Karnataka Rains: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಸಾಧಾರಣ, ಮುಂದಿನ 5 ದಿನ ತಗ್ಗಲಿದೆ ಮಳೆ ಪ್ರಮಾಣ-karnataka weather update bengaluru weather today august4 rain prediction dakshina kannada udupi uttara kannada shimoga ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಸಾಧಾರಣ, ಮುಂದಿನ 5 ದಿನ ತಗ್ಗಲಿದೆ ಮಳೆ ಪ್ರಮಾಣ

Karnataka Rains: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಸಾಧಾರಣ, ಮುಂದಿನ 5 ದಿನ ತಗ್ಗಲಿದೆ ಮಳೆ ಪ್ರಮಾಣ

Weather Updates ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾನುವಾರವೂ ಮಳೆ ಇರಲಿದ್ದು( Karnataka Rains), ಕೊಡಗು( Kodagu Rains), ಬೆಳಗಾವಿಯಲ್ಲಿ( Belagavi Rains) ಮಳೆ ಪ್ರಮಾಣ ಕಡಿಮೆಯಾಗಿದೆ.

ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾನುವಾರವೂ ಮಳೆ ಇರಲಿದೆ.
ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾನುವಾರವೂ ಮಳೆ ಇರಲಿದೆ.

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರವೂ ಕರಾವಳಿ, ಮಲೆನಾಡು ಭಾಗದ ಕೆಲವು ಕಡೆ ಭಾರೀ ಮಳೆಯಾಗುವ( Karnataka Rains) ಮುನ್ಸೂಚನೆಯನ್ನು ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಭಾಗದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಮೂರೂ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯಿದ್ದು ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಇದೆ. ಆದರೆ ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಬಹುತೇಕ ಕಡಿಮೆಯಾಗಿದೆ. ಮುಂದಿನ ನಾಲ್ಕೈದು ದಿನ ಕಾಲ ಕರ್ನಾಟಕದಲ್ಲಿ ಮಳೆ ಪ್ರಮಾಣ ತಗ್ಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ( IMD) ಬೆಂಗಳೂರು ಪ್ರಾದೇಶಿಕ ಕೇಂದ್ರವು( Bangalore Center) ತನ್ನ ವಾರದ ವರದಿಯಲ್ಲಿ ಉಲ್ಲೇಖಿಸಿದೆ.

ಎಲ್ಲೆಲ್ಲಿ ಮಳೆ

ಭಾನುವಾರ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಗಳು ದಟ್ಟವಾಗಿವೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗವು 30-40 ಕಿ.ಮಿ ನಷ್ಟು ಇರಲಿದೆ. ಈ ಮೂರು ಜಿಲ್ಲೆಗೂ ಭಾನುವಾರದಂದು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಲೆನಾಡು ಭಾಗದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಎರಡೂ ಜಿಲ್ಲೆಗಳಲ್ಲೂ ಯಲ್ಲೋ ಅಲರ್ಟ್‌ ಇದೆ.

ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.

ಸೋಮವಾರ ಹಾಗೂ ಮಂಗಳವಾರದಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಆದರೆ ಆಗಸ್ಟ್‌ 6 ರ ನಂತರ ನಾಲ್ಕೈದು ದಿನಗಳ ಕಾಲ ಮಳೆ ಪ್ರಮಾಣದಲ್ಲಿ ಇಳಿಮುಖ ಕಂಡು ಬರಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಹಗುರದಿಂದ ಸಾಧರಣ ಮಳೆಯಾಗಬಹುದು ಎಂದು ತಿಳಿಸಲಾಗಿದೆ.

ಕೊಡಗಲ್ಲಿ ತಗ್ಗಿದ ಮಳೆ

ಆದರೆ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗಿ ಕಾವೇರಿ ನದಿಯಲ್ಲೂ ಪ್ರವಾಹ ಸನ್ನಿವೇಶ ಸೃಷ್ಟಿಸಿದ್ದ ಕೊಡಗಿನಲ್ಲಿ ಮಳೆ ಪ್ರಮಾಣ ತಗ್ಗಿದೆ.ಎರಡು ದಿನದಿಂದಲೂ ಮಳೆ ಪ್ರಮಾಣ ಇಳಿಮುಖವಾಗಿ ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಕೊಡಗಿನಲ್ಲಿ ಕಾವೇರಿ ಉಬ್ಬರವೂ ತಗ್ಗಿದೆ. ಕೊಡಗಲ್ಲಿ ಸತತವಾಗಿ ಮಳೆಯಾಗಿದ್ದರಿಂದ ಕೆಆರ್‌ಎಸ್‌ ಜಲಾಶಯವೂ ಈಗಾಗಲೇ ತುಂಬಿ ಹೆಚ್ಚಿನ ನೀರು ತಮಿಳುನಾಡಿಗೆ ಹರಿದಿದೆ.

ಅದೇ ರೀತಿ ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲೂ ಮಳೆ ಪ್ರಮಾಣ ಕಡಿಮೆಯಾಗಿದೆ. ಬೆಳಗಾವಿಯ ಮಲೆನಾಡು ಭಾಗವೂ ಸೇರಿದಂತೆ ಹಲವೆಡೆ ಸತತವಾಗಿ ಮಳೆಯಾಗಿದೆ.

ಬೆಂಗಳೂರು ಹವಾಮಾನ

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯಾಬಹುದು. ಬೆಂಗಳೂರಿನಲ್ಲಿ ಭಾನುವಾರ ದಿನವಿಡೀ ಮೋಡ ಕವಿದ ಆಕಾಶ ಇರಲಿದೆ. ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ನಿರಂತರ ಗಾಳಿಯ ವೇಗವು 30 ರಿಂದ 40 ಕಿ.ಮಿ.ಗೆ ತಲುಪಬಹುದು. ಗರಿಷ್ಠ ಉಷ್ಣಾಂಶವು 28 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್‌ ನಷ್ಟಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.