Karnataka Weather: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆ ಉಂಟು, ಬೆಂಗಳೂರಲ್ಲಿ ಹಗುರ ಮಳೆ ನಿರೀಕ್ಷೆ-karnataka weather update bengaluru weather today september 10 rain prediction dakshina kannada shimoga udupi kub ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Weather: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆ ಉಂಟು, ಬೆಂಗಳೂರಲ್ಲಿ ಹಗುರ ಮಳೆ ನಿರೀಕ್ಷೆ

Karnataka Weather: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆ ಉಂಟು, ಬೆಂಗಳೂರಲ್ಲಿ ಹಗುರ ಮಳೆ ನಿರೀಕ್ಷೆ

Karnataka Rain Updates ಕರ್ನಾಟಕದ ಕರಾವಳಿಯ ಎರಡು ಜಿಲ್ಲೆಗಳು, ಮಲೆನಾಡು ಭಾಗದ ಎರಡು ಜಿಲ್ಲೆಗಳಲ್ಲಿ ಮಂಗಳವಾರವೂ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಣೆಯಾಗಿದೆ.

ಕರ್ನಾಟಕದಲ್ಲಿ ಮಂಗಳವಾರವೂ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸೂಚನೆಯಿದೆ.
ಕರ್ನಾಟಕದಲ್ಲಿ ಮಂಗಳವಾರವೂ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸೂಚನೆಯಿದೆ.

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳು, ಮಲೆನಾಡ ಭಾಗದ ಜಿಲ್ಲೆಗಳಲ್ಲಿ ಮಂಗಳವಾರವೂ ಮಳೆಯಾಗಲಿದೆ. ಅದೂ ಕೆಲವು ಭಾಗಗಳಲ್ಲೀ ಭಾರೀ ಮಳೆಯಾಗಬಹುದು ಎಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸತತವಾಗಿ ಸುರಿದ ಭಾರೀ ಮಳೆ ಕೊಂಚ ಬಿಡುವು ನೀಡಿದ್ದು, ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಬರಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುನ್ಸೂಚನೆ ನೀಡಿದೆ. ಬೆಂಗಳೂರು ಮಹಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲೂ ಹಗುರ ಮಳೆಯಾಗುವ ಸೂಚನೆಯಿದೆ. ಉತ್ತರ ಕರ್ನಾಟಕದ ಬೀದರ್‌, ಧಾರವಾಡ, ಗದಗ ಸಹಿತ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಕುಸಿತ ಕಂಡಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲೆಲ್ಲಿ ಮಳೆಯಾಗಲಿದೆ

ಮಂಗಳವಾರದಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಭಾಗಗಳಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳು ಅಧಿಕವಾಗಿಎ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯು ತಿಳಿಸಿದೆ.

ಮುಂದಿನ ನಾಲ್ಕೈದು ದಿನದಲ್ಲಿ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಯಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗಬಹುದು.

ಬೆಂಗಳೂರು ಹವಾಮಾನ

ಬೆಂಗಳೂರು ಮಹಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಹುತೇಕ ಮಳೆ ಪ್ರಮಾಣ ಕಡಿಮೆಯಾಗಿದೆ. ಆಗಾಗ ಹಗುರ ಮಳೆಯಾಗುತ್ತಿರುವ ವರದಿಯಾಗಿದೆ. ಈ ನಡುವೆ ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ಆಕಾಶ ಇರಲಿದೆ. ಅಲ್ಲಲ್ಲಿ ಹಗುರವಾಗಿ ಮಳೆಯಾಗಬಹುದು. ಬೆಂಗಳೂರಿನ ಗರಿಷ್ಠ ಉಷ್ಣಾಂಶವು ಗಿ 30 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಸವು 21 ಡಿಗ್ರಿ ಸೆಲ್ಸಿಯಸ್‌ ದಾಖಲಾಗಬಹುದು

ಎಲ್ಲೆಲ್ಲಿ ಮಳೆಯಾಗಿದೆ

ಕರ್ನಾಟಕದಲ್ಲಿ ಸೋಮವಾರವೂ ಉತ್ತಮ ಮಳೆ ಸುರಿದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಾಲಿಯಲ್ಲಿ ಅತಿ ಹೆಚ್ಚು ಅಂದರೆ 8 ಸೆ.ಮೀ ಮಳೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪ, ಗೋಕರ್ಣ, ಕದ್ರಾ, ಮಂಕಿ, ಕುಮಟಾ, ಕಾರವಾರ, ಯಲ್ಲಾಪುರ, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಉಪ್ಪಿನಂಗಡಿ, ಪುತ್ತೂರು, ಬೆಳ್ತಂಗಡಿ, ಪಣಂಬೂರು, ಮಂಗಳೂರು ವಿಮಾಣ ನಿಲ್ದಾಣ, ಕೊಡಗು ಜಿಲ್ಲೆಯ ಪೊನ್ನಂಪೇಟೆ,ಭಾಗಮಂಡಲ, ಉಡುಪಿ ಜಿಲ್ಲೆಯ ಕುಂದಾಪುರ, ಕೋಟ, ಕಾರ್ಕಳ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕಳಸ, ಕೊಪ್ಪ, ಕಮ್ಮರಡಿ, ಕೊಟ್ಟಿಗೆಹಾರ, ಶಿವಮೊಗ್ಗ ಜಲ್ಲೆಯ ಹುಂಚದಕಟ್ಟೆ, ತ್ಯಾಗರ್ತಿ, ಲಿಂಗನಮಕ್ಕಿಯಲ್ಲೂ ಮಳೆಯಾಗಿದೆ.

ತುಮಕೂರು ಜಿಲ್ಲೆಯ ವೈ.ಎನ್‌.ಹೊಸಕೋಟೆ, ದಾವಣಗೆರೆ ಜಿಲ್ಲೆಯ ಚನ್ನಗಿರಿ, ಚಿತ್ರದುರ್ಗ, ಯಾದಗಿರಿ ಜಿಲ್ಲೆಯ ಸೈದಾಪುರ, ಕೆಂಭಾವಿ, ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ, ಬೀದರ್‌ ಜಿಲ್ಲೆಯ ಔರಾದ್‌, ಕಲಬುರಗಿ ಜಿಲ್ಲೆಯ ಕಮಲಾಪುರ, ಸುಲೇಪೇಟೆ, ರಾಯಚೂರು ಜಿಲ್ಲೆಯ ಮಸ್ಕಿ, ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ, ಬಾದಾಮಿ, ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ಲೋಂಡಾ, ರಾಯಭಾಗ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿ ಬಿದನೂರಿನಲ್ಲೂ ಉತ್ತಮ ಮಳೆಯಾಗಿದೆ.

ಉತ್ತರದಲ್ಲಿ ಉಷ್ಣಾಂಶ ಕುಸಿತ

ಉತ್ತರ ಕರ್ನಾಟಕದ ಬೀದರ್.‌ ಧಾರವಾಡ, ಗದಗ, ಬೆಳಗಾವಿ, ಹಾವೇರಿ ಜಿಲ್ಲೆಗಳಲ್ಲಿ ಉಷ್ಣಾಂಶ ಪ್ರಮಾಣ ಕುಸಿದಿದೆ. ರಾಯಚೂರು, ಕಲಬುರಗಿಯಲ್ಲೂ ಕೊಂಚ ಇಳಿಕೆಯಾಗಿದೆ. ಬಾಗಲಕೋಟೆ, ವಜಯಪುರ ಜಿಲ್ಲೆಗಳಲ್ಲಿ ಮಾತ್ರ ಏರಿಕೆಯಾಗಿದೆ. ಬೆಳಗಾವಿಯಲ್ಲಿ ಗರಿಷ್ಠ 26.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.8 ಡಿಗ್ರಿ ಸೆಲ್ಸಿಯಸ್‌, ಬೀದರ್‌ನಲ್ಲಿ ಗರಿಷ್ಠ 28.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ22.2 ಡಿಗ್ರಿ ಸೆಲ್ಸಿಯಸ್‌, ಧಾರವಾಡದಲ್ಲಿ ಗರಿಷ್ಠ27.0 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌, ಹಾವೇರಿಯಲ್ಲಿ ಗರಿಷ್ಠ 27.0 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.6 ಡಿಗ್ರಿ ಸೆಲ್ಸಿಯಸ್‌, ಗದಗದಲ್ಲಿ ಗರಿಷ್ಠ28.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ 0 20.4 ಡಿಗ್ರಿ ಸೆಲ್ಸಿಯಸ್‌, ರಾಯಚೂರಿನಲ್ಲಿ ಗರಿಷ್ಠ 29.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22.8 ಡಿಗ್ರಿ ಸೆಲ್ಸಿಯಸ್‌, ಕೊಪ್ಪಳದಲ್ಲಿ ಗರಿಷ್ಠ 29.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ24 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ವಿಜಯಪುರದಲ್ಲಿ ಗರಿಷ್ಠ31.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ18.5 ಡಿಗ್ರಿ ಸೆಲ್ಸಿಯಸ್‌, ಬಾಗಲಕೋಟೆಯಲ್ಲಿ ಗರಿಷ್ಠ 32.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ22.3ಡಿಗ್ರಿ ಸೆಲ್ಸಿಯಸ್‌, ಕಲಬುರಗಿಯಲ್ಲಿ ಗರಿಷ್ಠ 31.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ22. ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.

mysore-dasara_Entry_Point