Karnataka Weather: ಉತ್ತರ ಕರ್ನಾಟಕ, ಕರಾವಳಿ, ಮಲೆನಾಡಿನಲ್ಲಿ ಇಂದು ಭಾರೀ ಮಳೆ, 11 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್
ಕನ್ನಡ ಸುದ್ದಿ  /  ಕರ್ನಾಟಕ  /  Karnataka Weather: ಉತ್ತರ ಕರ್ನಾಟಕ, ಕರಾವಳಿ, ಮಲೆನಾಡಿನಲ್ಲಿ ಇಂದು ಭಾರೀ ಮಳೆ, 11 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್

Karnataka Weather: ಉತ್ತರ ಕರ್ನಾಟಕ, ಕರಾವಳಿ, ಮಲೆನಾಡಿನಲ್ಲಿ ಇಂದು ಭಾರೀ ಮಳೆ, 11 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್

Karnataka Rain ಕರ್ನಾಟಕದಲ್ಲಿ ಮಳೆಯ ಪ್ರಭಾವ ಬಹುತೇಕ ಜಿಲ್ಲೆಗಳಲ್ಲಿ ಕಂಡು ಬಂದಿದೆ. ಹದಿನೇಳು ಜಿಲ್ಲೆಗಳಲ್ಲಿ ಭಾನುವಾರ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

ಮಳೆ ಕರ್ನಾಟಕದ ಹಲವು ಜಿಲ್ಲೆಗಳಿಗೆ ವಿಸ್ತರಣೆಯಾಗುತ್ತಲೇ ಇದೆ.
ಮಳೆ ಕರ್ನಾಟಕದ ಹಲವು ಜಿಲ್ಲೆಗಳಿಗೆ ವಿಸ್ತರಣೆಯಾಗುತ್ತಲೇ ಇದೆ.

ಬೆಂಗಳೂರು: ಕರ್ನಾಟಕದ ಉತ್ತರ ಭಾಗದಲ್ಲೂ ಮಳೆ( Karnataka Rains) ಮತ್ತೆ ಜೋರಾಗಿದೆ. ಮಲೆನಾಡು ಹಾಗೂ ಕರಾವಳಿ ಭಾಗದ ಜತೆಗೆ ಉತ್ತರ ಕರ್ನಾಟಕದ ಆರು ಜಿಲ್ಲೆಗಳಲ್ಲೂ ಸೆಪ್ಟಂಬರ್‌ 1ರ ಭಾನುವಾರದಂದು ಭಾರೀಯಿಂದ ಅತೀ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರ ( IMD Bangalore Center) ನೀಡಿದೆ. ಮಲೆನಾಡಿನ ಎರಡು, ಕರಾವಳಿಯ ಮೂರು ಜಿಲ್ಲೆಗಳು ಸೇರಿ ಒಟ್ಟು 11 ಜಿಲ್ಲೆಗಳಲ್ಲೀ ಭಾರೀಯಿಂದ ಅತೀ ಭಾರೀ ಮಳೆ ಸುರಿಯಬಹುದು. ಇದಲ್ಲದೇ ಬೆಳಗಾವಿ, ಧಾರವಾಡ, ಗದ, ಬಳ್ಳಾರಿ, ವಿಜಯನಗರ, ದಾವಣಗೆರೆ, ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸೂಚನೆಗಳಿದ್ದು, ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ಮಾಹಿತಿಯಿದೆ. ಚಳಿಯ ವಾತಾವರಣ ದಕ್ಷಿಣ ಕರ್ನಾಟಕದ ಹಲವು ಭಾಗಗಳಲ್ಲಿ ಮುಂದುವರಿದಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲೆಲ್ಲಿ ಮಳೆ

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಿಂದ ಅತೀ ಭಾರೀ ಮಳೆ ಭಾನುವಾರ ಸುರಿಯುವ ಮುನ್ಸೂಚನೆ ನೀಡಲಾಗಿದೆ. ಮಲೆನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಅತೀ ಭಾರೀ ಮಳೆಯಾಗಬಹುದು.

ಉತ್ತರ ಕರ್ನಾಟಕದ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಭಾರೀಯಿಂದ ಅತೀ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಈ ಎಲ್ಲಾ ಜಿಲ್ಲೆಗಳಲ್ಲೂ ಆರೆಂಜ್‌ ಅಲರ್ಟ್‌ ಮುನ್ಸೂಚನೆ ನೀಡಲಾಗಿದೆ.

ಬೆಳಗಾವಿ, ಧಾರವಾಡ, ಗದಗ, ಬಳ್ಳಾರಿ ಹಾಗೂ ವಿಜಯನಗರ, ದಾವಣಗೆರೆ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಎಲ್ಲಾ ಜಿಲ್ಲೆಗಳಲ್ಲೂ ಗಾಳಿಯ ವೇಗವೂ ಹೆಚ್ಚು ಇರುವ ಸೂಚನೆಯಿದೆ. ಉತ್ತರ ಕರ್ನಾಟಕದ ಉಳಿದ ಜಿಲ್ಲೆಗಳ ಕೆಲ ಸ್ಥಳ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಕೆಲವು ಕಡೆಗೆ ಆಗಬಹುದು.

ಕರಾವಳಿ ಭಾಗದಲ್ಲಿ ಗಾಳಿಯ ವೇಗವೂ ಅತಿಯಾಗಿ ಇರುವ ಸಾಧ್ಯತೆ ಇರುವುದರಿಂದ ಮೀನುಗಾರರು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.

ಬೆಂಗಳೂರು ಹವಾಮಾನ

ಬೆಂಗಳೂರು ಮಹಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆಯಾಗಬಹುದು ಎಂದು ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.

ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮಿ ಇರಬಹುದು, ಉಷ್ಣಾಂಶದಲ್ಲೂ ವ್ಯತ್ಯಾಸವಾಗಲಿದೆ. ಭಾನುವಾರ ಗರಿಷ್ಠ ಉಷ್ಣಾಂಶವು 27 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್‌ ಇರಬಹುದು. ಸೋಮವಾರ ಗರಿಷ್ಠ ಉಷ್ಣಾಂಶದಲ್ಲಿ ಒಂದು ಡಿಗ್ರಿಯಷ್ಟು ಏರಿಕೆ ಕಾಣಬಹುದು.

ಹೆಚ್ಚು ಮಳೆಯಾದ ಪ್ರದೇಶ

ಕರ್ನಾಟಕದಲ್ಲಿ ಶಿವಮೊಗ್ಗದ ಆಗುಂಬೆಯಲ್ಲಿ ಅತೀ ಹೆಚ್ಚು ಅಂದರೆ 9 ಸೆ.ಮೀ ಮಳೆಯಾಗಿದೆ.

ದಕ್ಷಿಣ ಕನ್ನಡದ ಧರ್ಮಸ್ಥಳ, ಬೆಳ್ತಂಗಡಿ, ಸುಳ್ಯ, ಮಾಣಿ, ಉಪ್ಪಿನಂಗಡಿ, ಮೂಲ್ಕಿ, ಮಂಗಳೂರು, ಕೊಡಗಿನ ಭಾಗಮಂಡಲ, ನಾಪೊಕ್ಲು, ಹಾರಂಗಿ, ಸೋಮವಾರಪೇಟೆ, ಬೆಂಗಳೂರು ವಿಮಾನ ನಿಲ್ದಾಣ ಪ್ರದೇಶದಲ್ಲೂ ಮಳೆಯಾದ ವರದಿಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕದ್ರಾ, ಮಂಕಿ, ಗೇರುಸೊಪ್ಪ, ಕುಮಟಾ, ಜಗಲ್‌ಬೆಟ್‌, ಕಾರವಾರ, ಉಡುಪಿ, ಸಿದ್ದಾಪುರ, ಕಾರ್ಕಳ, ಚಿಕ್ಕಮಗಳೂರಿನ ಕೊಪ್ಪ, ಶೃಂಗೇರಿ, ಕಳಸ, ಕಮ್ಮರಡಿ, ಬಾಳೆ ಹೊನ್ನೂರು, ಕೊಟ್ಟಿಗೆಹಾರ, ಯಾದಗಿರಿಯ ಸೈದಾಪುರ, ಶಹಾಪುರ, ಕಲಬುರಗಿಯ ಸೇಡಂ, ಬೀದರ್‌, ಹುಮನಾಬಾದ್‌, ಔರಾದ್‌, ರಾಯಚೂರಿನ ಗಬ್ಬೂರು, ಮುದಗಲ್‌, ಬಾಗಲಕೋಟೆಯ ಇಳಕಲ್‌, ಬಾದಾಮಿ, ಹಾಸನದ ಸಕಲೇಶಪುರ, ರಾಮನಗರ, ಮಾಗಡಿ ಹಾಗೂ ಚನ್ನಪಟ್ಟಣದಲ್ಲೂ ಉತ್ತಮ ಮಳೆಯಾಗಿದೆ.

Whats_app_banner