ಕಲಬುರಗಿ, ರಾಯಚೂರು, ಬಳ್ಳಾರಿ, ಕೋಲಾರ ಸಹಿತ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ಅಲರ್ಟ್; ಬಾಗಲಕೋಟೆ ಸಹಿತ ಹಲವೆಡೆ ಬಿರುಬಿಸಿಲು
ಕರ್ನಾಟಕದ ಉತ್ತರ ಭಾಗದಲ್ಲಿ ಭಾನುವಾರ ಉತ್ತಮ ಮಳೆಯಾಗುವ ಸೂಚನೆಯಿದೆ. ಅಲ್ಲದೇ ಬಿರುಬಿಸಿಲಿನ ವಾತಾವರಣವೂ ಕೆಲವು ಜಿಲ್ಲೆಗಳಲ್ಲಿ ಕಂಡು ಬಂದಿದೆ. ದಕ್ಷಿಣ ಕರ್ನಾಟಕದಲ್ಲಿ ಹೆಚ್ಚಿನ ಭಾಗಗಳಲ್ಲಿ ಮಳೆ ಇಲ್ಲ.
ಬೆಂಗಳೂರು: ಕರ್ನಾಟಕದ ಕೆಲವು ಕಡೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದ್ದು, ಭಾನುವಾರವೂ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉತ್ತರ ಕರ್ನಾಟಕದ 6 ಜಿಲ್ಲೆಗಳು ಹಾಗೂ ದಕ್ಷಿಣ ಕರ್ನಾಟಕದ 3 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಒಂಬತ್ತೂ ಜಿಲ್ಲೆಗಳಲ್ಲೂ ಯಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಎರಡು ವಾರಗಳಿಂದ ಮಳೆ ಪ್ರಮಾಣ ಕಡಿಮೆಯಾಗಿತ್ತಾದರೂ ಮುಂದಿನ ಮೂರು ದಿನ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರವು ಮುನ್ಸೂಚನೆಯನ್ನು ನೀಡಿದೆ. ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ರಾಯಚೂರು ಜಿಲ್ಲೆಗಳು, ದಕ್ಷಿಣ ಕರ್ನಾಟಕದ ಹಾಸನ, ಮಂಡ್ಯ, ಮೈಸೂರಲ್ಲಿ ಬಿರು ಬಿಸಿಲಿನ ವಾತಾವರಣ ಕಂಡು ಬಂದಿದೆ. ಬೆಂಗಳೂರಲ್ಲೂ ಬಿಸಿಲಿನ ವಾತಾವರಣವಿದ್ದರೂ ಅಲ್ಲಲ್ಲಿ ಹಗುರವಾಗಿ ಮಳೆಯಾಗಬಹುದು.
ಎಲ್ಲೆಲ್ಲಿ ಮಳೆ
ಕರ್ನಾಟಕದ ಹಲವು ಭಾಗಗಳಲ್ಲಿ ಭಾನುವಾರ ಮಳೆಯಾಗಲಿದೆ. ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು,ಬಳ್ಳಾರಿ, ಯಾದಗಿರಿ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಭಾರೀ ಮಳೆ ಗುಡುಗು ಸಹಿತ ಆಗುವ ಸೂಚನೆಯಿದೆ. ಕೋಲಾರ, ತುಮಕೂರು ಹಾಗೂ ಚಿಕ್ಕ ಬಳ್ಳಾಪುರ ಜಿಲ್ಲೆಗಳಲ್ಲೂ ಕೂಡ ಗುಡುಗು ಸಹಿತ ಭಾರೀ ಮಳೆ ಸುರಿಯಬಹುದು. ಈ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರವು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಸಾಧಾರಣೆ ಮಳೆಯಾಗಲಿದ್ದು. ಗುಡುಗಿನ ವಾತಾವರಣವೂ ಕಂಡು ಬರಲಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಗುಡುಗು ಸಹಿತ ಆಗಬಹುದು ಎಂದು ಸೂಚನೆ ನೀಡಲಾಗಿದೆ.
ಮುಂದಿನ ಮೂರು ದಿನಗಳ ಕಾಲ ಉತ್ತರಕರ್ನಾಟಕ. ದಕ್ಷಿಣ ಕರ್ನಾಟಕದ ಕೆಲವು ಭಾಗ ಹಾಗೂ ಕರಾವಳಿ ಭಾಗದಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆಯಾಗಿದೆ
ಶನಿವಾರವೂ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆಯೇ ಆಗಿದೆ. ಬೀದರ್ ಚಿಟಗುಪ್ಪದಲ್ಲಿ ಅತಿ ಹೆಚ್ಚು 7 ಸೆ.ಮೀ ಮಳೆ ಸುರಿದಿದೆ. ಉಡುಪಿ ನಗರ, ಬೀದರ್ ಜಿಲ್ಲೆಯ ಹುಮ್ನಾಬಾದ್, ಮಂಠಾಳ, ದಕ್ಷಿಣ ಕನ್ನಡದ ಪಣಂಬೂರು, ಮಾಣಿ, ಮೂಲ್ಕಿ, ವಿಜಯಪುರ ಜಿಲ್ಲೆಯ ತಿಕೋಟಾ, ನಾಲತವಾಡ, ವಿಜಯಪುರ ನಗರ, ಯಾದಗಿರಿ ಜಿಲ್ಲೆಯ ಕೆಂಬಾವಿಯಲ್ಲೂ ಉತ್ತಮ ಮಳೆಯಾಗಿದೆ.
ಬೆಂಗಳೂರು ಹವಾಮಾನ
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ ಎರಡು ದಿನ ಸಾಮಾನ್ಯವಾಗಿ ಮೋಡ ಕವಿದ ವಾತಾವರವೇ ಕಂಡು ಬರಲಿಎ. ಅಲ್ಲಲ್ಲಿ ಹಗುರವಾಗಿ ಮಳೆ ಸುರಿಯಬಹುದು. ಬೆಂಗಳೂರಿನ ಗರಿಷ್ಠ ತಾಪಮಾನವು 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 21 ಡಿಗ್ರಿ ಸೆಲ್ಸಿಯಸ್ ಇರಬಹುದು.
ಬಹುಪಾಲು ಬಿರು ಬಿಸಿಲು
ಕರ್ನಾಟಕದ ಹಲವು ಭಾಗಗಳಲ್ಲಿ ಬಿಸಿಲಿನ ವಾತಾವರಣವೇ ಶನಿವಾರ ಕಂಡು ಬಂದಿದೆ. ಬಾಗಲಕೋಟೆಯಲ್ಲಿ ಅತ್ಯಧಿಕ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 34.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23.2ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ವಿಜಯಪುರದಲ್ಲಿ ಗರಿಷ್ಠ ಉಷ್ಣಾಂಶ 33.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 18.4ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಗದಗದಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಚಿತ್ರದುರ್ಗದಲ್ಲಿ ಗರಿಷ್ಠ ಉಷ್ಣಾಂಶ 31.1 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20.6ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೀದರ್ ನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಕೊಪ್ಪಳದಲ್ಲಿ ಗರಿಷ್ಠ ಉಷ್ಣಾಂಶ 33.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಧಾರವಾಡದಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಳಗಾವಿಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಹಾವೇರಿಯಲ್ಲಿ ಗರಿಷ್ಠ ಉಷ್ಣಾಂಶ 28.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಹಾಸನದಲ್ಲಿ ಗರಿಷ್ಠ ಉಷ್ಣಾಂಶ 33.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಂಗಳೂರಲ್ಲಿ ಗರಿಷ್ಠ ಉಷ್ಣಾಂಶ 31.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21.1ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮೈಸೂರಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮಂಡ್ಯದಲ್ಲಿ ಗರಿಷ್ಠ ಉಷ್ಣಾಂಶ 32.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21.3ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ದಾವಣಗೆರೆಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶ 31.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 19.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 17.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 17.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮಡಿಕೇರಿಯಲ್ಲಿ ಗರಿಷ್ಠ 28.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 18ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಚಿಂತಾಮಣಿಯಲ್ಲಿ ಗರಿಷ್ಠ ಉಷ್ಣಾಂಶ 31.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 30.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 33.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.