Karnataka Rains: ಚಿತ್ರದುರ್ಗ, ತುಮಕೂರು, ರಾಮನಗರದಲ್ಲಿ ಆರೆಂಜ್‌ ಅಲರ್ಟ್‌; ಬೆಂಗಳೂರು, ಮೈಸೂರು ಭಾಗದಲ್ಲೂ ಇಂದು ಭಾರೀ ಮಳೆ ಮುನ್ಸೂಚನೆ-karnataka weather update bengaluru weather today august14 rain prediction chitradurga tumkur ramanagar mysore mandya kub ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಚಿತ್ರದುರ್ಗ, ತುಮಕೂರು, ರಾಮನಗರದಲ್ಲಿ ಆರೆಂಜ್‌ ಅಲರ್ಟ್‌; ಬೆಂಗಳೂರು, ಮೈಸೂರು ಭಾಗದಲ್ಲೂ ಇಂದು ಭಾರೀ ಮಳೆ ಮುನ್ಸೂಚನೆ

Karnataka Rains: ಚಿತ್ರದುರ್ಗ, ತುಮಕೂರು, ರಾಮನಗರದಲ್ಲಿ ಆರೆಂಜ್‌ ಅಲರ್ಟ್‌; ಬೆಂಗಳೂರು, ಮೈಸೂರು ಭಾಗದಲ್ಲೂ ಇಂದು ಭಾರೀ ಮಳೆ ಮುನ್ಸೂಚನೆ

Karnataka Weather Updates ಕರ್ನಾಟಕದಲ್ಲಿ ಬುಧವಾರದಿಂದ ಮಳೆ ಮತ್ತೆ ಹೆಚ್ಚಾಗುವ ಸೂಚನೆಯಿದೆ. ಬೆಂಗಳೂರು, ಮೈಸೂರು, ಮಲೆನಾಡು ಭಾಗದಲ್ಲೀ ಭಾರೀ ಮಳೆಯಾಗಲಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬುಧವಾರ ಮಳೆಯಾಗುವ ಸೂಚನೆ ನೀಡಲಾಗಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬುಧವಾರ ಮಳೆಯಾಗುವ ಸೂಚನೆ ನೀಡಲಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಒಂದು ವಾರ ಕಾಲ ಬಿಡುವು ನೀಡಿದ್ದ ಮಳೆ( Karnataka Rains) ಮತ್ತೆ ಚುರುಕುಗೊಂಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆ ಮೂನ್ಸೂಚನೆ ನೀಡಲಾಗಿದೆ. ಅದರಲ್ಲೂ ಬುಧವಾರದಂದು ಚಿತ್ರದುರ್ಗ, ಚಿಕ್ಕಬಳ್ಳಾಪುರ,ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಭಾರೀಯಿಂದ ಅತೀ ಭಾರೀ ಮಳೆ ಗುಡುಗು ಸಹಿತ ಸುರಿಯುವ ಸೂಚನೆಯಿದೆ. ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ನಗರ,( Bangalore Rains) ಮೈಸೂರು( Mysore Rains), ಮಂಡ್ಯ. ಹಾಸನ, ಚಿಕ್ಕಮಗಳೂರು ಭಾಗದಲ್ಲೂ ಭಾರೀ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರವು ಸೂಚನೆ ನೀಡಿದೆ. ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮಂಗಳವಾರವೂ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾದ ವರದಿಯೂ ಆಗಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲೆಲ್ಲಿ ಮಳೆಯಾಗಲಿದೆ

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಸಾಧಾರಣ ಮಳೆಯಾಗುವ ಸೂಚನೆಗಳಿವೆ. ರಾಮನಗರ, ತುಮಕೂರು, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆಯಿಂದ ಅತೀ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಗುಡುಗು ಸಹಿತ ಮಳೆಯೂ ಕೆಲವಡೆಗೆ ಆಗಬಹುದು. ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಮುನ್ಸೂಚನೆಯಿದೆ. ಇದೇ ರೀತಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆ ಗುಡುಗು ಸಹಿತ ಆಗಬಹುದು. ಕೊಪ್ಪಳ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳ ಕೆಲವು ಭಾಗಗಳಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಉತ್ತರ ಒಳನಾಡಿನ ಇತರೆ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗಲಿದ್ದು, ಗುಡುಗು ಕೂಡ ಇರಲಿದೆ ಎಂದು ಸೂಚನೆ ನೀಡಲಾಗಿದೆ.

ಬೆಂಗಳೂರು ಮಳೆ

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯು ನೀಡಿದೆ. ಬೆಂಗಳೂರು ನಗರದಲ್ಲೂ ಯಲ್ಲೋ ಅಲರ್ಟ್‌ ಸೂಚನೆಯಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಕೆಲವು ಭಾಗದಲ್ಲಿ ಭಾರೀ ಮಳೆ, ಇನ್ನಷ್ಟು ಕಡೆ ಸಾಧಾರಣ ಮಳೆಯಾಗುವ ಲಕ್ಷಣಗಳು ಇವೆ. ಗುಡುಗು ಸಹಿತ ಮಳೆಯೂ ಆಗಬಹುದು ಎನ್ನುವ ಸೂಚನೆ ನೀಡಲಾಗಿದೆ. ಬೆಂಗಳೂರಿನ ತಾಪಮಾನವು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಬಹುದು.

ಹಲವೆಡೆ ಉತ್ತಮ ಮಳೆ

ಕರ್ನಾಟಕದಲ್ಲಿ ಮಂಗಳವಾರ ನೈರುತ್ಯ ಮುಂಗಾರು ಒಳನಾಡಿನ ಹಲವು ಭಾಗದಲ್ಲಿ ಸಾಮಾನ್ಯವಾಗಿತ್ತು. ಕರಾವಳಿ ಭಾಗದಲ್ಲಿ ದುರ್ಬಲವಾಗಿತ್ತು. ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಉತ್ತಮ ಮಳೆಯಾಗಿದ್ದರೆ, ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾದ ಮಾಹಿತಿಯಿದೆ.

ಕೋಲಾರ ಜಿಲ್ಲೆಯ ರಾಯಲ್ಪಾಡುವಿನಲ್ಲಿ ಭಾರೀ ಹಾಗೂ ಅತ್ಯಧಿಕ 9 ಸೆ.ಮೀ ಮಳೆಯಾಗಿದೆ. ವಿಜಯಪುರ ಜಿಲ್ಲೆ ತಾಳೀಕೋಟೆಯಲ್ಲಿ 6 ಸೆ.ಮೀ, ರಾಯಚೂರು ಜಿಲ್ಲೆ ಸಿಂಧನೂರು, ವಿಜಯಪುರ ಜಿಲ್ಲೆ ನಾಲತವಾಡ, ಬಸವನ ಬಾಗೇವಾಡಿ, ಮುದ್ದೇ ಬಿಹಾಳ, ತುಮಕೂರು ಜಿಲ್ಲೆಯ ಮಿಡಿಗೇಶಿ, ಪಾವಗಡ, ಮಧುಗಿರಿ,ವೈ.ಎನ್‌. ಹೊಸಕೋಟೆ, ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ, ತೊಂಡೇಭಾವಿ, ಚಿಕ್ಕಬಳ್ಳಾಪುರ ನಗರ, ಗೌರಿಬಿದನೂರು, ಯಾದಗಿರಿ ಜಿಲ್ಲೆಯ ಕಕ್ಕೇರಾ, ಚಿಕ್ಕಮಗಳೂರು ಜಿಲ್ಲೆಯ ಜಯಪುರ, ಕೊಡಗಿನ ಸೋಮವಾರಪೇಟೆ, ಭಾಗಮಂಡಲ, ಪೊನ್ನಂಪೇಟೆ, ರಾಯಚೂರಿನ ಮಸ್ಕಿ, ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ, ಬಳ್ಳಾರಿ ಜಿಲ್ಲೆ ಕುಡಿತಿನಿ, ಕೋಲಾರ ನಗರದಲ್ಲೂ ಉತ್ತಮ ಮಳೆಯಾದ ವರದಿಯಾಗಿದೆ.