ಕರ್ನಾಟಕ ಹವಾಮಾನ: ಹಾಸನ, ಕಲಬುರಗಿ, ಮೈಸೂರು, ಬಾಗಲಕೋಟೆ, ಮಂಡ್ಯ, ಕೊಪ್ಪಳದಲ್ಲಿ ಬಿರು ಬಿಸಿಲು; ಬೆಂಗಳೂರಲ್ಲಿ ಹೇಗಿದೆ ವಾತಾವರಣ
ಕರ್ನಾಟಕದ ಬಹುತೇಕ ಜಿಲ್ಲೆಗಳ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಂಡು ಬಂದಿದೆ. ಹಾಸನ, ಕಲುಬುರಗಿ, ಮಂಡ್ಯ, ಕೊಪ್ಪಳ ಸಹಿತ ಹಲವು ಭಾಗಗಳಲ್ಲಿ ಬಿಸಿಲಿನ ಪ್ರಮಾಣ ಏರಿಕೆಯಾಗಿದೆ. ಬೆಂಗಳೂರಿನಲ್ಲೂ ಶುಷ್ಕ ಹವಾಮಾನವೇ ಇರಲಿದೆ.
ಬೆಂಗಳೂರು: ಕರ್ನಾಟಕದಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗಿರುವುದು ಬಿಟ್ಟರೆ ಈ ಬಾರಿ ಮಳೆಗಾಲದ ಅವಧಿ ಮುಗಿದಿದೆ. ಕೆಲವು ಕಡೆ ಚಳಿ ನಿಧಾನವಾಗಿ ಆವರಿಸುತ್ತಿದ್ದರೂ ಬಿಸಿಲೇ ಅಧಿಕವಾಗಿದೆ. ಉತ್ತರ ಕರ್ನಾಟಕ. ದಕ್ಷಿಣ ಕರ್ನಾಟಕ.ಕರಾವಳಿ ಜತೆಗೆ ಮಲೆನಾಡ ಭಾಗದಲ್ಲೂ ಬಿರುಬಿಸಿಲು ಕಾಣಿಸಿಕೊಂಡಿದೆ. ಹಾಸನ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಿನ ಏರಿಕೆ ಕಂಡು ಬಂದಿದೆ, ಕಲಬುರಗಿ, ಬಾಗಲಕೋಟೆ, ರಾಯಚೂರು, ಗದಗ, ಕೊಪ್ಪಳ ಭಾಗದಲ್ಲೂ ಬಿರು ಬಿಸಿಲಿನ ಸನ್ನಿವೇಶವೇ ಕಂಡು ಬಂದಿದೆ. ಚಿಕ್ಕಮಗಳೂರು, ಬೆಳಗಾವಿ, ಮಡಿಕೇರಿ, ಚಿತ್ರದುರ್ಗ ಹೊರತುಪಡಿಸಿದರೆ ಬಹುತೇಕ ಜಿಲ್ಲೆಗಳ ಗರಿಷ್ಠ ಉಷ್ಣಾಂಶವು 30 ಡಿಗ್ರಿ ಸೆಲ್ಸಿಯಸ್ ದಾಟಿದೆ. ಶುಕ್ರವಾರವೂ ಕರ್ನಾಟಕದ ಎಂಟು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣದಿಂದ ಹಗುರ ಮಳೆಯಾಗಬಹುದು ಎನ್ನುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಹೇಳಿದೆ.
ಉಷ್ಣಾಂಶ ಎಲ್ಲಿ ಹೇಗಿದೆ
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಣ ಉಷ್ಣಾಂಶದ ಪ್ರಮಾಣ ಏರಿಕೆಯಾಗಿದೆ. ವಿಜಯಪುರ ಸಹಿತ ಹಲವು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ಕುಸಿತ ಕಂಡಿದೆ.
ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 31.3 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಹಾಸನದಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮಂಡ್ಯದಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20.2ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ದಾವಣಗೆರೆಯಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಗದಗದಲ್ಲಿ ಗರಿಷ್ಠ ಉಷ್ಣಾಂಶ 32.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 24.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಳಗಾವಿಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶ 32.4 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 17.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಶಿವಮೊಗ್ಗದಲ್ಲಿ ಗರಿಷ್ಠ ಉಷ್ಣಾಂಶ 30.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಬೀದರ್‌ದಲ್ಲಿ ಗರಿಷ್ಠ ಉಷ್ಣಾಂಶ 31.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಚಿತ್ರದುರ್ಗದಲ್ಲಿ ಗರಿಷ್ಠ ಉಷ್ಣಾಂಶ 29.9 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19.6ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಚಿಕ್ಕಮಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 17.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ವಿಜಯಪುರದಲ್ಲಿ ಗರಿಷ್ಠ ಉಷ್ಣಾಂಶ 32.2 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 16.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಉತ್ತರ ಕನ್ನಡದ ಶಿರಾಲಿಯಲ್ಲಿ ಗರಿಷ್ಠ ಉಷ್ಣಾಂಶ 31.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 18.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಬಾಗಲಕೋಟೆಯಲ್ಲಿ ಗರಿಷ್ಠ ಉಷ್ಣಾಂಶ 33.4 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
ಮಳೆ ಎಲ್ಲೆಲ್ಲಿ ಆಗಬಹುದು
ಕರ್ನಾಟಕದ ಕರಾವಳಿ,ಮಲೆನಾಡು ಭಾಗದಲ್ಲಿ ಶುಕ್ರವಾರ ಸಾಧಾರಣ ಮಳೆ ಮುನ್ಸೂಚನೆಯಿದೆ. ಚಿಕ್ಕಮಗಳೂರು ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸೂಚನೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಬಹುದು. ಬೆಳಗಾವಿ, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗಬಹುದು. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮಳೆ ಇರುವುದಿಲ್ಲ. ಬದಲಿಗೆ ಎಲ್ಲೆಡೆ ಶುಷ್ಕ ಹವಾಮಾನವೇ ಇರಲಿದೆ.
ಬೆಂಗಳೂರು ಹವಾಮಾನ
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಎಲ್ಲೆಡೆ ಒಣ ಹವೆಯೇ ಇರಲಿದೆ. ಮಳೆ ಸಾಧ್ಯತೆಯಿಲ್ಲ. ಬೆಂಗಳೂರಿನ ಭಾಗದಲ್ಲಿ ಎರಡೂ ದಿನಗಳ ಕಾಲ ಗರಿಷ್ಠ ಉಷ್ಣಾಂಶವು 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್ ಇರಬಹುದು.