Karnataka Rains: ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ 2 ದಿನ ಸಾಧಾರಣ ಮಳೆ ನಿರೀಕ್ಷೆ: ವಾಯು ಭಾರ ಕುಸಿತದ ಪರಿಣಾಮವೂ ಇಲ್ಲ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ 2 ದಿನ ಸಾಧಾರಣ ಮಳೆ ನಿರೀಕ್ಷೆ: ವಾಯು ಭಾರ ಕುಸಿತದ ಪರಿಣಾಮವೂ ಇಲ್ಲ

Karnataka Rains: ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ 2 ದಿನ ಸಾಧಾರಣ ಮಳೆ ನಿರೀಕ್ಷೆ: ವಾಯು ಭಾರ ಕುಸಿತದ ಪರಿಣಾಮವೂ ಇಲ್ಲ

Karnataka Weather Updates ಕರ್ನಾಟಕದಲ್ಲಿ ಮುಂದಿನ ಎರಡು ದಿನ ದಕ್ಷಿಣ ಒಳನಾಡಿನ ಕೆಲವು ಕಡೆ ಸಾಧಾರಣ ಮಳೆಯಾಗಬಹುದು. ಕರಾವಳಿ ಹಾಗೂ ಉತ್ತರ ಕರ್ನಾಟಕದ ಭಾಗದಲ್ಲಿ ಒಣ ಹವೆ ಇರಲಿದೆ.

ಕರ್ನಾಟಕದ ಮಲೆನಾಡು, ಹಳೆ ಮೈಸೂರು ಭಾಗದಲ್ಲಿ ಶುಕ್ರವಾರ ಹಾಗೂ ಶನಿವಾರ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕದ ಮಲೆನಾಡು, ಹಳೆ ಮೈಸೂರು ಭಾಗದಲ್ಲಿ ಶುಕ್ರವಾರ ಹಾಗೂ ಶನಿವಾರ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಎರಡು ದಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಕ್ಷಿಣ ಒಳನಾಡಿನ ಮಲೆನಾಡು, ಮಧ್ಯ ಕರ್ನಾಟಕ ಹಾಗೂ ಹಳೆ ಮೈಸೂರು ಭಾಗದ ಅಲ್ಲಲ್ಲಿ ನವೆಂಬರ್‌ 17 ರ ಶುಕ್ರವಾರ ಹಾಗೂ ನವೆಂಬರ್‌ 18ರ ಶನಿವಾರ ಮಳೆಯಾಗಬಹುದು ಎಂದು ಭಾರತೀಯ ಹಮಾಮಾನ ಇಲಾಖೆ ತಿಳಿಸಿದೆ.

ಮಳೆಯ ಕುರಿತು ದೈನಂದಿನ ವರದಿ ಬಿಡುಗಡೆ ಮಾಡಿರುವ ಭಾರೆತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಗಳು ಬಹಳಷ್ಟು ಇವೆ. ಆದರೆ ಕರಾವಳಿಯ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ಅದೇ ರೀತಿ ಮುಂದಿನ 48 ಗಂಟೆಗಳ ಒಳಗಡೆ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಕಂಡು ಬರಲಿದೆ. ಅದೇ ರೀತಿ ಕರಾವಳಿ ಭಾಗದಲ್ಲೂ ಒಣ ಹವೆ ಇರಲಿದೆ. ಆದರೆ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಮುನ್ಸೂಚನೆ ನೀಡಲಾಗಿದೆ.

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಯಾವ ಭಾಗದಲ್ಲೂ ಗುಡುಗು ಮುನ್ನೆಚ್ಚರಿಕೆಯಿಲ್ಲ. ಅದೇ ರೀತಿ ತಾಪಮಾನ ಏರಿಕೆಯಂತಹ ಯಾವುದೇ ಸನ್ನಿವೇಶವೂ ಇರುವುದಿಲ್ಲ ಎಂದು ತಿಳಿಸಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಕಡೆ ಗುರುವಾರ ಉಷ್ಣಾಂಶದಲ್ಲಿ ಕುಸಿತ ಕಂಡು ಬಂದಿದೆ. ಅದರಲ್ಲೂ ಕರ್ನಾಟಕದ ಸಮತಟ್ಟಾದ ಪ್ರದೇಶಗಳಲ್ಲಿನ ಅತಿ ಕಡಿಮೆ ಉಷ್ಣಾಂಶವು ವಿಜಯಪುರದಲ್ಲಿ 14.5 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿದೆ.

ಬೆಂಗಳೂರು ನಗರ

ಬೆಂಗಳೂರು ನಗರದಲ್ಲಿಯೂ ಮುಂದಿನ ಎರಡು ದಿನಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಅದೇ ರೀತಿ ಉಷ್ಣಾಂಶದಲ್ಲೂ ಏರಿಕೆ ಕಾಣಲಿದೆ.

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವನ್ನು ಕಾಣಬಹುದು. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ಪರಿಸ್ಥಿತಿ ಇರಲಿದೆ. ಗರಿಷ್ಠ ಉಷ್ಣಾಂಶವು 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ನಷ್ಟಿರಲಿದೆ. ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಇದೇ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

ವಾಯುಭಾರ ಕುಸಿತ

ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತದಿಂದ ನವೆಂಬರ್‌ 19ರ ಭಾನುವಾರ ಹಾಗೂ 20ರ ಸೋಮವಾರ ದಕ್ಷಿಣ ಭಾರತದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಆದರೆ ಕರ್ನಾಟಕದಲ್ಲಿ ಇದರ ಪ್ರಭಾವ ಇರುವುದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.

ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ ಕೇಂದ್ರ ಬಂಗಾಳಕೊಲ್ಲಿ ಕೇಂದ್ರೀಕರಿಸಿಕೊಂಡು ವಾಯು ಭಾರ ಕುಸಿತ ಆಗಬಹುದು ಎನ್ನುವ ಅಂದಾಜಿದೆ. ಅದು ಬಾಂಗ್ಲಾದೇಶ ಕರಾವಳಿ ದಾಟಿಕೊಂಡು ಭಾರತ ಪ್ರವೇಶಿಸಲಿದೆ.

ನಾಗಲ್ಯಾಂಡ್‌, ಮಣಿಪುರ, ಮಿಜೋರಾಂ, ತ್ರಿಪುರ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲೂ ವಾಯುಭಾರ ಕುಸಿತದ ಪರಿಣಾಮವಾಗಿ ಶುಕ್ರವಾರ ಭಾರೀ ಮಳೆಯಾಗಬಹುದು ಎಂದು ತಿಳಿಸಲಾಗಿದೆ.

ವಾಯು ಭಾರ ಕುಸಿತದ ಪರಿಣಾಮ ಎರಡು ದಿನ ಕೇರಳ ಹಾಗೂ ತಮಿಳುನಾಡು ರಾಜ್ಯಗಳ ಕರಾವಳಿಯಲ್ಲಿ ಆಗಬಹುದು. ಕೆಲವು ಕಡೆಗಳಲ್ಲಿ ಸಾಧಾರಣಾ ಹಾಗೂ ಮತ್ತಷ್ಟು ಕಡೆ ಭಾರೀ ಮಳೆಯೂ ಈ ಎರಡೂ ರಾಜ್ಯಗಳಲ್ಲ ಆಗಬಹುದು. ಕರ್ನಾಟಕದಲ್ಲಿ ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ಪರಿಣಾಮ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

Whats_app_banner