Bangalore Rains: ಬೆಂಗಳೂರಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ, ಇನ್ನೂ 2 ದಿನ ಸಾಧಾರಣ ಮಳೆ ನಿರೀಕ್ಷೆ, ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಕನ್ನಡ ಸುದ್ದಿ  /  ಕರ್ನಾಟಕ  /  Bangalore Rains: ಬೆಂಗಳೂರಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ, ಇನ್ನೂ 2 ದಿನ ಸಾಧಾರಣ ಮಳೆ ನಿರೀಕ್ಷೆ, ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Bangalore Rains: ಬೆಂಗಳೂರಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ, ಇನ್ನೂ 2 ದಿನ ಸಾಧಾರಣ ಮಳೆ ನಿರೀಕ್ಷೆ, ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು ನಗರದ ಕೆಲವು ಭಾಗದಲ್ಲಿ ಶುಕ್ರವಾರ ಮಧ್ಯಾಹ್ನದಿಂದಲೇ ಸಾಧಾರಣ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಮಳೆಯಾಗುವ ಸೂಚನೆಯಿದೆ.

ಬೆಂಗಳೂರು ನಗರದ ಹಲವು ಭಾಗಗಳಲ್ಲಿ ಶುಕ್ರವಾರ ಸಂಜೆ ಮಳೆಯಾಗುತ್ತಿದ್ದು, ಮೋಡ ಕವಿದ ವಾತಾವರಣವಿದೆ.
ಬೆಂಗಳೂರು ನಗರದ ಹಲವು ಭಾಗಗಳಲ್ಲಿ ಶುಕ್ರವಾರ ಸಂಜೆ ಮಳೆಯಾಗುತ್ತಿದ್ದು, ಮೋಡ ಕವಿದ ವಾತಾವರಣವಿದೆ.

ಬೆಂಗಳೂರು: ಬೆಂಗಳೂರು ನಗರದಲ್ಲಿ ಶುಕ್ರವಾರ ಮಧ್ಯಾಹ್ನದ ನಂತರ ಸಂಪೂರ್ಣ ಮೋಡ ಕವಿದ ವಾತಾವರಣ. ಅಲ್ಲಲ್ಲಿ ಮಳೆ ಶುರುವಾಗಿದೆ. ಕೆಲವು ಕಡೆಗೆ ಹಗುರ ಮಳೆಯಾಗುತ್ತಿದ್ದರೆ, ಇನ್ನು ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಸುರಿಯುತ್ತಿದೆ. ಒಂದಷ್ಟು ಭಾಗದಲ್ಲಿ ಗುಡುಗು ಮಿಶ್ರಿತ ಮಳೆಯೂ ಆಗುತ್ತಿದೆ. ಈಗಾಗಲೇ ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಬೆಂಗಳೂರು ಮಹಾನಗರದಲ್ಲಿ ಶುಕ್ರವಾರದಿಂದ ಮೂರು ದಿನ ಸಾಧಾರಣ ಮಳೆಯಾಗಬಹುದು ಎನ್ನುವ ಮುನ್ಸೂಚನೆಯನ್ನು ನೀಡಿದೆ. ಹಿಂಗಾರು ಮಳೆ ಬೆಂಗಳೂರು ಸಹಿತ ಹಲವು ಭಾಗಗಳಲ್ಲಿ ಈಗಾಗಲೇ ಮುಂದುವರಿದಿದೆ. ಇದರ ನಡುವೆ ಚಂಡಮಾರುತ ಪ್ರಭಾವದಿಂದಲೂ ಮಳೆಯಾಗುತ್ತಿರುವ ಮಾಹಿತಿಯೂ ಇದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬಿಬಿಎಂಪಿ ವ್ಯಾಪ್ತಿಯಲ್ಲಿ

ಬಿಬಿಎಂಪಿ ಮಳೆ ಮುನ್ಸೂಚನೆಯಂತೆ ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ವ್ಯಾಪಕವಾಗಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ವಿಪತ್ತು ನಿರ್ವಹಣಾ ಘಟಕವೂ ಮಾಹಿತಿ ನೀಡಿದೆ.

ಈಗಾಗಲೇ ಯಶವಂತಪುರ ಸಹಿತ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಸಂಜೆ ಕೆಲಸ ಮುಗಿಸಿ ಮನೆಗೆ ಹೋಗುವವರು, ಶಾಲೆ ಬಿಟ್ಟ ತಕ್ಷಣ ಮನೆಗೆ ಹೊರಟ ಮಕ್ಕಳು ಅಲ್ಲಲ್ಲಿ ಮಳೆಗೆ ಸಿಲುಕಿಕೊಂಡರು. ಅಲ್ಲಲ್ಲಿ ಸಾಧಾರಣ ಮಳೆ ಸುರಿದಿದ್ದರಿಂದ ಸಂಚಾರದಲ್ಲೂ ವ್ಯತ್ಯಯ ಉಂಟಾಯಿತು.

ಇನ್ನೂ ಎರಡು ದಿನ ಮಳೆ

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸಹಿತ ಹಲವು ಭಾಗಗಳಲ್ಲಿ ಶುಕ್ರವಾರ ಸಾಧಾರಣ ಮಳೆಯಿದೆ. ಮೈಸೂರು, ಮಂಡ್ಯ, ಕೊಡಗು, ಕೋಲಾರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮಳೆಯಿದೆ.ಕೆಲವು ಕಡೆ ಗುಡುಗು ಸಹಿತ ಮಳೆಯೂ ಆಗಿದೆ. ಬೆಳಗಾವಿ, ಗದಗ, ಧಾರವಾಡ ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆ ಶುಕ್ರವಾರ ಆಗಿದೆ.

ಶನಿವಾರದಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ಶಿವಮೊಗ್ಗ ಭಾಗದಲ್ಲೂ ಮಳೆ ಆಗಬಹುದು.

ಭಾನುವಾರದಂದೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಬಹುದು ಎನ್ನುವ ಮುನ್ಸೂಚನೆಯನ್ನೂ ನೀಡಲಾಗಿದೆ.

ಉಷ್ಣಾಂಶ ಹೇಗೆ

ಬೆಂಗಳೂರಿನಲ್ಲಿ ಇನ್ನು 48 ಗಂಟೆಗಳ ಕಾಲ ಮೋಡ ಮುಸುಕಿದ ವಾತಾವರಣವೇ ಬೆಂಗಳೂರಿನಲ್ಲಿ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಆಗಾಗ ಗುಡುಗು ಸಹಿತ ಮಳೆಯೂ ಸುರಿಯಬಹುದು. ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶದ ಪ್ರಮಾಣವು 26 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶದ ಪ್ರಮಾಣವು 21 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಡಾ.ಎನ್‌.ಪುವಿಯರಸನ್‌ ಮಾಹಿತಿ ನೀಡಿದ್ದಾರೆ.

ಸಂಚಾರ ಪೊಲೀಸರ ಸಾಥ್‌

ಶುಕ್ರವಾರ ಸುರಿದ ಮಳೆಯ ಕಾರಣ ದಿಂದ ಹೊರಮಾವು ಅಂಡರ್ ಪಾಸ್ ನಲ್ಲಿ ನೀರು ನಿಂತಿತ್ತು. ಈ ವೇಳೆ ಸಂಚಾರಕ್ಕೆ ಅಡಚಣೆಯಾಯಿತು. ಕೂಡಲೇ ಬಾಣಸವಾಡಿ ಸಂಚಾರ ಪೊಲೀಸ್‌ ಸಿಬ್ಬಂದಿ ಯವರು ಸರಾಗ ವಾಗಿ ನೀರು ಹರಿಯಲು ಅನುವು ಮಾಡಿದ್ದಾರೆ. ಇದಲ್ಲದೇ ಹಲವು ಭಾಗಗಳಲ್ಲಿ ಮಳೆಯಿಂದ ಸಂಚಾರ ಅಡಚಣೆಯಾಗಿದ್ದು ಕಂಡು ಬಂದಿತು.

Whats_app_banner