ಕರ್ನಾಟಕ ಹವಾಮಾನ: ಕಲಬುರಗಿ, ಮಂಡ್ಯ, ಚಾಮರಾಜನಗರದಲ್ಲೂ ಏರಿತು ಉಷ್ಣಾಂಶದ ಪ್ರಮಾಣ, ಬೆಂಗಳೂರಲ್ಲೂ ಬಿಸಿಲು ಹೆಚ್ಚಳ
Karnataka Weather Updates: ಕಲ್ಯಾಣ ಕರ್ನಾಟಕದ ಕಲಬುರಗಿ, ಹಳೆ ಮೈಸೂರು ಭಾಗದ ಮಂಡ್ಯ, ಚಾಮರಾಜನಗರ ಭಾಗದಲ್ಲಿ ಬಿಸಿಲಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ.

Karnataka Weather Updates: ಕರ್ನಾಟಕದ ಕೆಲವು ಭಾಗಗಳಲ್ಲಿ ಈಗಲ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಂಡು ಬಂದಿದೆ. ಅದರಲ್ಲೂ ಉತ್ತರ ಕರ್ನಾಟಕದ ಕಲಬುರಗಿಯಲ್ಲಿ ಫೆಬ್ರವರಿ ಮೂರನೇ ವಾರಕ್ಕೂ ಮುನ್ನವೇ ಉಷ್ಣಾಂಶದಲ್ಲಿ ಗಣನೀಯ ಏರಿಕೆಯಾಗಿದೆ. ಕಲಬುರಗಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಉಷ್ಣಾಂಶದ ಪ್ರಮಾಣ ಈಗಲೇ 37.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮಾರ್ಚ್ ನಂತರ ಇದು ಇನ್ನೂ ಹೆಚ್ಚುವ ಮುನ್ಸೂಚನೆಯನ್ನು ನೀಡಿದೆ. ಇದಲ್ಲದೇ ಹಳೆ ಮೈಸೂರು ಭಾಗದ ಮಂಡ್ಯ ಹಾಗೂ ಚಾಮರಾಜನಗರದಲ್ಲೂ ಉಷ್ಣಾಂಶದ ಪ್ರಮಾಣ 35 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಚಾಮರಾಜನಗರದಲ್ಲಿ ಬೆಳಗಿನ ವೇಳೆ ಭಾರೀ ಚಳಿ ನಂತರ ಬಿರು ಬಿಸಿಲು ಎನ್ನುವಂತಾಗಿದೆ. ಬೆಂಗಳೂರಿನಲ್ಲೂ ನಿಧಾನವಾಗಿ ಉಷ್ಣಾಂಶದ ಪ್ರಮಾಣದಲ್ಲಿ ಹೆಚ್ಚಳ ಕಂಡು ಬರುತ್ತಿದೆ.
ಸಾಮಾನ್ಯವಾಗಿ ಕಲಬುರಗಿ ಭಾಗದಲ್ಲಿ ಪ್ರತಿ ಬೇಸಿಗೆಯಲ್ಲಿ ಉಷ್ಣಾಂಶದ ಪ್ರಮಾಣದಲ್ಲಿ ಹೆಚ್ಚಳ ಇದ್ದೇ ಇರುತ್ತದೆ. ಆದರೆ ಈ ಬಾರಿ ಬೇಗನೇ ಉಷ್ಣಾಂಶದ ಪ್ರಮಾಣದಲ್ಲಿ ಹೆಚ್ಚಳ ಕಂಡು ಬಂದಿದೆ. ಇದರಿಂದ ಬೇಸಿಗೆ ಅವಧಿಯಲ್ಲಿ ಬಿಸಿಲ ಪ್ರಮಾಣ ಈ ಬಾರಿ ಹೆಚ್ಚೇ ಇರಬಹುದು ಎನ್ನುವ ಮಾತುಗಳಿವೆ. ಶುಕ್ರವಾರದಂದು ಕಲಬುರಗಿಯಲ್ಲಿ 37 ಡಿಗ್ರಿ ಸೆಲ್ಸಿಯಸ್ ದಾಟಿದೆ. ಅದೇ ರೀತಿ ಮಂಡ್ಯ ಹಾಗೂ ಚಾಮರಾಜನಗರ ಭಾಗದಲ್ಲೂ ಗರಿಷ್ಠ ಉಷ್ಣಾಂಶವು 35 ಡಿಗ್ರಿ ಸೆಲ್ಸಿಯಸ್ ನಷ್ಟಿರುವುದು ಈ ಬಾರಿ ಬಿರುಸಿನ ಬಿಸಿಲಿನ ಮುನ್ಸೂಚನೆ ನೀಡಿದೆ.
ಸಾಮಾನ್ಯವಾಗಿ ಕಲಬುರಗಿ ಭಾಗದಲ್ಲಿ ಪ್ರತಿ ಬೇಸಿಗೆಯಲ್ಲಿ ಉಷ್ಣಾಂಶದ ಪ್ರಮಾಣದಲ್ಲಿ ಹೆಚ್ಚಳ ಇದ್ದೇ ಇರುತ್ತದೆ. ಆದರೆ ಈ ಬಾರಿ ಬೇಗನೇ ಉಷ್ಣಾಂಶದ ಪ್ರಮಾಣದಲ್ಲಿ ಹೆಚ್ಚಳ ಕಂಡು ಬಂದಿದೆ. ಇದರಿಂದ ಬೇಸಿಗೆ ಅವಧಿಯಲ್ಲಿ ಬಿಸಿಲ ಪ್ರಮಾಣ ಈ ಬಾರಿ ಹೆಚ್ಚೇ ಇರಬಹುದು ಎನ್ನುವ ಮಾತುಗಳಿವೆ. ಶುಕ್ರವಾರದಂದು ಕಲಬುರಗಿಯಲ್ಲಿ 37 ಡಿಗ್ರಿ ಸೆಲ್ಸಿಯಸ್ ದಾಟಿದೆ. ಅದೇ ರೀತಿ ಮಂಡ್ಯ ಹಾಗೂ ಚಾಮರಾಜನಗರ ಭಾಗದಲ್ಲೂ ಗರಿಷ್ಠ ಉಷ್ಣಾಂಶವು 35 ಡಿಗ್ರಿ ಸೆಲ್ಸಿಯಸ್ ನಷ್ಟಿರುವುದು ಈ ಬಾರಿ ಬಿರುಸಿನ ಬಿಸಿಲಿನ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಕಲಬುರಗಿ ಹಾಗೂ ಗದಗದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿದೆ. ಬೆಳಗಾವಿ ವಿಮಾನ ನಿಲ್ದಾಣ, ಬಾಗಲಕೋಟೆ, ಧಾರವಾಡ, ಹಾವೇರಿ, ಕೊಪ್ಪಳ. ರಾಯಚೂರಿನಲ್ಲಿ ಸಾಮಾನ್ಯಕ್ಕಿಂತಲೂ ಅಧಿಕವಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಭಾಗದಲ್ಲೂ ಉಷ್ಣಾಂಶದ ಪ್ರಮಾಣ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಅದೇ ರೀತಿ ಬೆಂಗಳೂರು, ಚಿತ್ರದುರ್ಗ, ಚಿಂತಾಮಣಿ, ಮಂಡ್ಯ, ಮೈಸೂರು ಹಾಗೂ ಉಳಿದ ಭಾಗದಲ್ಲಿ ತಾಪಮಾನದಲ್ಲಿ ಕೊಂಚ ಏರಿಕೆ ಕಂಡರೂ ಸಾಮಾನ್ಯವಾಗಿತ್ತು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ ತಿಳಿಸಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಭಾಗದ ಹೊನ್ನಾವರದ ಗರಿಷ್ಠ ತಾಪಮಾನದಲ್ಲಿ ಕುಸಿತ ಕಂಡು ಬಂದಿದ್ದರೆ, ದಕ್ಷಿಣ ಒಳನಾಡಿನ ಅಗುಂಬೆ ಹಾಗು ಚಿಕ್ಕಮಗಳೂರನಲ್ಲಿ ಗಮನಾರ್ಹ ಏರಿಕೆಯಾಗಿದೆ.
ಗರಿಷ್ಠ ತಾಪಮಾನವು ಕರಾವಳಿಯಲ್ಲಿ 33-34 ಡಿಗ್ರಿ ಸೆಲ್ಸಿಯಸ್ ಇದ್ದರೆ, ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳದಲ್ಲಿ 32-34 ಡಿಗ್ರಿ ಸೆಲ್ಸಿಯಸ್, ಕಲಬುರಗಿ, ಹಾವೇರಿ. ಗದಗ, ರಾಯಚೂರು ಭಾಗದಲ್ಲಿ 35-37 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ ಎರಡು ದಿನಗಳ ಕಾಲ ಉಷ್ಣಾಂಶದಲ್ಲಿ ಕೊಂಚ ಏರಿಕೆ ಕಾಣಬಹುದು. ಮೋಡವಿಲ್ಲದ ಶುಭ್ರ ಆಕಾಶ ಕಂಡು ಬರಲಿದ್ದು, ಬೆಳಗಿನ ಜಾವ ಕೆಲವು ಪ್ರದೇಶದಲ್ಲಿ ಮಂಜಿನ ವಾತಾವರಣ ಇರಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ಉಷ್ಣಾಂಶವು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶದ ಪ್ರಮಾಣವು 17 ಡಿಗ್ರಿ ಸೆಲ್ಸಿಯಸ್ ದಾಖಲಾಗಬಹುದು.
