Karnataka Rains: ಕರ್ನಾಟಕದಲ್ಲಿ ಎರಡು ದಿನ ಗುಡುಗು, ಸಿಡಿಲಿನ ಸಹಿತ ಮಳೆ, 10 ಕ್ಕೂ ಹಚ್ಚು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಕರ್ನಾಟಕದಲ್ಲಿ ಎರಡು ದಿನ ಗುಡುಗು, ಸಿಡಿಲಿನ ಸಹಿತ ಮಳೆ, 10 ಕ್ಕೂ ಹಚ್ಚು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ

Karnataka Rains: ಕರ್ನಾಟಕದಲ್ಲಿ ಎರಡು ದಿನ ಗುಡುಗು, ಸಿಡಿಲಿನ ಸಹಿತ ಮಳೆ, 10 ಕ್ಕೂ ಹಚ್ಚು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ

ಮಳೆ ವಾತಾವರಣ ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಇರಲಿದ್ದು. ಎರಡು ದಿನ ಗುಡುಗು, ಸಿಡಿಲಿನ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಕಂಡು ಬಂದ ಮಳೆ ಮೋಡಗಳು.
ಚಾಮರಾಜನಗರ ಜಿಲ್ಲೆಯಲ್ಲಿ ಕಂಡು ಬಂದ ಮಳೆ ಮೋಡಗಳು.

ಬೆಂಗಳೂರು: ಕರ್ನಾಟಕದಲ್ಲಿ ಹಲವು ದಿನಗಳಿಂದ ಗುಡುಗು, ಸಿಡಿಲಿನ ಸಹಿತ ಭಾರೀ ಮಳೆಯಾಗುತ್ತಿದ್ದು, ಐದಾರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹಲವರು ಜೀವ ಕಳೆದುಕೊಂಡಿದ್ದಾರೆ. ಪ್ರಾಣಿಗಳೂ ಮೃತಪಟ್ಟಿವೆ. ಮನೆ, ವಾಹನಗಳು ಕೂಡ ಮಳೆಯಿಂದ ಹಾನಿಯಾಗಿವೆ. ಇನ್ನೂ ಎರಡು ದಿನ ಕರ್ನಾಟಕದಲ್ಲಿ ಇದೇ ರೀತಿ ಗುಡುಗು ಸಿಡಿಲಿನೊಂದಿಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ( IMD) ಬೆಂಗಳೂರು ಕೇಂದ್ರವು ಮುನ್ನೆಚ್ಚರಿಕೆ ನೀಡಿದೆ. ಭಾನುವಾರವೂ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಕೆಲವು ಕಡೆ ಗುಡುಗು, ಸಿಡಿಲಿನ ಮಳೆಯಾಗಿದ್ದು, ಸೋಮವಾರವೂ ಇಂತಹದ್ದೇ ವಾತಾವರಣ ಇರಲಿದೆ ಎಂದು ತಿಳಿಸಲಾಗಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಭಾನುವಾರ ರಾತ್ರಿಯೂ ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಕಲಬುರಗಿ, ಬೆಳಗಾವಿ, ಯಾದಗಿರಿ, ರಾಯಚೂರು, ಕೊಪ್ಪಳ. ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ.

ಸೋಮವಾರವೂ ದಕ್ಷಿಣ ಕನ್ನಡ, ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ಬಾಗಲಕೋಟೆ, ಗದಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಗಳು ದಟ್ಟವಾಗಿವೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಮಂಗಳವಾರದ ಮಳೆ

ಇದೇ ರೀತಿ ಮಂಗಳವಾರವೂ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೀದರ್‌, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

ಅದರಲ್ಲೂ ಭಾನುವಾರ ಸಂಜೆ ನಂತರ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸನ್ನಿವೇಶ ಇರಲಿದೆ. ಗಾಳಿಯು ಗಂಟೆಗೆ 30 ರಿಂದ 40 ಕಿ.ಮಿ.ವೇಗದಲ್ಲಿ ಸಂಚರಿಸುವ ಸಾಧ್ಯತಯಿದೆ. ಅದೇ ರೀತಿ ಸೋಮವಾರವೂ ಒಂದು ಅಥವಾ ಎರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ವಾತಾವರಣ ಕಂಡು ಬರಲಿದೆ.

ಬೆಂಗಳೂರು ಹವಾಮಾನ ಹೇಗಿದೆ

ಬೆಂಗಳೂರಿನಲ್ಲೂ ಮುಂದಿನ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದ. ಗರಿಷ್ಠ ಉಷ್ಣಾಂಶವು 36 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 23 ಡಿಗ್ರಿ ಸೆಲ್ಸಿಯಸ್‌ ನಷ್ಟು ದಾಖಲಾಗಬಹುದು ಎಂದು ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆಯು ನೀಡಿದೆ.

ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.

(This copy first appeared in Hindustan Times Kannada website. To read more like this please logon to kannada.hindustantimes.com)

Whats_app_banner