Karnataka Weather: ಬೆಂಗಳೂರು, ತುಮಕೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಧಾರವಾಡ ಸಹಿತ 12 ಜಿಲ್ಲೆಗಳಲ್ಲಿ ಇಂದು ಮಳೆ ನಿರೀಕ್ಷೆ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Weather: ಬೆಂಗಳೂರು, ತುಮಕೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಧಾರವಾಡ ಸಹಿತ 12 ಜಿಲ್ಲೆಗಳಲ್ಲಿ ಇಂದು ಮಳೆ ನಿರೀಕ್ಷೆ

Karnataka Weather: ಬೆಂಗಳೂರು, ತುಮಕೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಧಾರವಾಡ ಸಹಿತ 12 ಜಿಲ್ಲೆಗಳಲ್ಲಿ ಇಂದು ಮಳೆ ನಿರೀಕ್ಷೆ

Karnataka Weather Updates: ಕರ್ನಾಟಕದ 12 ಜಿಲ್ಲೆಗಳಲ್ಲಿ ಮಂಗಳವಾರ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯು ನೀಡಿದೆ.

ಕರ್ನಾಟಕದ ನಾನಾ ಭಾಗಗಳಲ್ಲಿ ಮಂಗಳವಾರ ಸಾಧಾರಣ ಮಳೆಯಾಗುವ ಸೂಚನೆಯಿದೆ.
ಕರ್ನಾಟಕದ ನಾನಾ ಭಾಗಗಳಲ್ಲಿ ಮಂಗಳವಾರ ಸಾಧಾರಣ ಮಳೆಯಾಗುವ ಸೂಚನೆಯಿದೆ.

Karnataka Weather Updates: ಕರ್ನಾಟಕದ ಬೆಂಗಳೂರು, ಧಾರವಾಡ, ದಕ್ಷಿಣ ಕನ್ನಡ, ಚಿತ್ರದುರ್ಗ, ಉತ್ತರ ಕನ್ನಡ, ಕೋಲಾರ ಸಹಿತ 12 ಜಿಲ್ಲೆಗಳಲ್ಲಿ 2024ರ ಡಿಸೆಂಬರ್‌ 10ರ ಮಂಗಳವಾರದದು ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ. ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾದರೆ, ಇನ್ನಷ್ಟು ಭಾಗಗಳಲ್ಲಿ ಹಗುರವಾಗಿ ಮಳೆಯಾಗಬಹುದು ಎಂದು ದೈನಂದಿನ ವರದಿಯಲ್ಲಿ ತಿಳಿಸಲಾಗಿದೆ. ಒಂದು ದಿನದ ಬಿಡುವಿನ ಬಳಿಕ ಅಂದರೆ ಗುರುವಾರ ಹಾಗೂ ಶುಕ್ರವಾರ ಬೆಂಗಳೂರು ಸಹಿತ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನೂ ನೀಡಲಾಗಿದೆ. ಚಿಕ್ಕಮಗಳೂರು, ಚಾಮರಾಜನಗರ, ವಿಜಯಪುರ ಸಹಿತ ಹಲವು ಜಿಲ್ಲೆಗಳಲ್ಲಿ ಬೆಳಗಿನ ಮಂಜಿನ ವಾತಾವರಣ ಹಾಗೂ ಚಳಿ ಮುಂದುವರಿದಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಳೆ ಹೇಗಿದೆ

ಮಂಗಳವಾರದಂದು ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು. ಒಳನಾಡಿನ ಕೆಲವು ಭಾಗಗಳಲ್ಲಿ ಮಂಜಿನ ವಾತಾವರಣವೂ ಮಂಗಳವಾರ ಕಾಣಿಸಿಕೊಳ್ಳಲಿದೆ.

ಬುಧವಾರದಂದು ಕರ್ನಾಟಕದ ಎಲ್ಲಾ ಭಾಗಗಳಲ್ಲೂ ಒಣ ಹವಾಮಾನವು ಇರಲಿದೆ.

ಆದರೆ ಗುರುವಾರ ಹಲವು ಕಡೆ ಭಾರೀ ಮಳೆ ಮುನ್ಸೂಚನೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬಳ್ಳಾರಿ. ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ. ಉತ್ತರ ಕನ್ನಡ ಜಿಲ್ಲೆಯ ಒಂದೆರೆಡು ಕಡೆ ಹಗುರ ಮಳೆಯಾಗಲಿದೆ.

ಶುಕ್ರವಾರದಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಸೂಚನೆಗಳಿವೆ.

ಅಲ್ಲಲ್ಲಿ ಮಳೆ

ಕರ್ನಾಟಕದಲ್ಲಿ ಸೋಮವಾರವೂ ಮಳೆಯಾಗಿದೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಅತ್ಯಧಿಕ 6 ಸೆ.ಮೀ ಮಳೆಯಾಗಿದೆ. ಪುತ್ತೂರು, ಧಾರವಾಡದ ಅಣ್ಣಿಗೇರಿ, ವಿಜಯನಗರ ಜಿಲ್ಲೆಯ ಹರಪನಹಳ್ಳಿ, ದಕ್ಷಿಣ ಕನ್ನಡದ ಉಪ್ಪಿನಂಗಡಿ, ಧರ್ಮಸ್ಥಳ, ಮುಲ್ಕಿ, ಪಣಂಬೂರು, ಮಂಗಳೂರು ನಗರ, ಬೆಳಗಾವಿ ಜಿಲ್ಲೆಯ ಬೈಲಹೊಂಗಲ, ಯಾದಗಿರಿ ಜಿಲ್ಲೆಯ ಹುಣಸಗಿ, ಗದಗ, ರಾಯಚೂರು ಜಿಲ್ಲೆ ಮುದಗಲ್‌, ಬಾಗಲಕೋಟೆ ಜಿಲ್ಲೆಯ ಬಾದಾಮಿ, ಕೊಪ್ಪಳ ಜಿಲ್ಲೆಯ ಮುನಿರಾಬಾದ್‌, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು, ಜಯಪುರ, ಶೃಂಗೇರಿಗಳಲ್ಲೂ ಮಳೆಯಾದ ವರದಿಯಾಗಿದೆ.

ಚಳಿ ಹೇಗಿದೆ

ಕರ್ನಾಟಕದ ನಾನಾ ಭಾಗಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಕನಿಷ್ಠ ತಾಪಮಾನದಲ್ಲಿ 2 ಡಿಗ್ರಿ ಸೆಲ್ಸಿಯಸ್‌ ನಷ್ಟು ಕುಸಿತ ಕಾಣಲಿದೆ.

ಸೋಮವಾರದಂದು ಚಿಕ್ಕಮಗಳೂರಿನಲ್ಲಿ ಕನಿಷ್ಠ ಉಷ್ಣಾಂಶ 13.4 ಡಿಗ್ರಿ ಸೆಲ್ಸಿಯಸ್‌, ಚಾಮರಾಜನಗರದಲ್ಲಿ 16.6 ಡಿಗ್ರಿ ಸೆಲ್ಸಿಯಸ್, ಧಾರವಾಡದಲ್ಲಿ 18.6 ಡಿಗ್ರಿ ಸೆಲ್ಸಿಯಸ್‌, ವಿಜಯಪುರದಲ್ಲಿ 19.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಬೆಂಗಳೂರು ನಗರದಲ್ಲೂ 18.9 ಡಿಗ್ರಿ ಸೆಲ್ಸಿಯಸ್‌ ನಷ್ಟು ಕನಿಷ್ಠ ಉಷ್ಣಾಂಶ ಇರುವುದು ಕಂಡು ಬಂದಿದೆ.

Whats_app_banner