Karnataka Rains: ಮೈಸೂರು, ಮಲೆನಾಡು ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ; ಇನ್ನೂ 5 ದಿನ ಉಂಟು ಮಳೆ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಮೈಸೂರು, ಮಲೆನಾಡು ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ; ಇನ್ನೂ 5 ದಿನ ಉಂಟು ಮಳೆ

Karnataka Rains: ಮೈಸೂರು, ಮಲೆನಾಡು ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ; ಇನ್ನೂ 5 ದಿನ ಉಂಟು ಮಳೆ

ಕರ್ನಾಟಕದಲ್ಲಿ ಬುಧವಾರ ಮಾತ್ರವಲ್ಲದೇ ಮುಂದಿನ ಭಾನುವಾರದವರೆಗೂ ಮಲೆನಾಡು, ಹಳೆಮೈಸೂರು, ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಬಹುದು ಎನ್ನುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಕರ್ನಾಟಕದ ಹಲವು ಭಾಗಗಳಲ್ಲಿ ಬುಧವಾರ ಉತ್ತಮ ಮಳೆಯಾಗುವ ಸೂಚನೆಯಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಬುಧವಾರ ಉತ್ತಮ ಮಳೆಯಾಗುವ ಸೂಚನೆಯಿದೆ.

ಬೆಂಗಳೂರು: ಶಿವಮೊಗ್ಗ, ಚಿಕ್ಕಮಗಳೂರು,ಕೊಡಗು ಹಾಗೂ ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಗುಡುಗು ಸಹಿತ ಸುರಿಯಲಿದೆ, ಕರಾವಳಿಯ ಮೂರು ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗಬಹುದು, ಉತ್ತರ ಕರ್ನಾಟಕಜಿಲ್ಲೆಯ ನಾಲ್ಕೈದು ಜಿಲ್ಲೆಗಳಲ್ಲೂ ಸಾಧಾರಣದಿಂದ ಹಗುರ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ. ಇದಲ್ಲದೇ ಮುಂದಿನ ನಾಲ್ಕೈದು ದಿನವೂ ಕರ್ನಾಟಕದ ನಾನಾ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಇದಲ್ಲದೇ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಕುಸಿತ ಕಂಡು ಚಳಿಯ ಪ್ರಮಾಣ ಬೆಳಗಿನ ವೇಳೆ ಅಧಿಕವಾಗಬಹುದು ಎಂದು ಇಲಾಖೆಯು ವರದಿ ನೀಡಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಯಾವ ಭಾಗದಲ್ಲಿ ಮಳೆಯಾಗಲಿದೆ

ನವೆಂಬರ್ 12 ರಿಂದ ನವೆಂಬರ್ 20 ರವರೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ನವೆಂಬರ್ 12 ರಿಂದ 17 ರವರೆಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ, ಇನ್ನುಳಿದ ದಿನಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ.

ನವೆಂಬರ್ 12 ರಿಂದ ನವೆಂಬರ್ 20 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಇಂದು ಒಣ ಹವೆಯಿರುವ ಸಾಧ್ಯತೆಯಿದೆ. ನವೆಂಬರ್ 13 ರಿಂದ 16 ರವರೆಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ.

ಯಾವ ದಿನ ಎಲ್ಲೆಲ್ಲಿ

ನವೆಂಬರ್‌ 13 ರ ಬುಧವಾರ ಹಲವು ಭಾಗಗಳಲ್ಲಿ ಮಳೆಯಿದೆ. ಸುಮಾರು 12 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಮಲೆನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮೈಸೂರು, ಕೊಡಗು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯಬಹುದು. ಅದೇ ರೀಥಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಉಳಿದ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಉತ್ತರ ಕರ್ನಾಟಕದ ರಾಯಚೂರು, ಕೊಪ್ಪಳ, ಗದಗ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು. ಉತ್ತರ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಬುಧವಾರ ಇರಲಿದೆ.

ನವೆಂಬರ್‌ 14 ರ ಗುರುವಾರದಂದು ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಗುಡುಗು ಸಹಿತ ಬೀಳುವ ಸಾಧ್ಯತೆಗಳು ಅಧಿಕವಾಗಿವೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುರುವಾರ ಮಳೆಯಾಗಬಹುದು. ಬಾಗಲಕೋಟೆ,ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲಗಳ ಕೆಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಗುಡುಗು ಸಹಿತ ಆಗಬಹುದು. ಬೀದರ್‌ ಜಿಲ್ಲೆಯಾದ್ಯಂತ ಗುರುವಾರ ಒಣ ಹವೆ ಇರಲಿದೆ.

ನವೆಂಬರ್‌ 15 ಶುಕ್ರವಾರದಂದು ಮೈಸೂರು, ಚಾಮರಾಜನಗರ, ಕೊಡಗು,ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಭಾರೀ ಮಳೆ ಗುಡುಗು ಸಹಿತ ಆಗಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಶುಕ್ರವಾರ ಆಗಬಹುದು. ಗುಡುಗು ಕೂಡ ಇಲ್ಲಿ ಇರಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು. ಕರಾವಳಿಯ ಅನೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸೂಚನೆಗಳಿವೆ.

ಶನಿವಾರವೂ ಮಳೆ

ನವೆಂಬರ್‌ 16 ರ ಶನಿವಾರದಂದು ಕರಾವಳಿಯ ಎಲ್ಲಾ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ,ಚಾಮರಾಜನಗರ, ರಾಮನಗರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳು ಅಧಿಕವಾಗಿವೆ. ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘುವಾಗಿ ಮಳೆಯಾಗಲಿದೆ. ಕರ್ನಾಟಕ ಉಳಿದ ಜಿಲ್ಲಗಳಲ್ಲಿ ಒಣ ಹವೆಯುವ ಇರಲಿದೆ.

ನವೆಂಬರ್‌ 17ರ ಭಾನುವಾರದಂದು ಕರಾವಳಿ ಭಾಗದ ಜತೆಗೆ ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲ ಹಗುರದಿಂದ ಸಾಧಾರಣ ಮಳೆಯಾಗಬಹುದು. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘುವಾಗಿ ಮಳೆಯಾಗಬಹುದು. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಉಷ್ಣಾಂಶ ಕುಸಿತ

ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಈಗಾಗಲೇ ಉಷ್ಣಾಂಶದಲ್ಲಿ ಕುಸಿತ ಕಂಡು ಬೆಳಗಿನ ವೇಳೆ ಚಳಿ ಅಧಿಕವಾಗಿದೆ. ವಿಜಯಪುರ, ಬೀದರ್‌, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಗಳ ಭಾಗದಲ್ಲಿ ಚಳಿ ಮುಂದುವರಿಯಲಿದೆ.

ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಮಂಡ್ಯ, ಚಾಮರಾಜನಗರ, ಮೈಸೂರು ಭಾಗದಲ್ಲೂ ಉಷ್ಣಾಂಶದಲ್ಲಿ ಏರಿಳಿತ ಕಂಡು ಚಳಿಯ ದಟ್ಟ ಅನುಭವ ಬೆಳಗಿನ ವೇಳೆ ಆಗಲಿದೆ.

Whats_app_banner