Karnataka Rains: ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಯಲ್ಲಿ ಇಂದು ಭಾರೀ ಮಳೆ; 16 ಜಿಲ್ಲೆಗಳಲ್ಲಿ ಅಲರ್ಟ್‌ ಘೋಷಣೆ-karnataka weather update bengaluru weather today august16 rain prediction mysore davangere kodagu udupi gadag tumkur kub ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಯಲ್ಲಿ ಇಂದು ಭಾರೀ ಮಳೆ; 16 ಜಿಲ್ಲೆಗಳಲ್ಲಿ ಅಲರ್ಟ್‌ ಘೋಷಣೆ

Karnataka Rains: ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಯಲ್ಲಿ ಇಂದು ಭಾರೀ ಮಳೆ; 16 ಜಿಲ್ಲೆಗಳಲ್ಲಿ ಅಲರ್ಟ್‌ ಘೋಷಣೆ

Weather Update ಕರ್ನಾಟಕದ ಉತ್ತರ, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುವ( Karnataka Rains) ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ( Imd) ನೀಡಿದೆ.

Rain in Karnakata ಕರ್ನಾಟಕದ ಹದಿನಾರು ಜಿಲ್ಲೆಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಸೂಚನೆಯಿದೆ
Rain in Karnakata ಕರ್ನಾಟಕದ ಹದಿನಾರು ಜಿಲ್ಲೆಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಸೂಚನೆಯಿದೆ

ಬೆಂಗಳೂರು: ಕರ್ನಾಟಕದ 16 ಜಿಲ್ಲೆಗಳಲ್ಲಿ ಶುಕ್ರವಾರದಂದು ಮಳೆ ಸುರಿಯುವ ಮುನ್ಸೂಚನೆಯಿದೆ. ಉತ್ತರ ಕರ್ನಾಟಕ, ಮಲೆನಾಡು, ಮಧ್ಯ ಕರ್ನಾಟಕ, ಕರಾವಳಿ ಹಾಗೂ ಹಳೆ ಮೈಸೂರು ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ ನೀಡಿದೆ. ಅದರಲ್ಲೂ ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀಯಿಂದ ಅತೀ ಭಾರಿ ಮಳೆಯಾಗುವ ಸೂಚನೆಯಿದೆ. ಈ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆಯಾಗಿದೆ. ಇದಲ್ಲದ ಕಲ್ಯಾಣ ಕರ್ನಾಟಕದ ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಗದಗ, ಹಳೆ ಮೈಸೂರು ಭಾಗಗಳಾದ ತುಮಕೂರು, ಹಾಸನ, ಮೈಸೂರು, ಕೊಡಗು, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು. ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸೂಚನೆಗಳಿವೆ. ಸ್ವಾತಂತ್ರ್ಯೋತ್ಸವದ ಮುನ್ನಾ ರಾತ್ರಿ ಹಾಗೂ ಗುರುವಾರವೂ ಕೊಪ್ಪಳ ಸೇರಿದಂತೆ ಹಲವು ಕಡೆ ಹೆಚ್ಚಿನ ಮಳೆಯಾದ ವರದಿಯಾಗಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಳೆ ಮುನ್ಸೂಚನೆ ಹೇಗಿದೆ

ಕರಾವಳಿ ಪ್ರದೇಶದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶುಕ್ರವಾರ ಭಾರೀ ಮಳೆ ಬೀಳುವ ಸೂಚನೆ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ , ಚಿತ್ರ ದುರ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಿಂದ ಅತೀ ಭಾರೀ ಮಳೆಯಾಗಲಿದೆ. ಗುಡುಗು ಸಹಿತ ಮಳೆಯೂ ಆಗಲಿದೆ. ಈ ನಾಲ್ಕು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ತುಮಕೂರು, ಹಾಸನ, ಮೈಸೂರು ಹಾಗೂ ಕೊಡಗು ಜಿಲ್ಲೆಗಲ್ಲೂ ಭಾರೀ ಮಳೆಯಾಗಲಿದ್ದು, ಗುಡುಗು ಕೂಡ ಇರಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವು ಭಾಗಗಳಲ್ಲಿ ಗುಡುಗೂ ಕೂಡ ಇರಲಿದೆ. ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಇದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪರದೇಶಗಳಲ್ಲೂ ಶುಕ್ರವಾರ ಹಾಗೂ ಶನಿವಾರದಂದು ಮೋಡ ಕವಿದ ವಾತಾವರಣ ಇರಲಿ. ಕೆಲವು ಭಾಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಗುಡುಗು ಕೂಡ ಇರಬಹುದು ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಎರಡೂ ದಿನಗಳಲ್ಲಿ ಬೆಂಗಳೂರಿನಲ್ಲಿ ಉಷ್ಣಾಂಶ ಪ್ರಮಾಣವು 30 ಡಿಗ್ರಿ ಹಾಗೂ ಕನಿಷ್ಠ ಉಷ್ಣಾಂಶವು 22 ಡಿಗ್ರಿ ಸೆಲ್ಸಿಯಸ್‌ ನಷ್ಟು ದಾಖಲಾಗಬಹುದು.

ಎಲ್ಲೆಲ್ಲಿ ಮಳೆಯಾಗಿದೆ

ಗುರುವಾರದಂದು ಕರ್ನಾಟಕದಲ್ಲಿಯೇ ಅತ್ಯಧಿಕ ಕೊಪ್ಪಳ ಜಿಲ್ಲೆಯಲ್ಲಿ ಮಳೆಯಾಗಿದೆ. ಕೊಪ್ಪಳ ಜಿಲ್ಲೆಯ ತಾವರಗೇರಾದಲ್ಲಿ 8 ಸೆ.ಮೀ ಹಾಗೂ ಗಂಗಾವತಿಯಲ್ಲಿ 7 ಸೆ.ಮೀನಷ್ಟು ಮಳೆ ಸುರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಮಾಣಿ, ಪಣಂಬೂರು, ಬೆಳ್ತಂಗಡಿ, ಪುತ್ತೂರು, ಗದಗ ಜಿಲ್ಲೆಯ ರೋಣ, ಬಾಗಲಕೋಟೆ ಜಿಲ್ಲೆಯ ಬಾದಾಮಿ, ಶಿವಮೊಗ್ಗ ಜಿಲ್ಲೆಯ ತ್ಯಾಗರ್ತಿ, ಕೊಡಗಿನ ಮೂರ್ನಾಡು, ಭಾಗಮಂಡಲ, ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ, ಕಡೂರು, ಕಳಸ, ಎನ್‌ ಆರ್‌ ಪುರ, ಯಗಟಿ, ತರೀಕೆರೆ, ಬಳ್ಳಾರಿ ಜಿಲ್ಲೆ ಕುಡುತಿನಿ, ಉತ್ತರ ಕನ್ನಡ ಜಿಲ್ಲೆಯ ಬನವಾಸಿ, ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟಿ, ಚಾಮರಾಜನಗರ ಜಿಲ್ಲೆ ಮಲೈಮಹದೇಶ್ವರ ಬೆಟ್ಟ, ಕೊಳ್ಳೇಗಾಲ, ಉಡುಪಿ ಜಿಲ್ಲೆ ಸಿದ್ದಾಪುರ, ಕಾರ್ಕಳ, ಕಲಬುರಗಿ ಜಿಲ್ಲೆ ಫರಹತಾಬಾದ್‌, ಯಾದಗಿರಿ ಜಿಲ್ಲೆ ಕವಡಿಮಟ್ಟಿ, ದಾವಣಗೆರೆ, ಹೊನ್ನಾಳಿ, ಚನ್ನಗಿರಿ, ಬೆಳಗಾವಿ, ಹಾವೇರಿ ಜಿಲ್ಲೆ ಶಿಗ್ಗಾಂವ್‌. ಶಿವಮೊಗ್ಗ ಜಿಲ್ಲೆ ಭದ್ರಾವತಿ, ಆನವಟ್ಟಿ, ವಿಜಯನಗರ ಜಿಲ್ಲೆ ಹರಪನಹಳ್ಳಿ, ಬೀದರ್‌ ಜಿಲ್ಲೆ ಮನ್ನಳ್ಳಿ, ಗದಗ, ಮೈಸೂರು ಜಿಲ್ಲೆ ಸರಗೂರು, ಹುಣಸೂರಿನಲ್ಲಿ ಉತ್ತಮ ಮಳೆಯಾಗಿದೆ.