಮಳೆಯಿಂದ ಅತೀ ಭಾರೀ ಮಳೆಯಾಗಲಿದೆ. ಬೆಳಗಾವಿ ಜಿಲ್ಲೆಯ ಒಂದು ಅಥವಾ ಎರಡು ಕಡೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಗಾಳಿಯ ವೇಗವೂ ಜೋರಾಗಿಯೇ ಇರಲಿದೆ.

ಉತ್ತರ ಒಳನಾಡಿನ ಇತರೆ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಲಘುವಾಗಿ ಮಳೆಯಾಗಬಹುದು. ಇಲ್ಲಿಯೂ ಗಾಳಿಯ ವೇಗ ಹೆಚ್ಚಿರಲಿದೆ. ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಉದ್ದಕ್ಕೂ ಗಾಳಿಯ ವೇಗವೂ ಹೆಚ್ಚಿರಲಿದೆ. ಗಾಳಿಯ ವೇಗ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಇರಲಿದೆ.

ಬೆಂಗಳೂರು ಹವಾಮಾನ

ಬೆಂಗಳೂರು ಮಹಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 48 ಗಂಟೆಗಳ ಕಾಲದಲ್ಲಿ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಉಷ್ಣಾಂಶದಲ್ಲೂ ಕುಸಿತ ಕಂಡು ಬಂದಿದ್ದು. ಚಳಿಯ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶವು 28 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್‌ ದಾಖಲಾಗಬಹುದು.

ಉತ್ತಮ ಮಳೆ

ಬುಧವಾರವೂ ಕರ್ನಾಟಕದ ನಾನಾ ಭಾಗಗಳಲ್ಲಿ ಉತ್ತಮ ಮಳೆಯಾದ ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್‌ ರಾಕ್‌ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ ಅತ್ಯಧಿಕ 9 ಸೆ.ಮೀ ಹಾಗೂ ಶಿವಮೊಗ್ಗ ಜಿಲ್ಲೆಯ ಆಗುಂಬೆ ಹಾಗೂ ಲಿಂಗನಮಕ್ಕಿಯಲ್ಲಿ 8 ಸೆ.ಮೀ ನಷ್ಟು ಮಳೆ ಸುರಿದಿದೆ.

ಉತ್ತರ ಕನ್ನಡದ ಕದ್ರಾ, ಶಿರಾಲಿ, ಜಗಲ್‌ಬೆಟ್‌, ಗೇರುಸೊಪ್ಪ, ಕಾರವಾರ, ಕುಮಟಾ, ಮಂಕಿ, ಜೋಯಿಡಾ, ಯಲ್ಲಾಪುರ, ಸಿದ್ದಾಪುರ, ಬನವಾಸಿ, ಹಳಿಯಾಳ, ಅಂಕೋಲಾ, ಉಡುಪಿ ಜಿಲ್ಲೆಯ ಕೊಲ್ಲೂರು, ಸಿದ್ದಾಪುರ, ಕೋಟ, ಕುಂದಾಪುರ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಕಮ್ಮರಡಿ, ಬಾಳೆ ಹೊನ್ನೂರು, ಜಯಪುರ, ಕಳಸ, ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್‌ಆರ್‌ಪುರ, ಕೊಡಗಿನ ಭಾಗಮಂಡಲ, ಪೊನ್ನಂಪೇಟೆ, ಸೋಮವಾರಪೇಟೆ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಪಣಂಬೂರು, ಧರ್ಮಸ್ಥಳ, ಉಪ್ಪಿನಂಗಡಿ, ವಿಜಯಪುರ ಜಿಲ್ಲೆಯ ವಿಜಯಪುರ, ಆಲಮಟ್ಟಿ. ದೇವರಹಿಪ್ಪರಗಿ, ರಾಯಚೂರು, ಕಲಬುರಗಿಯ ಅಡಕಿ, ಸೇಡಂ, ಹಾವೇರಿ, ಸವಣೂರು, ಬೆಳಗಾವಿ ವಿಮಾನ ನಿಲ್ದಾಣ, ಸಂಕೇಶ್ವರ, ಧಾರವಾಡ ಜಿಲ್ಲೆ ಕಲಘಟಗಿ, ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆ, ತ್ಯಾಗರ್ತಿಯಲ್ಲಿ ಮಳೆಯಾದ ಮಾಹಿತಿಯಿದೆ.