Karnataka Rains: ತುಮಕೂರು, ಉತ್ತರ ಕನ್ನಡ, ಬೆಳಗಾವಿ, ಕೋಲಾರ, ಧಾರವಾಡ ಸಹಿತ 12 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ನಿರೀಕ್ಷೆ
ಕರ್ನಾಟಕದ ಹನ್ನೆರಡು ಜಿಲ್ಲೆಗಳಲ್ಲಿ ಸೋಮವಾರವೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ.
ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ 2024ರ ಅಕ್ಟೋಬರ್ 21ರ ಸೋಮವಾರದಂದು ಭಾರೀ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ, ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ದಕ್ಷಿಣ ಕರ್ನಾಟಕದ ತುಮಕೂರು, ಕೋಲಾರ ಸೇರಿದಂತೆ ಒಟ್ಟು 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುನ್ನೆಚ್ಚರಿಕೆಯನ್ನು ನೀಡಿದೆ. ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಅನ್ನು ಕೂಡ ಘೋಷಿಸಲಾಗಿದೆ. ಎರಡು ವಾರಗಳಿಂದ ಕರ್ನಾಟಕದಲ್ಲಿ ಹಿಂಗಾರು ಮಳೆ ಜೋರಾಗಿದ್ದು. ಇನ್ನು ನಾಲ್ಕೈದು ದಿನ ಮಳೆ ಮುಂದುವರಿಯಲಿದೆ. ಹವಾಮಾನದಲ್ಲೂ ವ್ಯತ್ಯಾಸಗಳಾಗಿದ್ದು. ಕೆಲವು ಭಾಗದಲ್ಲಿ ತೀವ್ರ ಚಳಿ, ಮತ್ತೆ ಕೆಲವಡೆ ಬಿಸಿಲಿನ ವಾತಾವರಣ ಕಂಡು ಬಂದಿದೆ.
ಎಲ್ಲೆಲ್ಲಿ ಮಳೆ ಇದೆ
ಕರಾವಳಿ ಕರ್ನಾಟಕದ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಎರಡೂ ಜಿಲ್ಲೆಗಳಲ್ಲೂ ಯಲ್ಲೋ ಅಲರ್ಟ್ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು.
ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆಯಿದೆ. ಈ ನಾಲ್ಕೂ ಜಿಲ್ಲೆಗಳಲ್ಲೂ ಕೂಡ ಯಲ್ಲೋ ಅಲರ್ಟ್ ಅನ್ನು ಭಾರತೀಯ ಹವಾಮಾನ ಇಲಾಖೆ ಸೋಮವಾರಕ್ಕೆ ನೀಡಿದೆ. ಉಳಿದ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆ ಸುರಿಯಬಹುದು.
ದಕ್ಷಿಣ ಒಳನಾಡಿನ ತುಮಕೂರು, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ. ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಗುಡುಗು ಸಹಿತ ಆಗಬಹುದು. ಈ ಜಿಲ್ಲೆಗಳಲ್ಲೂ ಯಲ್ಲೋ ಅಲರ್ಟ್ ಇದೆ. ದಕ್ಷಿಣ ಭಾಗದ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.
ಇದಲ್ಲದೇ ಅಕ್ಟೋಬರ್ 22 ಹಾಗೂ 23 ರಂದು ಕೂಡ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಅಕ್ಟೋಬರ್ 22 ರಂದು ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ, ಅಕ್ಟೋಬರ್ 23ರಂದು ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ.
ಕರ್ನಾಟಕದ ಕರಾವಳಿಯಲ್ಲೂ ಗಾಳಿಯ ವೇಗ ಅತ್ಯಧಿಕವಾಗಿರಲಿದ್ದು, ಚಂಡಮಾರುತದ ಸನ್ನಿವೇಶವೂ ಇರಬಹುದು ಎಂದು ತಿಳಿಸಲಾಗಿದೆ.
ಶಿವಮೊಗ್ಗದಲ್ಲಿ ಅತ್ಯಧಿಕ ಮಳೆ
ಭಾನುವಾರದಂದು ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯಧಿಕ ಮಳೆಯಾಗಿದೆ. ರಾಮನಗರ ಜಿಲ್ಲೆಯ ಮಾಗಡಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ಮಂಡ್ಯ ಜಿಲ್ಲೆಯ ಬೆಳ್ಳೂರಿನಲ್ಲೂ ಉತ್ತಮ ಮಳೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್ ಪುರ, ತರೀಕೆರೆ, ಮೂಡಿಗೆರೆ, ಕಡೂರು, ಕೊಟ್ಟಿಗೆಹಾರ, ಶೃಂಗೇರಿ, ಕಳಸ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ತ್ಯಾಗರ್ತಿ, ಬೀದರ್ ಜಿಲ್ಲೆಯ ಔರಾದ್, ಚಿಕ್ಕಬಳ್ಳಾಪುರ, ಕೋಲಾರ, ಮಂಗಳೂರು, ಹಾವೇರಿ, ಬೆಳಗಾವಿ ಜಿಲ್ಲೆಯ ಸೇಡಬಾಳ, ಗದಗ ಜಿಲ್ಲೆಯ ಶಿರಹಟ್ಟಿ, ಕಲಬುರಗಿ ಜಿಲ್ಲೆಯ ಖಜೂರಿ, ದಾವಣಗೆರೆ ಜಿಲ್ಲೆಯ ಹೊನ್ನಾಳಿ, ಕೊಡಗಿನ ಸೋಮವಾರಪೇಟೆ, ಪೊನ್ನಂಪೇಟೆ, ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ, ನಾಗಮಂಗಲ ಉಡುಪಿ ಜಿಲ್ಲೆಯ ಕೋಟ, ಸಿದ್ದಾಪುರ, ಉಡುಪಿ, ತುಮಕೂರು ಜಿಲ್ಲೆ ಕುಣಿಗಲ್, ಹಾಸನ ಜಿಲ್ಲೆ ಶ್ರವಣ ಬೆಳಗೊಳ, ಬಾಗಲಕೋಟೆ ಜಿಲ್ಲೆ ಲೋಕಾಪುರ, ಮೈಸೂರು ಜಿಲ್ಲೆ ಹುಣಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ಧಾರವಾಡ ಜಿಲ್ಲೆ ಅಣ್ಣಿಗೇರಿ, ಕೊಪ್ಪಳ ಜಿಲ್ಲೆ ತಾವರಗೇರ, ಚಿತ್ರದುರ್ಗ ಜಿಲ್ಲೆ ಹೊಸದುರ್ಗ, ರಾಮನಗರದಲ್ಲೂ ಉತ್ತಮ ಮಳೆಯಾದ ವರದಿಯಾಗಿದೆ.
ಹವಾಮಾನ ಹೇಗಿದೆ
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಮುಂದುವರೆದರೆ, ಇನ್ನಷ್ಟು ಕಡೆ ಬಿಸಿಲ ವಾತಾವರಣವೇ ಇರಲಿದೆ
ಬೆಳಗಾವಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೀದರ್‌ನಲ್ಲಿ ಗರಿಷ್ಠ ಉಷ್ಣಾಂಶ32.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ವಿಜಯಪುರದಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 19.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 33.1 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಧಾರವಾಡದಲ್ಲಿ ಗರಿಷ್ಠ ಉಷ್ಣಾಂಶ 29.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 31.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 31.9 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮಂಗಳೂರಲ್ಲಿ ಗರಿಷ್ಠ ಉಷ್ಣಾಂಶ 32.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಚಿಕ್ಕಮಗಳೂರಲ್ಲಿ ಗರಿಷ್ಠ ಉಷ್ಣಾಂಶ 25.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 16.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.