ಕನ್ನಡ ಸುದ್ದಿ  /  Karnataka  /  Karnataka Weather Update Today Widespread Rains With Thunderstorms Bengaluru Rain May 23 Imd Weather Forecast Pcp

Karnataka Weather Today: ಇಂದಿನ ಹವಾಮಾನ ವರದಿ, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಸಾಧಾರಣ ಮಳೆ, ಉತ್ತರ ಒಳನಾಡಿನ ಕೆಲವು ಕಡೆ ಒಣಹವೆ

ಭಾರತದ ಹವಾಮಾನ ಇಲಾಖೆ (IMD)ಯ ಬೆಂಗಳೂರು ವಿಭಾಗವು (Met Centre Bengaluru) ಇಂದಿನ ಹವಾಮಾನ ವರದಿ (IMD weather forecast karnataka) ಪ್ರಕಟಿಸಿದ್ದು, ರಾಜ್ಯದ ವಿವಿಧೆಡೆ ಇಂದು ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸೂಚನೆ ನೀಡಿದೆ.

Karnataka Weather Today: ಇಂದಿನ ಹವಾಮಾನ ವರದಿ
Karnataka Weather Today: ಇಂದಿನ ಹವಾಮಾನ ವರದಿ (HT Photo/Sanchit Khanna)

ಬೆಂಗಳೂರು: ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ ವಿವಿಧೆಡೆ ಸೋಮವಾರ ಸಾಕಷ್ಟು ಮಳೆಯಾಗಿದ್ದು, ಇಂದೂ ಕೂಡ ಬಹುತೇಕ ಕಡೆ ಸಾಧಾರಣ ಮಳೆಯಾಗಲಿದೆ. ಭಾರತದ ಹವಾಮಾನ ಇಲಾಖೆ (IMD)ಯ ಬೆಂಗಳೂರು ವಿಭಾಗವು (Met Centre Bengaluru) ಇಂದಿನ ಹವಾಮಾನ ವರದಿ (IMD weather forecast karnataka) ಪ್ರಕಟಿಸಿದ್ದು, ರಾಜ್ಯದ ವಿವಿಧೆಡೆ ಇಂದು ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸೂಚನೆ ನೀಡಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಹವಾಮಾನ ವರದಿ

ಭಾನುವಾರ ಮತ್ತು ಸೋಮವಾರ ಕರಾವಳಿಯ ವಿವಿಧೆಡೆ ಮಿಂಚು ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ/ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮೇ 26ರವರೆಗೆ ಕರಾವಳಿಯ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳ ಕಾಲ ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಉಷ್ಣಾಂಶವು 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು

ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಒಣಹವೆ ಇರಲಿದೆ. ಅಂದರೆ, ಬಾಗಲಕೋಟೆ, ಬೀದರ್‌, ಕಲಬುರ್ಗಿ, ಕೊಪ್ಪಳ, ವಿಜಯಪುರಗಳಲ್ಲಿ ಒಣಹವೆ ಇರಲಿದೆ.

ಇಂದು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಯಚೂರು, ಯಾದಗಿರಿ, ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ವಿವಿದೆಡೆ ಗುಡುಗು ಮಿಂಚು ಸಹಿತ ಒಣಹವೆ ಇರಲಿದೆ. ಮುಂದಿನ 48 ಗಂಟೆಗಳ ಕಾಲ ಉತ್ತರ ಒಳನಾಡಿನಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಉಷ್ಣಾಂಶವು 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಒಳನಾಡು ಹವಮಾನ ವರದಿ

ದಕ್ಷಿಣ ಒಳನಾಡಿನ ಎಲ್ಲಾ ಕಡೆಗಳಲ್ಲಿ ಇಂದು ಗುಡುಗು ಮಿಂಚು ಸಹಿತ ಹಗುರ/ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಸಾಧಾರಣ ಮಳೆಯಾಗಲಿದೆ. ಸೋಮವಾರ ಮತ್ತು ಭಾನುವಾರ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ಇಂದಿನಿಂದ ಮೂರು ದಿನ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆ ಪ್ರಮಾಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 30ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.