ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಚಳಿ ಜೋರು, ಹಲವೆಡೆ ಮಂಜು ಮುಸುಕಿದ ವಾತಾವರಣ; ನ.20ರ ಹವಾಮಾನ ವರದಿ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಚಳಿ ಜೋರು, ಹಲವೆಡೆ ಮಂಜು ಮುಸುಕಿದ ವಾತಾವರಣ; ನ.20ರ ಹವಾಮಾನ ವರದಿ

ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಚಳಿ ಜೋರು, ಹಲವೆಡೆ ಮಂಜು ಮುಸುಕಿದ ವಾತಾವರಣ; ನ.20ರ ಹವಾಮಾನ ವರದಿ

ಚಳಿಗಾಲ ಪ್ರಾರಂಭವಾದರೂ ಈಗಲೂ ಅಲ್ಲಲ್ಲಿ ಮಳೆ ಬೀಳುತ್ತಿದ್ದು, ಕಳೆದೊಂದು ವಾರದಿಂದ ಮಳೆರಾಯ ಸಂಪೂರ್ಣವಾಗಿ ಬಿಡುವು ನೀಡಿದ್ದಾನೆ. ನವೆಂಬರ್ 18ರಿಂದ ಭಾರಿ ಮಳೆಯ ಮುನ್ಸೂಚನೆ ಇದ್ದರೂ ವರುಣಾಗಮನ ಆಗಿರಲಿಲ್ಲ. ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿಯ ಜೊತೆ ಮಂಜು ಮಸುಕಿದ ವಾತಾವರಣ ಇರಲಿದೆ. ನವೆಂಬರ್ 20ರ ಕರ್ನಾಟಕ ಹವಾಮಾನ ಹೇಗಿದೆ ನೋಡಿ.

ಕರ್ನಾಟಕ ಹವಾಮಾನ ನವೆಂಬರ್ 20
ಕರ್ನಾಟಕ ಹವಾಮಾನ ನವೆಂಬರ್ 20

ಬೆಂಗಳೂರು: ರಾಜ್ಯದಲ್ಲಿ ಮಳೆಯ ಪ್ರಮಾಣ ಸಂಪೂರ್ಣ ಕಡಿಮೆಯಾಗಿದ್ದು, ಚಳಿ ಶುರುವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಚಳಿಯ ಪ್ರಭಾವ ಜೋರಿದೆ. ಇದರೊಂದಿಗೆ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ. ರಾಜ್ಯದಲ್ಲಿ ಈ ವರ್ಷ ಭಾರಿ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇದರ ನಡುವೆ ಕರಾವಳಿ ಜಿಲ್ಲೆಗಳಲ್ಲಿ ಹಗಲಿನ ಹೊತ್ತು ಬಿಸಿಲಿನ ಪ್ರತಾಪವೂ ಜೋರಾಗಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಬೆಳಗಿನ ಜಾವದಿಂದಲೇ ಸಂಪೂರ್ಣ ಮಂಜು ಮುಸುಕಿದ ವಾತಾವರಣವಿದೆ. ಕಳೆದ ಎರಡು ದಿನಗಳಲ್ಲಿ ರಾಜಧಾನಿಯಲ್ಲಿ ಚಳಿಯ ಪ್ರಭಾವ ಕೂಡ ಹೆಚ್ಚಾಗಿದೆ. ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಕೆಲವು ಜಿ‌ಲ್ಲೆಗಳಲ್ಲಿ ಕನಿಷ್ಠ ತಾಪಮಾನ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನ ಹವಾಮಾನ ವರದಿಯ ಪ್ರಕಾರ ಚಿಕ್ಕಮಗಳೂರು, ಬೀದರ್‌ನಲ್ಲಿ ಕನಿಷ್ಠ ತಾಪಮಾನ ಇರಲಿದ್ದು, ಮಂಗಳೂರಿನಲ್ಲಿ ಗರಿಷ್ಠ ತಾಪಮಾನ (32 ಡಿಗ್ರಿ ಸೆಲಿಯಸ್ಸ್‌) ಇರಲಿದೆ. ನವೆಂಬರ್ 25 ರಿಂದ ಡಿಸೆಂಬರ್ 3ರವರೆಗೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಎಂದು ಕೂಡ ಹವಾಮಾನ ಇಲಾಖೆ ಎಚ್ಚರಿಸಿದೆ.

ಕರ್ನಾಟಕ ಪ್ರಾದೇಶಿಕ ಹವಾಮಾನ ಕೇಂದ್ರದ ಹವಾಮಾನ ಮುನ್ಸೂಚನೆ ವರದಿಯ ಪ್ರಕಾರ, ಬೆಂಗಳೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದ್ದು ಮೋಡ ಮುಸುಕಿದ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇದ್ದರೆ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಮನಗರದಲ್ಲಿ 28 ಡಿಗ್ರಿ ಗರಿಷ್ಠ ತಾಪಮಾನವಿದ್ದರೆ 18 ಡಿಗ್ರಿ ಕನಿಷ್ಠ ತಾಪಮಾನವಿರಲಿದೆ. ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರದಲ್ಲೂ ಚಳಿಯ ವಾತಾವರಣ ಮುಂದುವರಿಯಲಿದೆ.

ಕರ್ನಾಟಕದ ಬಹುತೇಕ ಕಡೆ ಒಣಹವೆ, ಅಲ್ಲಲ್ಲಿ ಚಳಿಯ ವಾತಾವರಣ

ಹವಾಮಾನ ವರದಿಯ ಪ್ರಕಾರ ನವೆಂಬರ್ 20ರಂದು ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಂದು ಒಣಹವೆ ಇರಲಿದೆ. ಇಂದಿನ ಹವಾಮಾನ ಮುನ್ಸೂಚನೆಯ ಪ್ರಕಾರ ಯಾವ ಜಿಲ್ಲೆಗಳಲ್ಲೂ ಮಳೆ ಬರುವ ಸಾಧ್ಯತೆ ಇಲ್ಲ. ಇನ್ನು ಬೆಂಗಳೂರು, ಚಿಕ್ಕಮಗಳೂರು, ಬೀದರ್‌, ಹಾಸನ, ಕೊಡಗು ಮುಂತಾದ ಜಿಲ್ಲೆಗಳಲ್ಲಿ ಚಳಿಯ ಜೊತೆ ಮಂಜು ಮುಸುಕಿದ ವಾತಾವರಣವೂ ಇರಲಿದೆ.

ಈ ವರ್ಷ ಭಾರಿ ಚಳಿಯ ಮುನ್ಸೂಚನೆ

ಡಿಸೆಂಬರ್‌ನಿಂದ ಮಾರ್ಚ್‌ ತಿಂಗಳವರೆಗೆ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೀದರ್‌, ಬಿಜಾಪುರ, ಕಲಬುರ್ಗಿ, ಯಾದಗಿರಿ, ಧಾರವಾಡ, ಬಾಗಲಕೋಟೆ, ಕೊಪ್ಪಳ ಮುಂತಾದ ಜಿಲ್ಲೆಗಳಲ್ಲಿ ತಾಪಮಾನ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿಯಲಿದೆ ಎಂದು ಹಮಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ ಒಂದು ವಾರಗಳ ಕಾಲ ಗರಿಷ್ಠ ಉಷ್ಣಾಂಶ 18 ಡಿಗ್ರಿ ಸೆಂಟಿಗ್ರೇಡ್‌ಗೆ ಕುಸಿಯುವ ಸಾಧ್ಯತೆ ಇದೆ.

ಮಳೆರಾಯ ಕೊಂಚ ಬಿಡುವು ನೀಡಿದ್ದರೂ ಮುಂದಿನ ದಿನಗಳಲ್ಲಿ ಮತ್ತೆ ಮಳೆ ಸುರಿಯುವ ಸಾಧ್ಯತೆ ಇದೆ. ಚಳಿ, ಮಳೆ, ಅಲ್ಲಲ್ಲಿ ಬಿಸಿಲು ಈ ವಾತಾವರಣವು ಸದ್ಯ ಕರ್ನಾಟಕದಾದ್ಯಂತ ನೋಡಬಹುದಾಗಿದೆ.

Whats_app_banner