Karnataka Weather: ಬೆಂಗಳೂರು, ಮೈಸೂರು ಸೇರಿ 11 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಸಾಧಾರಣ ಮಳೆ; ವಿಜಯಪುರ, ಚಿಕ್ಕಮಗಳೂರಲ್ಲಿ ಭಾರೀ ಚಳಿ
Karnataka Weather: ಕರ್ನಾಟಕದ 11 ಜಿಲ್ಲೆಗಳಲ್ಲಿ ಮಂಗಳವಾರದಂದು ಸಾಧಾರಣ ಮಳೆ ಗುಡುಗು ಸಹಿತ ಆಗಬಹುದು ಎನ್ನುವ ಸೂಚನೆಯಿದೆ. ಹಲವು ಜಿಲ್ಲೆಗಳಲ್ಲಿ ಬೆಳಗಿನ ಚಳಿ ಅಧಿಕವಾಗಿದೆ.
Karnataka Weather Updates: ಮೂರು ದಿನದ ಬಿಡುವಿನ ಬಳಿಕ ಕರ್ನಾಟಕದ ಬೆಂಗಳೂರು,ಮೈಸೂರು, ಕೊಡಗು ಸಹಿತ 11 ಜಿಲ್ಲೆಗಳಲ್ಲಿ ಮಂಗಳವಾರ ಮಳೆಯಾಗಲಿದೆ. ಈ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ 2024ರ ನವೆಂಬರ್ 12ರಂದು ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವು ಕಡೆ ಗುಡುಗು ಸಹಿತ ಮಳೆ ಬೀಳಬಹುದು ಎನ್ನುವ ಮುನ್ನೆಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಚಳಿಯ ವಾತಾವರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವಿಜಯಪುರ, ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ರಾಯಚೂರು ಸೇರಿದಂತೆ ಕೆಲ ಜಿಲ್ಲೆಗಳ ಕನಿಷ್ಠ ಉಷ್ಣಾಂಶದಲ್ಲಿ ಭಾರೀ ಕುಸಿತ ಕಂಡಿದೆ. ಇದರಿಂದ ಈ ಭಾಗದಲ್ಲಿ ಬೆಳಗಿನ ವೇಳೆ ದಟ್ಟವಾದ ಚಳಿ ಅನುಭವವಾಗುತ್ತಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು,ದಾವಣಗೆರೆ, ಮಡಿಕೇರಿ, ಚಿಂತಾಮಣಿಯಲ್ಲೂ ಚಳಿ ಹೆಚ್ಚಿದೆ. ಇದು ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದೆ.
ಎಲ್ಲೆಲ್ಲಿ ಮಳೆ
ಕರ್ನಾಟಕದ ಹಲವು ಭಾಗಗಳಲ್ಲಿ ಮಂಗಳವಾರದಂದು ಮಳೆಯಾಗಲಿದೆ. ಅದರಲ್ಲೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಗುಡುಗು ಸಹಿತ ಮಳೆಯೂ ಆಗಬಹುದು.
ಅದೇ ರೀತಿ ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲೂ ಹಗುರವಾದ ಮಳೆಯಾಗಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳೂ ಇವೆ.
ಉಳಿದಂತೆ ಕರ್ನಾಟಕದ ಕರಾವಳಿ ಭಾಗದಲ್ಲಿ, ಉತ್ತರ ಒಳನಾಡಿನಲ್ಲಿ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣವೇ ಇರಲಿದೆ.
ಬೆಂಗಳೂರು ಹವಾಮಾನ
ಬೆಂಗಳೂರು ನಗರದಲ್ಲೂ ಮುಂದಿನ ಎರಡು ದಿನಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಒಣಹವೆಯೂ ಇರಲಿದೆ.
ಹಗುರದಿಂದ ಸಾಧಾರಣ ಮಳೆ ನಿರೀಕ್ಷಿಸಲಾಗಿದ್ದು ಬೆಳಗಿನ ಸಮುದಲ್ಲಿ ದಟ್ಟವಾದ ಮಂಜಿನ ವಾತಾವರಣ ಇರಲಿದೆ.
ಉಷ್ಣಾಂಶ ಹೇಗಿದೆ
ಕರ್ನಾಟಕದ ಹಲವು ಭಾಗಗಳಲ್ಲಿ ಬೆಳಗಿನ ಜಾವ ಚಳಿಯ ವಾತಾವರಣ ಕಂಡು ಬಂದಿದೆ. ವಿಶೇಷವಾಗಿ ಉತ್ತರ ಕರ್ನಾಟಕದ ವಿಜಯಪುರ, ಬೀದರ್, ಧಾರವಾಡ,ಬಾಗಲಕೋಟೆ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಕೊಂಚ ಹೆಚ್ಚೇ ಇದೆ. ಕಾರವಾರದಲ್ಲಿ ಅತಿ ಹೆಚ್ಚಿನ ಹಾಗೂ ವಿಜಯಪುರದಲ್ಲಿ ಅತೀ ಕಡಿಮೆ ಉಷ್ಣಾಂಶ ದಾಖಲಾಗಿದೆ.
ವಿಜಯಪುರದಲ್ಲಿ ಗರಿಷ್ಠ ಉಷ್ಣಾಂಶವು 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಬೀದರ್‌ನಲ್ಲಿ ಗರಿಷ್ಠ ಉಷ್ಣಾಂಶವು 29.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 15.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಧಾರವಾಡದಲ್ಲಿ ಗರಿಷ್ಠ ಉಷ್ಣಾಂಶವು 30.4 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 16.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಬಾಗಲಕೋಟೆಯಲ್ಲಿ ಗರಿಷ್ಠ ಉಷ್ಣಾಂಶವು 31.2 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 16.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಗದಗದಲ್ಲಿ ಗರಿಷ್ಠ ಉಷ್ಣಾಂಶವು 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 16.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಬೆಳಗಾವಿಯಲ್ಲಿ ಗರಿಷ್ಠ ಉಷ್ಣಾಂಶವು 29.2 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 17.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಹಾವೇರಿಯಲ್ಲಿ ಗರಿಷ್ಠ ಉಷ್ಣಾಂಶವು 30.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶವು 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 17.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಕೊಪ್ಪಳದಲ್ಲಿ ಗರಿಷ್ಠ ಉಷ್ಣಾಂಶವು 31.5 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 21.1ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶವು 33.4 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 20.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಕಾರವಾರದಲ್ಲಿ ಗರಿಷ್ಠ ಉಷ್ಣಾಂಶವು 36.4 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 23.5ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಚಿಕ್ಕಮಗಳೂರಿನಲ್ಲಿ ಗರಿಷ್ಠ ಉಷ್ಣಾಂಶವು 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 14.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶವು 30.9 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 19.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಶಿವಮೊಗ್ಗದಲ್ಲಿ ಗರಿಷ್ಠ ಉಷ್ಣಾಂಶವು 30.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 17.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ದಾವಣಗೆರೆಯಲ್ಲಿ ಗರಿಷ್ಠ ಉಷ್ಣಾಂಶವು 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶವು 31.5 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಚಿಂತಾಮಣಿಯಲ್ಲಿ ಗರಿಷ್ಠ ಉಷ್ಣಾಂಶವು 28.7 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 15.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಚಿತ್ರದುರ್ಗದಲ್ಲಿ ಗರಿಷ್ಠ ಉಷ್ಣಾಂಶವು 30.7 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 18.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಮಂಡ್ಯದಲ್ಲಿ ಗರಿಷ್ಠ ಉಷ್ಣಾಂಶವು 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 18.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಬೆಂಗಳೂರಲ್ಲಿ ಗರಿಷ್ಠ ಉಷ್ಣಾಂಶವು 29.2 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 20.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಮಂಗಳೂರಲ್ಲಿ ಗರಿಷ್ಠ ಉಷ್ಣಾಂಶವು 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 24.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಹೊನ್ನಾವರದಲ್ಲಿ ಗರಿಷ್ಠ ಉಷ್ಣಾಂಶವು 34.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 22.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಮಡಿಕೇರಿಯಲ್ಲಿ ಗರಿಷ್ಠ ಉಷ್ಣಾಂಶವು 29.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 16.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಹಾಸನದಲ್ಲಿ ಗರಿಷ್ಠ ಉಷ್ಣಾಂಶವು 29.9 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 22.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.