ಚಾಮರಾಜನಗರ, ಚಿಕ್ಕಮಗಳೂರು, ಶಿರಾಲಿ, ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ಕುಸಿತ; ಬೆಂಗಳೂರಲ್ಲಿ ಹೇಗಿದೆ ಹವಾಮಾನ
ಕರ್ನಾಟಕದ ಹಲವು ಭಾಗಗಳಲ್ಲಿ ನಿಧಾನವಾಗಿ ಚಳಿ ಪ್ರಮಾಣ ಅಧಿಕವಾಗುತ್ತಿದೆ. ಬೆಳಿಗ್ಗೆ ಸಮಯದಲ್ಲಿ ಚಳಿಯ ಅನುಭವ ಹೆಚ್ಚಾಗಿದೆ. ಮಳೆ ಪ್ರಮಾಣವೂ ಬಹುತೇಕ ಕಡೆ ತಗ್ಗಿದೆ.
ಬೆಂಗಳೂರು: ಕರ್ನಾಟಕ ಕರಾವಳಿ, ಮಲೆನಾಡು ಸೇರಿದಂತೆ ಬಹುತೇಕ ಎಲ್ಲಾ ಭಾಗದಲ್ಲೂ ಒಂದು ವಾರದಿಂದ ಮಳೆ ಪ್ರಮಾಣ ಕಡಿಮೆಯಾಗಿದ್ದು. ನಿಧಾನವಾಗಿ ಚಳಿ ಏರ ತೊಡಗಿದೆ. ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಹಾಗು ಹಳೆ ಮೈಸೂರು ಭಾಗದ ಕೆಲವೆಡೆ ಕನಿಷ್ಠ ಉಷ್ಣಾಂಶದಲ್ಲಿ ಕುಸಿತ ಕಂಡು ಬಂದಿದೆ. ಇದರಿಂದ ಬೆಳಿಗ್ಗೆ ಹಾಗೂ ರಾತ್ರಿ ವೇಳೆಯಲ್ಲಿ ಚಾಮರಾಜನಗರ, ಚಿಕ್ಕಮಗಳೂರು, ವಿಜಯಪುರ, ಉತ್ತರ ಕನ್ನಡ ಜಿಲ್ಲೆಯ ಶಿರಾಲಿ ಸಹಿತ ಹಲವು ಕಡೆಗಳಲ್ಲಿ ಚಳಿಯ ವಾತಾವರಣದ ಅನುಭವ ದಟ್ಟವಾಗಿದೆ. ಬೆಂಗಳೂರಿನಲ್ಲೂ ಹಗಲು ಬಿರು ಬಿಸಿಲಿನ ವಾತಾವರಣವಿದ್ದರೆ, ರಾತ್ರಿ ವೇಳೆಗೆ ಚಳಿಯ ಪ್ರಮಾಣ ಹೆಚ್ಚಾಗಿದೆ. ಗುರುವಾರವೂ ಕರ್ನಾಟಕದ ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರವು ನೀಡಿದೆ.
ಚಳಿಯ ಅನುಭವ ಎಲ್ಲೆಲ್ಲಿ
ಕರ್ನಾಟಕದ ಹಲವು ಭಾಗಗಳಲ್ಲಿ ಬೆಳಿಗ್ಗೆಯ ಹೊತ್ತಿಗೆ ಚಳಿಯ ಅನುಭವವಾದರೆ. ಆನಂತರ ಬಿರು ಬಿಸಿಲಿನ ಸನ್ನಿವೇಶ ಕಂಡು ಬರುತ್ತಿದೆ.
ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶವು 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 16.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಉತ್ತರ ಕನ್ನಡದ ಶಿರಾಲಿಯಲ್ಲಿದಲ್ಲಿ ಗರಿಷ್ಠ ಉಷ್ಣಾಂಶವು 31.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 17.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ ಗರಿಷ್ಠ ಉಷ್ಣಾಂಶವು 26.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 17.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ವಿಜಯಪುರದಲ್ಲಿ ಗರಿಷ್ಠ ಉಷ್ಣಾಂಶವು 31.2 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 17.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಶಿವಮೊಗ್ಗದಲ್ಲಿ ಗರಿಷ್ಠ ಉಷ್ಣಾಂಶವು 29.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 18.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಚಿಂತಾಮಣಿಯಲ್ಲಿ ಗರಿಷ್ಠ ಉಷ್ಣಾಂಶವು 31.1 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 19.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಧಾರವಾಡದಲ್ಲಿ ಗರಿಷ್ಠ ಉಷ್ಣಾಂಶವು 29.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶವು 33.3 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 23.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಳಗಾವಿಯಲ್ಲಿ ಗರಿಷ್ಠ ಉಷ್ಣಾಂಶವು 29.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 17.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ದಾವಣಗೆರೆಯಲ್ಲಿ ಗರಿಷ್ಠ ಉಷ್ಣಾಂಶವು 32.0 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 19 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮಳೆ ಹೇಗಿದೆ
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುರುವಾರದಂದು ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗು ಸಾಧ್ಯತೆಗಳು ಹೆಚ್ಚಾಗಿವೆ. ಕರ್ನಾಟಕದ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಕಂಡು ಬರಲಿದೆ.
ಮುಂದಿನ ಎರಡು ದಿನಗಳಲ್ಲಿ ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಮಳೆ ಎಲ್ಲಿ ಆಗಿದೆ
ಕರ್ನಾಟಕದ ಕರಾವಳಿಯ ಕೆಲವು ಸ್ಥಳಗಳಲ್ಲಿ ಹಾಗೂ ಒಳನಾಡಿನ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಬುಧವಾರ ಮಳೆಯಾದ ವರದಿಯಾಗಿದೆ. ಅದರಲ್ಲೂ ಉತ್ತರ ಕನ್ನಡ ಜಿಲೆಯ ಮಂಕಿಯಲ್ಲಿ ಅಧಿಕ 6 ಸೆ.ಮೀ ಮಳೆಯಾಗಿದೆ. ಹೊನ್ನಾವರದಲ್ಲೂ ಮಳೆಯಾಗಿದೆ. ಚಿತ್ರದುರ್ಗ ಜಿಲ್ಲೆಯ ಬಿ.ದುರ್ಗದಲ್ಲಿ ಉತ್ತಮ ಮಳೆ ಸುರಿದ ವರದಿಯಾಗಿದೆ.
ಬೆಂಗಳೂರು ಹವಾಮಾನ
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದನಗಲ ಕಾಲ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಒಣ ಹವಾಮಾನದ ಸಾಧ್ಯತೆಗಳು ಅಧಿಕವಾಗಿವೆ. ಬೆಂಗಳೂರಿನ ಗರಿಷ್ಠ ಉಷ್ಣಾಂಶವು 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್ ದಾಖಲಾಗಬಹುದು.