ಕರ್ನಾಟಕ ಹವಾಮಾನ: ಶಿವಮೊಗ್ಗ, ಚಿಕ್ಕಮಗಳೂರಲ್ಲಿ ಭಾರೀ ಮಳೆ ಅಲರ್ಟ್‌, ಬೆಂಗಳೂರಲ್ಲಿ ಸಾಧಾರಣ ಮಳೆ ನಿರೀಕ್ಷೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ: ಶಿವಮೊಗ್ಗ, ಚಿಕ್ಕಮಗಳೂರಲ್ಲಿ ಭಾರೀ ಮಳೆ ಅಲರ್ಟ್‌, ಬೆಂಗಳೂರಲ್ಲಿ ಸಾಧಾರಣ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ: ಶಿವಮೊಗ್ಗ, ಚಿಕ್ಕಮಗಳೂರಲ್ಲಿ ಭಾರೀ ಮಳೆ ಅಲರ್ಟ್‌, ಬೆಂಗಳೂರಲ್ಲಿ ಸಾಧಾರಣ ಮಳೆ ನಿರೀಕ್ಷೆ

ಕರ್ನಾಟಕದ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರವು ನೀಡಿದೆ.

ಶಿವಮೊಗ್ಗ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಕಂಡು ಬಂದಿದೆ. ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಕಂಡು ಬಂದಿದೆ. ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ.

ಬೆಂಗಳೂರು: ಕರ್ನಾಟಕದ ಮಲೆನಾಡು ಭಾಗದಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಭಾರೀ ಮಳೆಯಾಗಲಿದೆ. ಎರಡೂ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ನೀಡಿದೆ. ಅಲ್ಲದೇ ಈ ಎರಡೂ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವುದರಿಂದ ಯಲ್ಲೋ ಅಲರ್ಟ್‌ ಅನ್ನು ಕೂಡ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲೂ ಮೋಡ ಕವಿದ ವಾತಾವರಣಿದ್ದು, ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಬಹುದು. ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎನ್ನುವ ಸೂಚನೆಗಳು ಇವೆ. ಚಳಿಯ ವಾತಾವರಣ ಹಲವು ಜಿಲ್ಲೆಗಳಲ್ಲಿ ಮುಂದುವರಿದಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲೆಲ್ಲಿ ಯಾವಾಗ ಮಳೆ

ಶುಕ್ರವಾರದಂದು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ ಬೀಳಿದೆ. ಅದೂ ಗುಡುಗು ಕೂಡ ಇರಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗುಡುಗು ಇರಬಹುದು. ಕರಾವಳಿ ಕರ್ನಾಟಕದ ಮೂರೂ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ, ಬೀದರ್‌, ಕಲಬುರಗಿ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಇತರೆ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.

ಶನಿವಾರದಂದು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಬಹುದು. ಉತ್ತರ ಕರ್ನಾಟಕದ ಉಳಿದ ಜಿಲ್ಲೆಗಳಲ್ಲು ಶುಷ್ಕ ಹವಾಮಾನ ಕಂಡು ಬರಲಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಗುರ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು.

ಬೆಂಗಳೂರು ಹವಾಮಾನ

ಬೆಂಗಳೂರು ಮಹಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಶುಕ್ರವಾರ ಮೋಡ ಕವಿದ ವಾತಾವರಣ ಇರಲಿದೆ. ಹೆಚ್ಚಿನ ಸ್ಥಳಗಳಲ್ಲಿ ಹಗುರವಾರ ಮಳೆಯಾಗುವ ಸಾಧ್ಯತೆಗಳು ಅಧಿಕ. ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗಹುದು. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶವು 25 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್‌ ನಷ್ಟು ಇರಲಿದೆ.

ಶನಿವಾರದಂದು ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವೇ ಕಂಡು ಬರಲಿದೆ. ಅಲ್ಲಲ್ಲಿ ಹಗುರ ಮಳೆಯನ್ನೂ ನಿರೀಕ್ಷಿಸಬಹುದು. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶವು 25 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್‌ ನಷ್ಟು ದಾಖಲಾಗಬಹುದು.

ಹವಾಮಾನ ಹೇಗಿದೆ

ಕರ್ನಾಟಕದ ಹಲವು ಭಾಗಗಳಲ್ಲಿ ಬೆಳಗಿನ ಜಾವ ಚಳಿಯ ವಾತಾವರಣ ಕಂಡು ಬಂದಿದ್ದರೂ ಉಷ್ಣಾಂಶದಲ್ಲಿ ಕೊಂಚ ಏರಿಕೆಯಾಗಿದೆ. ಅತಿ ಹೆಚ್ಚಿನ ಉಷ್ಣಾಂಶ ಮಂಗಳೂರಿನ ಪಣಂಬೂರ ಹಾಗೂ ಕಾರವಾರದಲ್ಲಿ36.4 ಡಿಗ್ರಿ ಸೆಲ್ಸಿಯಸ್‌ಹಾಗೂ ಕಡಿಮೆ ಉಷ್ಣಾಂಶ ಉತ್ತರ ಕನ್ನಡ ಜಿಲ್ಲೆಯ ಶಿರಾಲಿಯಲ್ಲಿ 18.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ವಿಜಯಪುರದಲ್ಲಿ ಗರಿಷ್ಠ ಉಷ್ಣಾಂಶವು 30 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಬೀದರ್‌ನಲ್ಲಿ ಗರಿಷ್ಠ ಉಷ್ಣಾಂಶವು 30.2 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಧಾರವಾಡದಲ್ಲಿ ಗರಿಷ್ಠ ಉಷ್ಣಾಂಶವು 30.2 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 19.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಬಾಗಲಕೋಟೆಯಲ್ಲಿ ಗರಿಷ್ಠ ಉಷ್ಣಾಂಶವು 30.8 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಗದಗದಲ್ಲಿ ಗರಿಷ್ಠ ಉಷ್ಣಾಂಶವು 30.2 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 19.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಬೆಳಗಾವಿಯಲ್ಲಿ ಗರಿಷ್ಠ ಉಷ್ಣಾಂಶವು 30 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಹಾವೇರಿಯಲ್ಲಿ ಗರಿಷ್ಠ ಉಷ್ಣಾಂಶವು 31.2 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶವು 30.6 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 22 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಕೊಪ್ಪಳದಲ್ಲಿ ಗರಿಷ್ಠ ಉಷ್ಣಾಂಶವು 29.8 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 21.1ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶವು 32.8 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 23.7 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಕಾರವಾರದಲ್ಲಿ ಗರಿಷ್ಠ ಉಷ್ಣಾಂಶವು 36.4 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 26.3ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಚಿಕ್ಕಮಗಳೂರಿನಲ್ಲಿ ಗರಿಷ್ಠ ಉಷ್ಣಾಂಶವು 28.5 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶವು30.0 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 21.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಶಿವಮೊಗ್ಗದಲ್ಲಿ ಗರಿಷ್ಠ ಉಷ್ಣಾಂಶವು 30.4 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ದಾವಣಗೆರೆಯಲ್ಲಿ ಗರಿಷ್ಠ ಉಷ್ಣಾಂಶವು 27.0 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20.0 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶವು 29.1ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20.1 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಚಿಂತಾಮಣಿಯಲ್ಲಿ ಗರಿಷ್ಠ ಉಷ್ಣಾಂಶವು 26.2 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 19.3 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಚಿತ್ರದುರ್ಗದಲ್ಲಿ ಗರಿಷ್ಠ ಉಷ್ಣಾಂಶವು 29.1 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಮಂಡ್ಯದಲ್ಲಿ ಗರಿಷ್ಠ ಉಷ್ಣಾಂಶವು 30. ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 21.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಬೆಂಗಳೂರಲ್ಲಿ ಗರಿಷ್ಠ ಉಷ್ಣಾಂಶವು 27.4 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 21.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಮಂಗಳೂರಲ್ಲಿ ಗರಿಷ್ಠ ಉಷ್ಣಾಂಶವು 36.4 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 23.7 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಹೊನ್ನಾವರದಲ್ಲಿ ಗರಿಷ್ಠ ಉಷ್ಣಾಂಶವು 35.8 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 25.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಮಡಿಕೇರಿಯಲ್ಲಿ ಗರಿಷ್ಠ ಉಷ್ಣಾಂಶವು 27.4 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ

ಹಾಸನದಲ್ಲಿ ಗರಿಷ್ಠ ಉಷ್ಣಾಂಶವು 28.8 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

Whats_app_banner